ನವದೆಹಲಿ:ರಾಷ್ಟ್ರಪತಿ ಚುನಾವಣೆಗೆ ಎನ್‌ಡಿಎ ಅಭ್ಯರ್ಥಿಯಾಗಿರುವ ದ್ರೌಪದಿ ಮುರ್ಮು ಅವರಿಗೆ ‘Z’ ಶ್ರೇಣಿಯ ಭದ್ರತೆಯನ್ನು ಕೇಂದ್ರ ಸರ್ಕಾರ ಕಲ್ಪಿಸಿದೆ.
ಕೇಂದ್ರ ಮೀಸಲು ಪೊಲೀಸ್ ಪಡೆ (ಸಿಆರ್‌ಪಿಎಫ್) ಸಿಬ್ಬಂದಿಯಿಂದ ದಿನದ 24 ಗಂಟೆಗಳ ಕಾಲ ‘Z’ ಶ್ರೇಣಿಯ ಸಶಸ್ತ್ರ ಭದ್ರತೆಯನ್ನು ಸರ್ಕಾರ ಒದಗಿಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ರಾಷ್ಟ್ರಪತಿ ಚುನಾವಣೆಗೆ ಜಾರ್ಖಂಡ್‌ನ ಮಾಜಿ ರಾಜ್ಯಪಾಲರು ಹಾಗೂ ಬುಡಕಟ್ಟು ಜನಾಂಗದ ನಾಯಕಿ ದ್ರೌಪದಿ ಮುರ್ಮು ಅವರನ್ನು ಎನ್‌ಡಿಎ ಅಭ್ಯರ್ಥಿಯಾಗಿ ಘೋಷಣೆ ಮಾಡಿದೆ. ಮುರ್ಮು ಎದುರಾಳಿ ಅಭ್ಯರ್ಥಿಯಾಗಿ ಯಶವಂತ್ ಸಿನ್ಹಾ ಕಣಕ್ಕಿಳಿಯಲಿದ್ದಾರೆ. ದ್ರೌಪದಿ ಮುರ್ಮು ಚುನಾವಣೆಯಲ್ಲಿ ಗೆದ್ದರೆ ದೇಶದ ಅತ್ಯುನ್ನತ ಹುದ್ದೆ ಅಲಂಕರಿಸಿದ ಮೊದಲ ಆದಿವಾಸಿ ಎಂಬ ಹೆಗ್ಗಳಿಕೆಗೆ ಪಾತ್ರರಾಗಲಿದ್ದಾರೆ.
ದ್ರೌಪದಿ ಮುರ್ಮು ಹಿನ್ನೆಲೆ:ದ್ರೌಪದಿ ಮುರ್ಮು ಅವರು ಜೂನ್ 20, 1958 ರಂದು ಒಡಿಶಾದ ಮಯೂರ್‌ಭಂಜ್ ಜಿಲ್ಲೆಯ ಬೈದಪೋಸಿ ಗ್ರಾಮದಲ್ಲಿ ಜನಿಸಿದರು. ಅವರ ತಂದೆಯ ಹೆಸರು ಬಿರಂಚಿ ನಾರಾಯಣ ಟುಡು. ಸಂತಾಲ್ ಬುಡಕಟ್ಟು ಜನಾಂಗಕ್ಕೆ ಸೇರಿದರಾದ ದ್ರೌಪದಿ, ಶ್ಯಾಮ್ ಚರಣ್ ಮುರ್ಮು ಅವರನ್ನು ವಿವಾಹವಾದರು.1997 ರಲ್ಲಿ ರಾಯರಂಗಪುರ ಪುರಸಭೆಯ ಕೌನ್ಸಿಲರ್ ಆಗಿ ಆಯ್ಕೆಯಾದ ನಂತರ ತಮ್ಮ ರಾಜಕೀಯ ವೃತ್ತಿಜೀವನವನ್ನು ಪ್ರಾರಂಭಿಸಿದರು. ಅದೇ ವರ್ಷ ಅವರು ರಾಯರಂಗಪುರ ಪುರಸಭೆಯ ಉಪಾಧ್ಯಕ್ಷರಾಗಿ ಆಯ್ಕೆಯಾದರು.
2000 ಮತ್ತು 2004 ರಲ್ಲಿ ಒಡಿಶಾದ ಮಯೂರ್‌ಭಂಜ್ ಜಿಲ್ಲೆಯ ರೈರಂಗ್‌ಪುರ ವಿಧಾನಸಭಾ ಕ್ಷೇತ್ರದಿಂದ ಎರಡು ಬಾರಿ ಶಾಸಕರಾಗಿ ಆಯ್ಕೆಯಾಗಿದ್ದರು. BJD-BJP ಮೈತ್ರಿ ಸಮಯದಲ್ಲಿ ಮಾರ್ಚ್ 6, 2000 ರಿಂದ ಆಗಸ್ಟ್ 6, 2002 ರವರೆಗೆ ವಾಣಿಜ್ಯ ಮತ್ತು ಸಾರಿಗೆ ಇಲಾಖೆಯ ರಾಜ್ಯ ಸಚಿವರಾಗಿ ಮತ್ತು ಆಗಸ್ಟ್ 6, 2002 ರಿಂದ ಮೇ 16, 2004 ರವರೆಗೆ ಮೀನುಗಾರಿಕೆ ಇಲಾಖೆ ಸಚಿವೆಯಾಗಿ ಕಾರ್ಯ ನಿರ್ವಹಿಸಿದ್ದಾರೆ . ಜೊತೆಗೆ ಜಾರ್ಖಂಡ್‌ನ ಮೊದಲ ಮಹಿಳಾ ರಾಜ್ಯಪಾಲರಾಗಿ ಕೆಲಸ ಮಾಡಿದ ಅನುಭವವಿದೆ.
ದೇವಸ್ಥಾನ ಸ್ವಚ್ಛಗೊಳಿಸುವ ಮೂಲಕ ವಿಶೇಷ ಪೂಜೆ ಸಲ್ಲಿಸಿದ ಎನ್‌ಡಿಎ ರಾಷ್ಟ್ರಪತಿ ಅಭ್ಯರ್ಥಿ ದ್ರೌಪದಿ ಮುರ್ಮು
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
Sign in to your account
Please enter an answer in digits:10 − seven =
Remember me
