ನವದೆಹಲಿ:ಸೋಮವಾರ ರಾಷ್ಟ್ರಪತಿ ಚುನಾವಣೆ ನಡೆಯಲಿದ್ದು, ದೇಶದ ಸುಮಾರು 4800 ಚುನಾಯಿತ ಪ್ರತಿನಿಧಿಗಳು ಮತದಾನ ಮಾಡಲಿದ್ದಾರೆ. ಸಂಸತ್​ ಭವನ ಹಾಗೂ ರಾಜ್ಯ ವಿಧಾನಸಭೆಗಳಲ್ಲಿ ಮತದಾನ ನಡೆಯಲಿದೆ. ಜುಲೈ 21ರಂದು ಸಂಸತ್​ ಭವನದಲ್ಲಿ ಮತ ಎಣಿಕೆ ನಡೆಯಲಿದ್ದು, ಜುಲೈ 25ರಂದು ಮುಂದಿನ ರಾಷ್ಟ್ರಪತಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ.ಎನ್​ಡಿಎ ಅಭ್ಯರ್ಥಿ ದ್ರೌಪದಿ ಮರ್ಮು ಅವರು ಗೆಲುವು ಬಹುತೇಕ ಖಚಿತವಾಗಿದ್ದು, ಶೇ.60ರಷ್ಟು ಮತಗಳನ್ನು ಪಡೆದು ವಿರೋಧ ಪಕ್ಷಗಳ ಅಭ್ಯರ್ಥಿ ಯಶವಂತ ಸಿನ್ಹಾ ಅವರನ್ನು ಸೋಲಿಸುವ ಸಾಧ್ಯತೆ ಇದೆ. ಒಟ್ಟು 10,86,431 ಮತಗಳ ಪೈಕಿ ವಿವಿಧ ಪ್ರಾದೇಶಿಕ ಪಕ್ಷಗಳ ಬೆಂಬಲದ ನಂತರ ಎನ್​ಡಿಎ ಅಭ್ಯರ್ಥಿ 6.67 ಲಕ್ಷಕ್ಕೂ ಹೆಚ್ಚು ಮತಗಳನ್ನು ಹೊಂದಿದ್ದಾರೆ.
ಈಗಾಗಲೇ ಎನ್​ಡಿಎಗೆ ವೈಎಸ್​ಆರ್​ ಕಾಂಗ್ರೆಸ್​, ಬಿಜು ಜನತಾದಳ, ಎಐಎಡಿಎಂಕೆ, ತೆಲುಗು ದೇಶಂ ಪಕ್ಷ, ಶಿರೋಮಣಿಅಕಾಲಿದಳ, ಶಿವಸೇನೆ ಸೇರಿದಂತೆ ಬಹುತೇಕ ಪ್ರಾದೇಶಿಕ ಪಕ್ಷಗಳು ಬೆಂಬಲ ಸೂಚಿಸಿರುವುದರಿಂದ ಮರ್ಮು ಅವರು ಗೆಲುವು ಸಾಧಿಸಲಿದ್ದಾರೆ.(ಏಜೆನ್ಸೀಸ್​)
VIDEO: ಇಲ್ಲಿದೆ ಚೆಸ್​​​ ಬೋರ್ಡ್​​ನಂತೆ ಚಿತ್ರಿಸಲಾದ ಆಕರ್ಷಕ ಸೇತುವೆ!
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:18 − 12 =
Remember me
