ಮುಂಬೈ:ಮಹಾರಾಷ್ಟ್ರ ಸರ್ಕಾರ ರಚನೆಯಾದ ಬಳಿಕ ಇದೇ ಮೊದಲ ಬಾರಿಗೆ ಎನ್​ಡಿಎ ಪರವಾಗಿ ಶಿವಸೇನೆ ಹೇಳಿಕೆ ನೀಡಿದ್ದು, ಅಚ್ಚರಿ ಮೂಡಿಸಿದೆ. ಎನ್​ಡಿಎ ಮೈತ್ರಿಕೂಟದ ರಾಷ್ಟ್ರಪತಿ ಅಭ್ಯರ್ಥಿ ದ್ರೌಪದಿ ಮರ್ಮು ಅವರನ್ನು ಬೆಂಬಲಿಸುವುದಾಗಿ ಶಿವಸೇನೆ ಘೋಷಿಸಿದೆ.
ಇದೇ ತಿಂಗಳ 18 ರಂದು ರಾಷ್ಟ್ರಪತಿ ಚುನಾವಣೆ ನಡೆಯಲಿದೆ. ಇನ್ನು ಈ ಕುರಿತು ಮಂಗಳವಾರ ಸಂಜೆ ನಡೆಸಿದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಪಕ್ಷದ ಅಧ್ಯಕ್ಷ ಉದ್ಧವ್​ ಠಾಕ್ರೆ, ಯಾವುದೇ ಒತ್ತಡವಿಲ್ಲದೇ ಮರ್ಮು ಅವರನ್ನು ಬೆಂಬಲಿಸಲು ಶಿವಸೇನೆ ನಿರ್ಧರಿಸಿದೆ ಎಂದು ತಿಳಿಸಿದ್ದಾರೆ.
ತಮ್ಮ ಸಂಸದರೂ ಕೂಡ ಇದಕ್ಕೆ ಸಮ್ಮತಿಸಿದ್ದು, ಮರ್ಮು ಅವರ ಬೆಂಬಲಕ್ಕೆ ನಾವು ತೀರ್ಮಾನಿಸಿದ್ದೇವೆ. ಮೊದಲ ಬಾರಿಗೆ ಬುಡಕಟ್ಟು ಸಮುದಾಯದ ಮಹಿಳೆಯೊಬ್ಬರು ರಾಷ್ಟ್ರಪತಿಯಾಗುವ ಅವಕಾಶವಿರುವಾಗ ಈ ನಿರ್ಧಾರಕ್ಕೆ ಬಂದಿದ್ದೇವೆ. ಪ್ರಸ್ತುತ ರಾಜಕೀಯ ಬೆಳವಣಿಗೆಯಲ್ಲಿ ನಾವು ಎನ್​ಡಿಎಗೆ ಬೆಂಬಲ ನೀಡಬಾರದು, ಆದರೆ ನಾವು ಅಷ್ಟು ಸಣ್ಣ ಮನಸ್ಥಿತಿ ಹೊಂದಿಲ್ಲ ಎಂದು ಹೇಳಿದ್ದಾರೆ.(ಏಜೆನ್ಸೀಸ್​)
ಸಂಸತ್​ ಮುಂಗಾರು ಅಧಿವೇಶನ: ಇದೇ 17ರಂದು ಸರ್ವಪಕ್ಷ ಸಭೆ ಕರೆದ ಸರ್ಕಾರ

ಅರಬ್​ ರಾಷ್ಟ್ರದಿಂದ ಬಂದ ಹಡಗಿನ ಕಂಟೈನರ್​​ನಲ್ಲಿ ಸಿಕ್ತು ಕೋಟ್ಯಾಂತರ ಬೆಲೆಯ ಹೆರಾಯಿನ್​!: ಅಧಿಕಾರಿಗಳು ಪತ್ತೆ ಹಚ್ಚಿದ್ದು ಹೀಗೆ

ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
ಅನೇಕ ಜನರು ತಮ್ಮ ಭವಿಷ್ಯವನ್ನು ತಿಳಿದುಕೊಳ್ಳಲು ತುಂಬಾ ಆಸಕ್ತಿ ಹೊಂದಿರುತ್ತಾರೆ. ಮುಂದಿನ ದಿನಗಳಲ್ಲಿ ನಮ್ಮ ಜೀವನದಲ್ಲಿ…
Sign in to your account
Please enter an answer in digits:6 − 6 =
Remember me
