ನವದೆಹಲಿ:ಕರ್ನಾಟಕದ ನಾಲ್ವರು ಸೇರಿ 63 ಶಿಕ್ಷಕರಿಗೆ ಇಂದು ರಾಷ್ಟ್ರೀಯ ಪ್ರಶಸ್ತಿ ನೀಡಲಾಯಿತು. ಶಿಕ್ಷಕರ ದಿನಾಚರಣೆ ಪ್ರಯುಕ್ತ ಕೇಂದ್ರ ಸರ್ಕಾರದಿಂದ ನೀಡಲಾಗುವ ರಾಷ್ಟ್ರೀಯ ಈ ಪ್ರಶಸ್ತಿಯನ್ನು ರಾಷ್ಟ್ರಪತಿ ದ್ರೌಪದಿ ಮುರ್ಮು ಪ್ರದಾನ ಮಾಡಿದರು.
ಕರ್ನಾಟಕದಿಂದ ಉತ್ತರಕನ್ನಡ ಜಿಲ್ಲೆಯ ಶಿರಸಿ ಶ್ರೀ ಮಾರಿಕಾಂಬಾ ಸರ್ಕಾರಿ ಪಿಯುಸಿ ಪ್ರೌಢಶಾಲಾ ವಿಭಾಗದ ಶಿಕ್ಷಕ ನಾರಾಯಣ ಪರಮೇಶ್ವರ ಭಾಗವತ್, ಬಾಗಲಕೋಟೆ ಕೆಎಲ್​ಇ ಸೊಸೈಟಿಯ ಎಸ್​ಇಪಿ ಜೂನಿಯರ್ ಕಾಲೇಜಿನ ಸಪ್ನಾ ಶ್ರೀಶೈಲ್ ಆನಿಗೋಳ, ಧಾರವಾಡ ಐಐಟಿ ಪ್ರಾಧ್ಯಾಪಕ ಡಾ.ಎಸ್.ಆರ್.ಮಹಾದೇವ ಪ್ರಸನ್ನ, ಬೆಂಗಳೂರಿನ ಅಂತಾರಾಷ್ಟ್ರೀಯ ಮಾಹಿತಿ ತಂತ್ರಜ್ಞಾನ ಸಂಸ್ಥೆಯ ಪ್ರಾಧ್ಯಾಪಕ ಜೆ.ದಿನೇಶ್ ಬಾಬು ರಾಷ್ಟ್ರೀಯ ಶಿಕ್ಷಕ ಪ್ರಶಸ್ತಿ ಸ್ವೀಕರಿಸಿದರು.
ಇದನ್ನೂ ಓದಿ:ಮಗು ಅಳುತ್ತಿದೆ ಅಂತ ಮೂಗು-ಬಾಯಿ ಒತ್ತಿ ಹಿಡಿದ ಅಪ್ಪ; ಉಸಿರುಗಟ್ಟಿ ಸಾವಿಗೀಡಾದ 14 ತಿಂಗಳ ಮಗ
ಪ್ರಶಸ್ತಿ ಪ್ರದಾನ ಮಾಡಿ ಮಾತನಾಡಿದ ರಾಷ್ಟ್ರಪತಿ, ಪ್ರತಿಯೊಬ್ಬರ ಬದುಕಿನಲ್ಲೂ ಪ್ರಾಥಮಿಕ ಶಿಕ್ಷಣ ಮಹತ್ವದ್ದು ಎಂದರು. ಬೋಧನೆಯಲ್ಲಿ ಮಹಿಳೆಯರ ಪಾತ್ರವನ್ನು ಗಮನಿಸಿ ಹೇಳುವುದಾದರೆ ಶಿಕ್ಷಕಿಯರಿಗೂ ಹೆಚ್ಚಿನ ಪ್ರಮಾಣದಲ್ಲಿ ಪ್ರಶಸ್ತಿ ಸಿಗಬೇಕು. ಶಿಕ್ಷಕಿರಯರು ಹಾಗೂ ವಿದ್ಯಾರ್ಥಿನಿಯರಿಗೆ ಆದ್ಯತೆ ನೀಡುವುದು ಮಹಿಳಾ ಸಬಲೀಕರಣದ ದೃಷ್ಟಿಯಿಂದ ಪ್ರಮುಖವಾದುದು ಎಂದು ಅವರು ಅಭಿಪ್ರಾಯಪಟ್ಟರು.
ಹಿಂದೂ ಧರ್ಮ ಯಾವಾಗ ಹುಟ್ಟಿತು‌‌‌.. ಯಾರು ಹುಟ್ಟಿಸಿದ್ದರು?: ಗೃಹ ಸಚಿವ ಡಾ.ಜಿ.ಪರಮೇಶ್ವರ್​
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:10 + 11 =
Remember me
