ನವದೆಹಲಿ:ನರೇಂದ್ರ ಮೋದಿ ಅವರು ರಾಷ್ಟ್ರಪತಿ ಭವನದಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರನ್ನು ಭೇಟಿ ಮಾಡಿ ಸರ್ಕಾರ ರಚನೆಗೆ ಹಕ್ಕು ಮಂಡಿಸಿದರು. ಇದೇ ವೇಳೆ ರಾಷ್ಟ್ರಪತಿಗಳು ಎನ್‌ಡಿಎ ನಾಯಕ ಪ್ರಧಾನಿ ಮೋದಿಯವರನ್ನು ಸರ್ಕಾರ ರಚಿಸಲು ಆಹ್ವಾನಿಸಿದರು.
ಇದನ್ನೂ ಓದಿ:ಸಂಸತ್ ಭದ್ರತಾ ಲೋಪ ಪ್ರಕರಣ: ಆರೋಪಿಗಳ ವಿರುದ್ಧ ಚಾರ್ಜ್‌ಶೀಟ್ ಸಲ್ಲಿಕೆ
ನರೇಂದ್ರ ಮೋದಿ ಅವರು ಭಾನುವಾರ (ಜೂನ್ 9) ಸಂಜೆ 6 ಗಂಟೆಗೆ ಮೂರನೇ ಬಾರಿಗೆ ಪ್ರಧಾನಿಯಾಗಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ.ಎನ್‌ಡಿಎಗೆ ಮೂರನೇ ಬಾರಿಗೆ ದೇಶ ಸೇವೆ ಮಾಡುವ ಅವಕಾಶವನ್ನು ನೀಡಿದ್ದಕ್ಕಾಗಿ ಪ್ರಧಾನಿ ಮೋದಿ ಜನರಿಗೆ ಧನ್ಯವಾದ ಸಲ್ಲಿಸಿದ್ದಾರೆ.
ಎನ್‌ಡಿಎಗೆ ಮೂರನೇ ಬಾರಿಗೆ ಜನರ ಸೇವೆ ಮಾಡುವ ಅವಕಾಶ ಸಿಕ್ಕಿದೆ. ನಮಗೆ ಅವಕಾಶ ನೀಡಿದ ಜನರಿಗೆ ನಾನು ಧನ್ಯವಾದ ಹೇಳುತ್ತೇನೆ. ಮೊದಲಿನಂತೆಯೇ ಅಭಿವೃದ್ಧಿ ಕಾರ್ಯಗಳು ಮುಂದುವರಿಯುತ್ತವೆ ಎಂದು ನಾನು ದೇಶವಾಸಿಗಳಿಗೆ ಭರವಸೆ ನೀಡಲು ಬಯಸುತ್ತೇನೆ. 25 ಕೋಟಿ ಜನರನ್ನು ಬಡತನದಿಂದ ಹೊರತರಲಾಗಿದೆ. ಇದು ಪ್ರತಿಯೊಬ್ಬ ಭಾರತೀಯನಿಗೂ ಹೆಮ್ಮೆಯ ವಿಷಯವಾಗಿದೆ ಎಂದು ಪ್ರಧಾನಿ ಮೋದಿ ಹೇಳಿದ್ದಾರೆ.
#WATCH| Delhi: Narendra Modi meets President Droupadi Murmu at the Rashtrapati Bhavan and stakes claim to form the government.
He was chosen as the leader of the NDA Parliamentary Party today.pic.twitter.com/PvlK44ZC2x
— ANI (@ANI)June 7, 2024

ಲೋಕಸಭೆ ಚುನಾವಣೆಯಲ್ಲಿ ಎನ್‌ಡಿಎ ಮೈತ್ರಿಕೂಟವು 292 ಕ್ಷೇತ್ರಗಳಲ್ಲಿ ಗೆಲುವು ಸಾಧಿಸಿದ್ದು, ಎನ್‌ಡಿಎ ಸಭೆಯಲ್ಲಿ ನರೇಂದ್ರ ಮೋದಿ ಅವರು ಶಾಸಕಾಂಗ ಪಕ್ಷದ ನಾಯಕರಾಗಿ ಆಯ್ಕೆಯಾಗಿದ್ದಾರೆ. ಜೂನ್‌ 9ರಂದು ನರೇಂದ್ರ ಮೋದಿ ಅವರು ಸತತ ಮೂರನೇ ಬಾರಿಗೆ ಪ್ರಧಾನಿಯಾಗಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ.
ನೀಟ್ ಪರೀಕ್ಷೆಯ ಅಕ್ರಮಗಳನ್ನು ಮುಚ್ಚಿಹಾಕಲು ತರಾತುರಿಯಲ್ಲಿ ಫಲಿತಾಂಶ ಬಿಡುಗಡೆ: ಸಿದ್ದರಾಮಯ್ಯ

ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
ಅನೇಕ ಜನರು ತಮ್ಮ ಭವಿಷ್ಯವನ್ನು ತಿಳಿದುಕೊಳ್ಳಲು ತುಂಬಾ ಆಸಕ್ತಿ ಹೊಂದಿರುತ್ತಾರೆ. ಮುಂದಿನ ದಿನಗಳಲ್ಲಿ ನಮ್ಮ ಜೀವನದಲ್ಲಿ…
ಬೆಂಗಳೂರು:  ಇಡ್ಲಿ ಅಂದ್ರೆ ಯಾರಿಗೆ ತಾನೇ ಇಷ್ಟವಿಲ್ಲ ಹೇಳಿ.  ಹೆಚ್ಚಿನವರು ಇಡ್ಲಿಯನ್ನು ಇಷ್ಟಪಟ್ಟು ತಿನ್ನುತ್ತಾರೆ. ಇಡ್ಲಿ…
Sign in to your account
Please enter an answer in digits:15 − fifteen =
Remember me
