ನವದೆಹಲಿ:ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಅವರ ಆರನೇ ವರ್ಷದ ಪುಣ್ಯತಿಥಿ ನಿಮಿತ್ತ ರಾಷ್ಟ್ರಪತಿ ದ್ರೌಪದಿ ಮುರ್ಮು, ಉಪ ರಾಷ್ಟ್ರಪತಿ ಜಗದೀಪ್ ಧನಕರ್, ಪ್ರಧಾನ ಮಂತ್ರಿ ನರೇಂದ್ರ ಮೋದಿ ಸೇರಿದಂತೆ ಗಣ್ಯರು ಗೌರವ ಸಲ್ಲಿಸಿದ್ದಾರೆ.
ಇದನ್ನೂ ಓದಿ:ಸರ್ಕಾರಿ ನೌಕರರು ಕೆಂಪು-ಹಳದಿ ಬಣ್ಣದ ಐಡಿ ಕಾರ್ಡ್ ಟ್ಯಾಗ್ ಧರಿಸಲು ಆದೇಶ !
ಲೋಕಸಭೆಯ ಸ್ಪೀಕರ್ ಓಂ ಬಿರ್ಲಾ, ರಕ್ಷಣಾ ಸಚಿವ ರಾಜನಾಥ್ ಸಿಂಗ್ ಮತ್ತು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ ನಡ್ಡಾ ಸೇರಿದಂತೆ ಎನ್​ಡಿಎ ಮೈತ್ರಿಕೂಟದ ಹಲವು ಗಣ್ಯರು ನವದೆಹಲಿಯ ಸದೈವ್ ಅಟಲ್ ಸ್ಮಾರಕದಲ್ಲಿ ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಸಮಾಧಿ ಸದೈವ್ ಅಟಲ್​​ಗೆ ಭೇಟಿ ನೀಡಿ ಪುಷ್ಪ ನಮನ ಸಲ್ಲಿಸಿದ್ದಾರೆ. ಇದೇ ವೇಳೆ ವಾಜಪೇಯಿ ಅವರ ದತ್ತು ಪುತ್ರಿ ನಮಿತಾ ಭಟ್ಟಾಚಾರ್ಯ ಕೂಡ ಪ್ರಾರ್ಥನೆಯಲ್ಲಿ ಪಾಲ್ಗೊಂಡಿದ್ದಾರೆ.
“ನಮ್ಮ ಸ್ಫೂರ್ತಿಯ ಮೂಲವಾದ ಮಾಜಿ ಪ್ರಧಾನಿ, ಭಾರತರತ್ನ, ಅಟಲ್ ಬಿಹಾರಿ ವಾಜಪೇಯಿ ಅವರಿಗೆ ಅವರ ಪುಣ್ಯತಿಥಿಯಂದು ನಮನಗಳು” ಎಂದು ಬಿಜೆಪಿಯ ಅಧಿಕೃತ ಎಕ್ಸ್ ಹ್ಯಾಂಡಲ್ ನಲ್ಲಿ ಪೋಸ್ಟ್ ಮಾಡಲಾಗಿದೆ.
Tributes to Atal Ji on his Punya Tithi.
He is remembered by countless people for his unparalleled contribution to nation building. He devoted his entire life towards ensuring that our fellow citizens lead a better quality of life. We will keep working to fulfill his vision for…pic.twitter.com/MfGUl9WUTy
— Narendra Modi (@narendramodi)August 16, 2024

ವಾಜಪೇಯಿ ಗೌರವಾನ್ವಿತ ರಾಜಕಾರಣಿಯಾಗಿದ್ದು, ಅವರ ಕಾಲದ ಅತ್ಯುತ್ತಮ ವಾಗ್ಮಿಗಳಲ್ಲಿ ಒಬ್ಬರಾಗಿದ್ದರು. ಮತ್ತು ಬಿಜೆಪಿ ಪಕ್ಷದ ಸ್ಥಾಪಕ ಸದಸ್ಯರಾದ ವಾಜಪೇಯಿ ಅವರು ಧೀರ್ಘಕಾಲದ ಅನಾರೋಗ್ಯದಿಂದ 2018ರ ಆಗಸ್ಟ್ 16 ರಂದು ವಿಧಿವಶರಾಗಿದ್ದರು.
1990ರ ಸಮ್ಮಿಶ್ರ ಯುಗದಲ್ಲಿ ಮೈತ್ರಿಗಳನ್ನು ನಿರ್ಮಿಸುವ ಮೂಲಕ ಬಿಜೆಪಿಯ ವ್ಯಾಪ್ತಿಯನ್ನು ವಿಸ್ತರಿಸುವಲ್ಲಿ ಪ್ರಮುಖ ಪಾತ್ರ ವಹಿಸಿದರು. ಅವರು 1998ರಿಂದ 2004ರವರೆಗೆ ತಮ್ಮ ಅಧಿಕಾರಾವಧಿಯನ್ನು ಪೂರ್ಣಗೊಳಿಸಿದ ಬಿಜೆಪಿಯಿಂದ ಮೊದಲ ಪ್ರಧಾನಿಯಾದರು. ಈ ಅವಧಿಯು ಗಮನಾರ್ಹ ಸುಧಾರಣೆಗಳು ಮತ್ತು ಮೂಲಸೌಕರ್ಯ ಅಭಿವೃದ್ಧಿಯಿಂದ ಗುರುತಿಸಲ್ಪಟ್ಟಿದೆ. ಡಿಸೆಂಬರ್ 25ರ ಅವರ ಜನ್ಮದಿನವನ್ನು ಬಿಜೆಪಿಯ ಉತ್ತಮ ಆಡಳಿತ ದಿನ ಎಂದು ಆಚರಿಸುತ್ತದೆ. 2014ರಲ್ಲಿ ಅವರಿಗೆ ಭಾರತ ರತ್ನ ದೊರಕಿತ್ತು.
ಕರ್ತವ್ಯ ಲೋಪದಡಿ ಅಮಾನತುಗೊಂಡಿದ್ದ ಪೊಲೀಸ್ ಪೇದೆಗೆ ಮುಖ್ಯಮಂತ್ರಿ ಪದಕ: ರಾಜ್ಯ ಸರ್ಕಾರ ವಿರುದ್ಧ ಬಿ.ವೈ ವಿಜಯೇಂದ್ರ ಆಕ್ರೋಶ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:1 + 16 =
Remember me
