ನವದೆಹಲಿ:ರಾಷ್ಟ್ರಪತಿ ದ್ರೌಪದಿ ಮುರ್ಮು ನವದೆಹಲಿಯ ಶಾಲೆಯೊಂದಕ್ಕೆ ಅನಿರೀಕ್ಷಿತ ಭೇಟಿ ನೀಡಿದ್ದು, ಅಲ್ಲಿನ ಮಕ್ಕಳಿಗೆ ಪಾಠ ಹೇಳಿಕೊಟ್ಟರು. ಇದು ಮಕ್ಕಳು, ಶಿಕ್ಷಕರು ಮಾತ್ರವಲ್ಲದೆ ಸಾರ್ವಜನಿಕರನ್ನೂ ಅಚ್ಚರಿಗೊಳಿಸಿತು.
ಇದನ್ನೂ ಓದಿ:ಸಲ್ಮಾನ್ ರಶ್ದಿ ದಾಳಿಕೋರನಿಗಿದೆ ಹಿಜ್ಬುಲ್ಲಾ ಲಿಂಕ್!
ಅಧ್ಯಕ್ಷೆ ದ್ರೌಪದಿ ಮುರ್ಮು ರಾಷ್ಟ್ರಪತಿಯಾಗಿ ಆಯ್ಕೆಯಾಗಿ ಎರಡು ವರ್ಷ ಪೂರೈಸಿದ ಹಿನ್ನೆಲೆಯಲ್ಲಿ ದೆಹಲಿಯ ಪ್ರೆಸಿಡೆಂಟ್ ಎಸ್ಟೇಟ್ ನಲ್ಲಿರುವ ಡಾ.ರಾಜೇಂದ್ರ ಪ್ರಸಾದ್ ಕೇಂದ್ರೀಯ ವಿದ್ಯಾಲಯ ಶಾಲೆಗೆ ತೆರಳಿ ಪಾಠ ಮಾಡಿದರು. ಶಾಲೆಗೆ ಭೇಟಿ ನೀಡುತ್ತಿದ್ದಂತೆ ರಾಷ್ಟ್ರಪತಿ ಮುರ್ಮು ಅವರು ವಿದ್ಯಾರ್ಥಿಗಳ ಹೆಸರು ಕೇಳಿ ಅವರ ಆಸಕ್ತಿ ಮತ್ತು ಗುರಿಗಳನ್ನು ತಿಳಿದುಕೊಂಡರು. ಬಳಿಕ ಜಾಗತಿಕ ತಾಪಮಾನದ ಕುರಿತು ಪಾಠ ಮಾಡಿದರು. ವಿದ್ಯಾರ್ಥಿಗಳು ಮುಂದಿನ ಪೀಳಿಗೆಗಾಗಿ ಪರಿಸರ ಸಂರಕ್ಷಣೆ ಮಾಡುವಂತೆ ಸಲಹೆ ನೀಡಿದರು.ಈ ಸಂದರ್ಭದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ‘ಏಕ್ ಪೇದೆ ಮಾ ಕೆ ನಾಮ್ (ತಾಯಿಯ ಹೆಸರಿನಲ್ಲಿ ಸಸಿ ನೆಡಿ)’ ಎಂದು ಕರೆ ನೀಡಿದರು. ಇದಕ್ಕೆ ಸಂಬಂಧಿಸಿದ ವಿಡಿಯೋ ಸದ್ಯ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.ಒಡಿಶಾದ ದ್ರೌಪದಿ ಮುರ್ಮು 15ನೇ ರಾಷ್ಟ್ರಪತಿಯಾಗಿ 2022ರ ಜುಲೈ 25 ರಂದು ಆಯ್ಕೆಯಾದರು. ದೇಶದ ಪ್ರಥಮ ಪ್ರಜೆಯಾಗಿ ಆಯ್ಕೆಯಾದ ಮೊದಲ ಆದಿವಾಸಿ, ರಾಷ್ಟ್ರಪತಿ ಹುದ್ದೆಯನ್ನು ಅಲಂಕರಿಸಿದ ಅತ್ಯಂತ ಕಿರಿಯ ಮಹಿಳೆ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ಇದಕ್ಕೂ ಮೊದಲು ಅವರು ಜಾರ್ಖಂಡ್‌ನ ರಾಜ್ಯಪಾಲರಾಗಿ ಸೇವೆ ಸಲ್ಲಿಸಿದ್ದರು. 1994-97 ರ ನಡುವೆ ರಾಯರಂಗಪುರದ ಶ್ರೀಅರಬಿಂದೋ ಸಮಗ್ರ ಶಿಕ್ಷಣ ಕೇಂದ್ರದಲ್ಲಿ ಶಿಕ್ಷಕಿಯಾಗಿ ಕರ್ತವ್ಯ ನಿರ್ವಹಿಸಿದ್ದರು.
ಆ ನ್ಯಾಯಮೂರ್ತಿಗಳ ಅಧಿಕಾರಾವಧಿ ವಿಸ್ತರಣೆ.. ಸುಪ್ರೀಂ ಕೋರ್ಟ್ ಶಿಫಾರಸು

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:17 − fourteen =
Remember me
