ವಾಷಿಂಗ್ಟನ್​:ಅಮೆರಿಕ ಅಧ್ಯಕ್ಷ ಡೊನಾಲ್ಡ್​ ಟ್ರಂಪ್​ ಅವರು ಇತ್ತೀಚೆಗೆ ಎಚ್​-1ಬಿ ವೀಸಾ ವಿತರಣೆಯನ್ನು ವರ್ಷಾಂತ್ಯದವರೆಗೆ ರದ್ದುಗೊಳಿಸಿ ಹೊರಡಿಸಿರುವ ಆದೇಶದಿಂದ ಕುಟುಂಬಗಳು ಪ್ರತ್ಯೇಕವಾಗುವ ಭೀತಿ ಎದುರಾಗಿದೆ. ಆದ್ದರಿಂದ ಈ ಸುಗ್ರೀವಾಜ್ಞೆಯನ್ನು ಹಿಂಪಡೆಯುವಂತೆ ಅವರಿಗೆ ಸೂಚಿಸಬೇಕು ಎಂದು ಕೋರಿ 7 ಮಕ್ಕಳು ಸೇರಿ 174 ಭಾರತೀಯ ಮೂಲದ 174 ಮಂದಿ ಕೋರ್ಟ್​ಗೆ ಅರ್ಜಿ ಸಲ್ಲಿಸಿದ್ದಾರೆ.
ಅರ್ಜಿಯನ್ನು ದಾಖಲಿಸಿಕೊಂಡಿರುವ ಅಮೆರಿಕದ ಕೊಲಂಬಿಯಾ ಜಿಲ್ಲಾ ನ್ಯಾಯಾಲಯದ ನ್ಯಾಯಮೂರ್ತಿ ಕೇತಂಜಿ ಬ್ರೌನ್​ ಜ್ಯಾಕ್ಸನ್, ಅಮೆರಿಕದ ಗೃಹ ಕಾರ್ಯದರ್ಶಿ ಮೈಕ್​ ಪಾಂಪಿಯೋ, ಆಂತರಿಕ ಭದ್ರೆತೆಯ ಪ್ರಭಾರ ಕಾರ್ಯದರ್ಶಿ ಚಾದ್​ ಎಫ್​ ವುಲ್ಫ್​ ಹಾಗೂ ಕಾರ್ಮಿಕ ಕಾರ್ಯದರ್ಶಿ ಯೂಜೀನಿ ಸ್ಕಾಲಿಯಾ ಅವರಿಗೆ ನೋಟಿಸ್​ ಜಾರಿ ಮಾಡಿದೆ.
ಇದನ್ನೂ ಓದಿ:10 ವರ್ಷದ ಬಾಲಕ 30 ಸೆಕೆಂಡ್​ಗಳಲ್ಲಿ ಎಗರಿಸಿದ್ದು ಎಷ್ಟು ಲಕ್ಷ ರೂ. ಗೊತ್ತಾ?
ಎಚ್​-1ಬಿ/ಎಚ್-4 ವೀಸಾಗಳ ವಿತರಣೆಯನ್ನು ವರ್ಷಾಂತ್ಯದವರೆಗೆ ರದ್ದುಗೊಳಿಸುವ ಸುಗ್ರೀವಾಜ್ಞೆಯಿಂದಾಗಿ ಅಮೆರಿಕದ ಆರ್ಥಿಕತೆಗೆ ಧಕ್ಕೆ ಉಂಟಾಗುತ್ತದೆ. ಜತೆಗೆ ಕುಟುಂಬಗಳನ್ನು ಬಲವಂತವಾಗಿ ಬೇರ್ಪಡುವಂತಾಗುತ್ತದೆ. ಸಂಸತ್​ನ ಆಶಯಕ್ಕೆ ಇದು ವಿರುದ್ಧವಾಗಿದೆ ಎಂದು ಭಾರತೀಯರ ಪರ ವಕಾಲತ್ತು ವಹಿಸಿಕೊಂಡಿರುವ ವಕೀಲ ವಾಸ್ಡೆನ್​ ಬನಿಯಾಸ್​ ವಾದಿಸಿದ್ದಾರೆ.
ಅಧ್ಯಕ್ಷೀಯ ಸುಗ್ರೀವಾಜ್ಞೆ ಹೊರಡಿಸಿರುವ ಕ್ರಮ ನ್ಯಾಯಸಮ್ಮತವಲ್ಲ ಎಂದು ಘೋಷಿಸಬೇಕು. ಜತೆಗೆ ಬಾಕಿ ಉಳಿದಿರುವ ಎಚ್​-1ಬಿ ಮತ್ತು ಎಚ್​-4 ವೀಸಾ ಅರ್ಜಿಗಳನ್ನು ತ್ವರಿತವಾಗಿ ಇತ್ಯರ್ಥಪಡಿಸುವಂತೆ ಗೃಹ ಇಲಾಖೆಗೆ ನಿರ್ದೇಶಿಸಬೇಕು ಎಂದು ಅರ್ಜಿಯಲ್ಲಿ ಮನವಿ ಮಾಡಿಕೊಳ್ಳಲಾಗಿದೆ.ಜೂ.22ರಂದು ಸುಗ್ರೀವಾಜ್ಞೆ ಹೊರಡಿಸಿದ್ದ ಅಧ್ಯಕ್ಷ ಡೊನಾಲ್ಡ್​ ಟ್ರಂಪ್​ ಎಚ್​-1ಬಿ ಉದ್ಯೋಗದ ವೀಸಾ ಕೊಡುವ ಪ್ರಕ್ರಿಯೆಯನ್ನು ವರ್ಷಾಂತ್ಯದವರೆಗೆ ರದ್ದುಗೊಳಿಸಿದ್ದರು.
ರಂಗಭೂಮಿ ಕಲಾವಿದೆ ಸುಭದ್ರಮ್ಮ ಮನ್ಸೂರ್​ ಇನ್ನಿಲ್ಲ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:twelve − four =
Remember me
