ನವದೆಹಲಿ:ಇಂದು ದೇಶದಲ್ಲಿ ಸ್ಥಿರ, ನಿರ್ಭೀತ ಮತ್ತು ನಿರ್ಣಾಯಕ ಸರ್ಕಾರವಿದ್ದು, ಅದು ದೊಡ್ಡ ದೊಡ್ಡ ಕನಸುಗಳನ್ನು ನನಸಾಗಿಸುವತ್ತ ಕೆಲಸ ಮಾಡುತ್ತಿದೆ ಎಂದು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಹೇಳಿದರು.
ನಾಳೆ ಕೇಂದ್ರ ಬಜೆಟ್​ ಹಿನ್ನೆಲೆಯಲ್ಲಿ ಇಂದಿನಿಂದ ಬಜೆಟ್​ ಅಧಿವೇಶನ ಆರಂಭವಾಗಿದ್ದು, ಸಂಸತ್ತಿನ ಜಂಟಿ ಅಧಿವೇಶನವನ್ನು ಉದ್ದೇಶಿಸಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಮಾತನಾಡಿದರು.
ಇಂದು ಬಹುದೊಡ್ಡ ಬದಲಾವಣೆ ಸಂಭವಿಸಿದ್ದು, ಪ್ರತಿಯೊಬ್ಬ ಭಾರತೀಯನ ಆತ್ಮಸ್ಥೈರ್ಯ ಉತ್ತಂಗದಲ್ಲಿದ್ದು, ಇಡೀ ವಿಶ್ವ ಭಾರತವನ್ನು ನೋಡುವ ದೃಷ್ಟಿಕೋನ ಬದಲಾಗಿದೆ. ಇಂದು ದೇಶದಲ್ಲಿ ಸ್ಥಿರ, ನಿರ್ಭೀತ ಮತ್ತು ನಿರ್ಣಾಯಕ ಸರ್ಕಾರವಿದ್ದು, ಅದು ದೊಡ್ಡ ದೊಡ್ಡ ಕನಸುಗಳನ್ನು ನನಸಾಗಿಸುವತ್ತ ಕೆಲಸ ಮಾಡುತ್ತಿದೆ. ಜಮ್ಮು ಮತ್ತು ಕಾಶ್ಮೀರದಲ್ಲಿ 370ನೇ ವಿಧಿಯನ್ನು ರದ್ದುಗೊಳಿಸುವುದರಿಂದ ಹಿಡಿದು ತ್ರಿವಳಿ ತಲಾಖ್ ನಿಷೇಧದವರೆಗೂ ನನ್ನ ಸರ್ಕಾರವು ದಿಟ್ಟ ನಿರ್ಧಾರಗಳನ್ನು ತೆಗೆದುಕೊಂಡಿದೆ ಎಂದು ರಾಷ್ಟ್ರಪತಿಗಳು ಪ್ರಶಂಸಿಸಿದರು.
ಅಮೃತ ಕಾಲದ 25 ವರ್ಷಗಳ ಅವಧಿಯು ಸ್ವಾತಂತ್ರ್ಯದ ಸುವರ್ಣ ಯುಗವಾಗಿದ್ದು, ಅಭಿವೃದ್ಧಿ ಹೊಂದಿದ ಭಾರತವನ್ನು ನಿರ್ಮಿಸುವ ಸಮಯವಾಗಿದೆ. ನಾವು ಬಡತನವಿಲ್ಲದ ಭಾರತವನ್ನು, ಮಧ್ಯಮ ವರ್ಗದವರೂ ಸಮೃದ್ಧವಾಗಿರುವ ದೇಶವನ್ನು, ಸಮಾಜಕ್ಕೆ ಮತ್ತು ದೇಶಕ್ಕೆ ದಾರಿ ತೋರಿಸಲು ಯುವಕರು ಮತ್ತು ಮಹಿಳೆಯರು ಮುಂಚೂಣಿಯಲ್ಲಿ ನಿಲ್ಲುವ ಭಾರತವನ್ನು ನಿರ್ಮಿಸಬೇಕಾಗಿದೆ. ಅಲ್ಲದೆ, ದೇಶದ ಯುವಕರು ಯಾವಾಗಲೂ ಸಮಯಕ್ಕಿಂತ ಎರಡು ಹೆಜ್ಜೆ ಮುಂದಿರುವಂತಹ ಭಾರತವನ್ನು ನಾವು ನಿರ್ಮಿಸಬೇಕಾಗಿದೆ ಎಂದು ರಾಷ್ಟ್ರಪತಿಗಳು ಹೇಳಿದರು.
ನಾವು ‘ಆತ್ಮನಿರ್ಭರ್’ ಮತ್ತು ಅದರ ಮಾನವೀಯ ಕರ್ತವ್ಯಗಳನ್ನು ಪೂರೈಸುವ ಭಾರತವನ್ನು ನಿರ್ಮಿಸಬೇಕಾಗಿದೆ. 2047ರ ವೇಳೆಗೆ ನಾವು ಗತಕಾಲದ ಹೆಮ್ಮೆಯೊಂದಿಗೆ ಸಂಪರ್ಕ ಹೊಂದುವ ಮತ್ತು ಆಧುನಿಕತೆಯ ಎಲ್ಲ ಸುವರ್ಣ ಅಧ್ಯಾಯಗಳನ್ನು ಹೊಂದಿರುವಂತಹ ರಾಷ್ಟ್ರವನ್ನು ನಿರ್ಮಾಣ ಮಾಡಬೇಕಿದೆ. ಇಂದು ಭಾರತದ ಆತ್ಮಸ್ಥೈರ್ಯ ಅತ್ಯುನ್ನತ ಮಟ್ಟದಲ್ಲಿದೆ ಮತ್ತು ಜಗತ್ತು ನಮ್ಮನ್ನು ವಿಭಿನ್ನ ದೃಷ್ಟಿಕೋನದಿಂದ ನೋಡುತ್ತಿದೆ, ಭಾರತವು ಇದೀಗ ಜಗತ್ತಿಗೆ ಪರಿಹಾರಗಳನ್ನು ನೀಡುತ್ತಿದೆ ಎಂದರು.
ಜಲ ಜೀವನ್ ಮಿಷನ್ ಅಡಿಯಲ್ಲಿ ಮೂರು ವರ್ಷಗಳಲ್ಲಿ ಸುಮಾರು 11 ಕೋಟಿ ಕುಟುಂಬಗಳಿಗೆ ಕೊಳವೆ ನೀರು ಸರಬರಾಜು ಮಾಡಲಾಗಿದೆ. ಬಡ ಕುಟುಂಬಗಳು ಇದರಿಂದ ಗರಿಷ್ಠ ಪ್ರಯೋಜನ ಪಡೆಯುತ್ತಿವೆ. ನನ್ನ ಸರ್ಕಾರ ಯಾವುದೇ ತಾರತಮ್ಯವಿಲ್ಲದೆ ಸಮಾಜದ ಪ್ರತಿಯೊಂದು ವರ್ಗಕ್ಕಾಗಿ ಕೆಲಸ ಮಾಡಿದೆ. ಕಳೆದ ಕೆಲವು ವರ್ಷಗಳಲ್ಲಿ ನನ್ನ ಸರ್ಕಾರದ ಪ್ರಯತ್ನಗಳ ಫಲವಾಗಿ ಅನೇಕ ಮೂಲಭೂತ ಸೌಲಭ್ಯಗಳು ಶೇ. 100 ರಷ್ಟು ಜನಸಂಖ್ಯೆಯನ್ನು ತಲುಪಿವೆ ಎಂದು ಕೇಂದ್ರ ಸರ್ಕಾರವನ್ನು ಕೊಂಡಾಡಿದರು.
ಜಗತ್ತಿನಲ್ಲಿ ಎಲ್ಲೆಲ್ಲಿ ರಾಜಕೀಯ ಅಸ್ಥಿರತೆ ಇದೆಯೋ ಆ ದೇಶಗಳು ಇಂದು ಭಾರಿ ಬಿಕ್ಕಟ್ಟಿನಿಂದ ಸುತ್ತುವರಿದಿವೆ. ಆದರೆ, ರಾಷ್ಟ್ರೀಯ ಹಿತಾಸಕ್ತಿಯಲ್ಲಿ ನನ್ನ ಸರ್ಕಾರ ತೆಗೆದುಕೊಂಡ ನಿರ್ಧಾರಗಳಿಂದ, ಇತರ ದೇಶಗಳಿಗೆ ಹೋಲಿಸಿದರೆ ಭಾರತ ಉತ್ತಮ ಸ್ಥಾನದಲ್ಲಿದೆ. ಸಂಪೂರ್ಣ ಪಾರದರ್ಶಕತೆಯೊಂದಿಗೆ ಕೋಟಿಗಟ್ಟಲೆ ಜನರಿಗೆ 27 ಲಕ್ಷ ಕೋಟಿ ರೂಪಾಯಿಯನ್ನು ವಿವಿಧ ಯೋಜನೆಗಳ ಮೂಲಕ ಒದಗಿಸಿದೆ. ಇಂತಹ ಯೋಜನೆಗಳು ಮತ್ತು ವ್ಯವಸ್ಥೆಗಳೊಂದಿಗೆ ಭಾರತವು ಕೋವಿಡ್​ನಂತಹ ಬಿಕ್ಕಟ್ಟಿನ ಸಮಯದಲ್ಲಿ ಬಡತನ ರೇಖೆಗಿಂತ ಕೆಳಗಿಳಿಯದಂತೆ ಕೋಟಿಗಟ್ಟಲೆ ಜನರನ್ನು ಉಳಿಸಲು ಸಾಧ್ಯವಾಯಿತು ಎಂದು ವಿಶ್ವ ಬ್ಯಾಂಕ್ ವರದಿ ಹೇಳುತ್ತದೆ ಎಂದು ದ್ರೌಪದಿ ಮುರ್ಮು ಹೇಳಿದರು.(ಏಜೆನ್ಸೀಸ್​)
ಇಂದಿನ ಜಾಗತಿಕ ಆರ್ಥಿಕ ಪರಿಸ್ಥಿತಿಯಲ್ಲಿ ಇಡೀ ವಿಶ್ವವೇ ಭಾರತದ ಬಜೆಟ್​ ಎದುರು ನೋಡುತ್ತಿದೆ: ಪ್ರಧಾನಿ ಮೋದಿ

ವಿಧಾನಸಭಾ ಚುನಾವಣೆ ಹಿನ್ನೆಲೆ ಪೊಲೀಸ್​ ಇಲಾಖೆಗೆ ಮೇಜರ್​ ಸರ್ಜರಿ: 148 ಇನ್ಸ್​ಪೆಕ್ಟರ್​ಗಳ ವರ್ಗಾವಣೆ, ಇಲ್ಲಿದೆ ಸಂಪೂರ್ಣ ಪಟ್ಟಿ….

ಯುವಕನಿಗೆ ಸಾನ್ಯ ಅಯ್ಯರ್ ಕಪಾಳಮೋಕ್ಷ: ತಿರುಗಿ ಪುಟ್ಟಗೌರಿಯ ಕೆನ್ನೆಗೆ ಬಾರಿಸಿದ ಯುವಕ, ಪುತ್ತೂರಿನಲ್ಲಿ ಸಾನ್ಯ ಟೀಂ ಗರಂ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:10 + ten =
Remember me
