ನವದೆಹಲಿ:ನಿರ್ಭಯಾ ಅತ್ಯಾಚಾರ ಪ್ರಕರಣದ ಅಪರಾಧಿಯಲ್ಲೋರ್ವನಾದ ವಿನಯ್​ ಶರ್ಮಾ ಸಲ್ಲಿಸಿದ್ದ ಕ್ಷಮಾದಾನ ಅರ್ಜಿಯನ್ನು ರಾಷ್ಟ್ರಪತಿ ರಾಮನಾಥ ಕೋವಿಂದ ಅವರು ತಿರಸ್ಕರಿಸಿದ್ದಾರೆ.
ಈ ಹಿಂದಿನ ಆದೇಶದಂತೆ ಆಗಿದ್ದರೆ ನಾಲ್ವರು ಅಪರಾಧಿಗಳಾದ ವಿನಯ್​ ಶರ್ಮಾ, ಮುಕೇಶ್​ ಸಿಂಗ್​, ಅಕ್ಷಯ್​ ಠಾಕೂರ್​, ಪವನ್​ ಕುಮಾರ್ ಗುಪ್ತಾರನ್ನು ಇಂದು ಗಲ್ಲಿಗೇರಿಸಬೇಕಿತ್ತು.
ಆದರೆ ಅಪರಾಧಿಗಳ ಗಲ್ಲುಶಿಕ್ಷೆಗೆ ತಡೆಕೋರಿ ವಕೀಲ ಎ.ಪಿ.ಸಿಂಗ್ ದೆಹಲಿಯ ಪಟಿಯಾಲ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದರು. ಅಲ್ಲದೆ, ವಿನಯ ಶರ್ಮಾ ಕ್ಷಮಾದಾನಕ್ಕೆ ಕೋರಿ ರಾಷ್ಟ್ರಪತಿಗೆ ಅರ್ಜಿ ಸಲ್ಲಿಸಿದ್ದಾರೆ. ಆ ಬಗ್ಗೆ ಇನ್ನೂ ಆದೇಶ ಹೊರವಿದ್ದಿಲ್ಲ. ಹಾಗಾಗಿ ಫೆ.1ರಂದು ಗಲ್ಲಿಗೇರಿಸಲು ಸಾಧ್ಯವಿಲ್ಲ ಎಂದು ವಾದಿಸಿದ್ದರು.
ವಿಚಾರಣೆ ನಡೆಸಿದ ದೆಹಲಿ ಪಟಿಯಾಲಾ ಕೋರ್ಟ್​ನ ಅಡಿಷನಲ್​ ಸೆಷನ್ಸ್​ ನ್ಯಾಯಾಧೀಶ ಧರ್ಮೇಂದ್ರ ರಾಣಾ ನಿನ್ನೆ (ಜ.31)ರಂದು ಗಲ್ಲು ಶಿಕ್ಷೆಯನ್ನು ಮುಂದೂಡಿ ಆದೇಶ ಹೊರಡಿಸಿದ್ದಾರೆ.
ಅಲ್ಲದೆ ಇನ್ನೋರ್ವ ಅಪರಾಧಿ ಪವನ್​ ಕುಮಾರ್​ ಗುಪ್ತಾ ಸಲ್ಲಿಸಿದ್ದ ಮರುಪರಿಶೀಲನಾ ಅರ್ಜಿಯನ್ನು ಸುಪ್ರೀಂಕೋರ್ಟ್​ ನಿನ್ನೆ ತಿರಸ್ಕರಿಸಿದೆ. ಆದರೆ ಮುಂದಿನ ಆದೇಶ ಬರುವವರೆಗೂ ಅಪರಾಧಿಗಳನ್ನು ಗಲ್ಲಿಗೇರಿಸಲು ಸಾಧ್ಯವಿಲ್ಲ.ಅಪರಾಧಿಗಳಿಗೆ ಗಲ್ಲು ಶಿಕ್ಷೆ ಮುಂದೂಡಲ್ಪಡುತ್ತಿರುವುದರ ವಿರುದ್ಧ ನಿರ್ಭಯಾ ತಾಯಿ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ. (ಏಜೆನ್ಸೀಸ್​)
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:six − three =
Remember me
