ನವದೆಹಲಿ: ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಪೌರತ್ವ ತಿದ್ದುಪಡಿ ಕಾಯ್ದೆ ಪರವಾಗಿ ನಿವೃತ್ತ ನ್ಯಾಯಾಧೀಶರು, ಸೇನಾ ಮುಖ್ಯಸ್ಥರು ಸೇರಿದಂತೆ 150 ಮಂದಿ ನಾಗರಿಕರು ರಾಷ್ಟ್ರಪತಿಗೆ ಪತ್ರ ಬರೆದಿದ್ದಾರೆ.
ಪೌರತ್ವ ತಿದ್ದುಪಡಿ ಕಾಯ್ದೆ (ಸಿಎಎ), ನಾಗರಿಕರ ರಾಷ್ಟ್ರೀಯ ನೋಂದಣಿ (ಎನ್‌ಆರ್‌ಸಿ) ಮತ್ತು ರಾಷ್ಟ್ರೀಯ ಜನಸಂಖ್ಯಾ ನೋಂದಣಿ (ಎನ್‌ಪಿಆರ್) ವಿರುದ್ಧ ನಡೆಯುತ್ತಿರುವ ಪ್ರತಿಭಟನೆಯನ್ನು “ಸುಳ್ಳು ಮತ್ತು ಪ್ರೇರಿತ ಅಭಿಯಾನ” ಎಂದು ಪತ್ರದಲ್ಲಿ ತಿಳಿಸಿದ್ದಾರೆ.ಕಾಯ್ದೆ ವಿರೋಧಿಸಿ ನಡೆಯುತ್ತಿರುವ ಪ್ರತಿಭಟನೆಗಳನ್ನು ಕೇಂದ್ರ ಸರ್ಕಾರ ಗಂಭೀರತೆಯಿಂದ ನೋಡಬೇಕು ಮತ್ತು ದೇಶದ ಪ್ರಜಾಪ್ರಭುತ್ವ ಸಂಸ್ಥೆಗಳನ್ನು ಕಾಪಾಡಬೇಕು ಹಾಗೂ ಪ್ರತಿಭಟನೆ ಹಿಂದೆ ಇರುವವರನ್ನು ಪತ್ತೆ ಮಾಡಿ ಕ್ರಮ ಕೈಗೊಳ್ಳಬೇಕು ಎಂದು ಪತ್ರದಲ್ಲಿ ಒತ್ತಾಯಿಸಿದ್ದಾರೆ.
ಸಾರ್ವಜನಿಕ ಮತ್ತು ಖಾಸಗಿ ಆಸ್ತಿ ನಾಶಕ್ಕೆ ಕಾರಣವಾದ ಪ್ರತಿಭಟನೆಯನ್ನು ಸಂಘಟಿತ ರೀತಿಯಲ್ಲಿ ನಡೆಸಲಾಗುತ್ತಿದೆ ಎಂದು ಪತ್ರದಲ್ಲಿ ತಿಳಿಸಿದ್ದಾರೆ.
ವಿವಿಧ ಹೈಕೋರ್ಟ್‌ಗಳ 11 ಮಂದಿ ನಿವೃತ್ತ ನ್ಯಾಯಮೂರ್ತಿಗಳು, 24 ಮಂದಿ ನಿವೃತ್ತ ಐಎಎಸ್ ಅಧಿಕಾರಿಗಳು, 16 ಮಂದಿ ನಿವೃತ್ತ ಐಪಿಎಸ್ ಮತ್ತು 18 ನಿವೃತ್ತ ಲೆಫ್ಟಿನೆಂಟ್ ಜನರಲ್‌ಗಳು ಸೇರಿದಂತೆ ಉನ್ನತ ಸೇವೆಯಲ್ಲಿದ್ದ ನಾಗರಿಕರು ಪತ್ರ ಬರೆದಿದ್ದಾರೆ. (ಏಜೆನ್ಸೀಸ್​)
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:eighteen − 14 =
Remember me
