ನವದೆಹಲಿ:ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರ ಆರೋಗ್ಯದಲ್ಲಿ ವ್ಯತ್ಯಯ ಕಂಡು ಬಂದಿದ್ದರಿಂದ ಅವರನ್ನು ದೆಹಲಿಯ ಏಮ್ಸ್​ ಆಸ್ಪತ್ರೆಗೆ ದಾಖಲಿಸಲಾಗಿದೆ. ಭಾನುವಾರ ಅವರು ಹೃದಯದ ಬೈಪಾಸ್ ಸರ್ಜರಿಗೆ ಒಳಗಾಗಲಿದ್ದಾರೆ. ಸದ್ಯ ಅವರ ಆರೋಗ್ಯ ಸ್ಥಿರವಾಗಿದೆ ಎಂದು ರಾಷ್ಟ್ರಪತಿ ಭವನದ ಪ್ರಕಟಣೆ ತಿಳಿಸಿದೆ.
ಕಳೆದ ಮಂಗಳವಾರ ಅವರು ವೈದ್ಯಕೀಯ ತಪಾಸಣೆಗಾಗಿ ದೆಹಲಿಯ ಸೇನಾ ಆಸ್ಪತ್ರೆಗೆ ದಾಖಲಾಗಿದ್ದರು. ಆ ವೇಳೆ ಅವರ ಹೃದಯದ ಕಾರ್ಯವಿಧಾನದಲ್ಲಿ ವ್ಯತ್ಯಾಸ ಕಂಡು ಬಂದಿದ್ದರಿಂದ ಸೇನಾ ಆಸ್ಪತ್ರೆ ವೈದ್ಯರು ಹೆಚ್ಚಿನ ಚಿಕಿತ್ಸೆಗೆ ಸೂಚಿಸಿದ್ದರು. ಹೀಗಾಗಿ ಅವರು ಇಂದು ಮಧ್ಯಾಹ್ನ ಏಮ್ಸ್​​ಗೆ ದಾಖಲಾಗಿದ್ದಾರೆ.
ರಾಷ್ಟ್ರಪತಿಗಳ ಆರೋಗ್ಯ ಸ್ಥಿರವಾಗಿದ್ದು, ಅವರು ಸದ್ಯಕ್ಕೆ ವಿಶ್ರಾಂತಿ ಪಡೆಯುತ್ತಿದ್ದಾರೆ ಎಂದು ರಾಷ್ಟ್ರಪತಿ ಭವನದ ಪ್ರಕಟಣೆ ತಿಳಿಸಿದೆ.
ನಮ್ಮ ಮಗಳನ್ನು ಒತ್ತೆಯಾಳಾಗಿಟ್ಟುಕೊಂಡು ಡಿಕೆ ಶಿವಕುಮಾರ್ ರಾಜಕಾರಣ ಮಾಡುತ್ತಿದ್ದಾರೆ ಎಂದು ಆರೋಪಿಸಿದ ಸಿಡಿ ಲೇಡಿ ಪೋಷಕರು!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:4 × 1 =
Remember me
