ನವದೆಹಲಿ:ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರಿಗೆ ಯಶಸ್ವಿಯಾಗಿ ಹೃದಯದ ಶಸ್ತ್ರ ಚಿಕಿತ್ಸೆ ನಡೆದಿದೆ. ಕಳೆದ ಶನಿವಾರ ಅವರನ್ನು ದೆಹಲಿಯ ಏಮ್ಸ್​ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಮಂಗಳವಾರ ಟ್ವೀಟ್ ಮಾಡಿರುವ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರು ಈ ವಿಷಯ ತಿಳಿಸಿದರು.
ಸದ್ಯ ಅವರ ಆರೋಗ್ಯ ಸ್ಥಿರವಾಗಿದೆ ಎಂದು ಏಮ್ಸ್ಸ ಪ್ರಕಟಣೆ ತಿಳಿಸಿದೆ. ರಾಷ್ಟ್ರಪತಿ ರಾಮನಾಥ ಕೋವಿಂದ್ ಅವರಿಗೆ ಯಶಸ್ವಿಯಾಗಿ ಶಸ್ತ್ರ ಚಿಕಿತ್ಸೆ ನಡೆಸಿದ್ದಕ್ಕೆ ದೆಹಲಿಯ ಏಮ್ಸ್​ ವೈದ್ಯರಿಗೆ ರಾಜನಾಥ್ ಸಿಂಗ್ ಅವರು ಧನ್ಯವಾದ ತಿಳಿಸಿದ್ದು, ಬೇಗನೇ ಗುಣಮುಖರಾಗುವಂತೆ ಆಶಿಸಿದ್ದದಾರೆ.
The President of India, Shri Ramnath Kovind has undergone a successful bypass surgery at AIIMS, Delhi.
I congratulate the team of Doctors for successful operation. Spoke to Director AIIMS to enquire about Rashtrapatiji’s health. Praying for his well-being and speedy recovery.
— Rajnath Singh (@rajnathsingh)March 30, 2021

ಇದನ್ನೂ ಓದಿ:ಅಂತೂ ಜಡ್ಜ್ ಮುಂದೆ ತನ್ನ ಹೇಳಿಕೆ ದಾಖಲಿಸಿದ ಸಿಡಿ ಲೇಡಿ!
ಕಳೆದ ಮಂಗಳವಾರ ಅವರು ವೈದ್ಯಕೀಯ ತಪಾಸಣೆಗಾಗಿ ದೆಹಲಿಯ ಸೇನಾ ಆಸ್ಪತ್ರೆಗೆ ದಾಖಲಾಗಿದ್ದರು. ಆ ವೇಳೆ ಅವರ ಹೃದಯದ ಕಾರ್ಯವಿಧಾನದಲ್ಲಿ ವ್ಯತ್ಯಾಸ ಕಂಡು ಬಂದಿದ್ದರಿಂದ ಸೇನಾ ಆಸ್ಪತ್ರೆ ವೈದ್ಯರು ಹೆಚ್ಚಿನ ಚಿಕಿತ್ಸೆಗೆ ಸೂಚಿಸಿದ್ದರು. ಹೀಗಾಗಿ ಅವರು ಶನಿವಾರ ಮಧ್ಯಾಹ್ನ ಏಮ್ಸ್​​ಗೆ ದಾಖಲಾಗಿದ್ದರು.
ರಾಷ್ಟ್ರಪತಿಗಳ ಆರೋಗ್ಯ ಸ್ಥಿರವಾಗಿದ್ದು, ಅವರು ಸದ್ಯಕ್ಕೆ ವಿಶ್ರಾಂತಿ ಪಡೆಯುತ್ತಿದ್ದಾರೆ ಎಂದು ರಾಷ್ಟ್ರಪತಿ ಭವನದ ಪ್ರಕಟಣೆ ತಿಳಿಸಿದೆ.
ಆಸ್ಪತ್ರೆಯ ಟಾಯ್ಲೆಟ್​ನಲ್ಲಿ ಆಕ್ಸಿಜನ್​ ಪೈಪ್​ನಿಂದ ನೇಣು ಬಿಗಿದುಕೊಂಡು ಸತ್ತ ಕರೊನಾ ರೋಗಿ!

‘ನಶಾಮುಕ್ತ ಭಾರತ’ ಅಭಿಯಾನ; ರಾಜ್ಯದ ಯಾವ್ಯಾವ ಜಿಲ್ಲೆಗಳಲ್ಲಿ ನಡೆಯಲಿದೆ?

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:twelve − seven =
Remember me
