ತಿರುವನಂತಪುರಂ:ಅಯ್ಯಪ್ಪಸ್ವಾಮಿಯ ದರ್ಶನ ಪಡೆಯಬೇಕೆಂಬ ಬಯಕೆಯೊಂದಿಗೆ ಚರ್ಚ್​ ಒಂದರ ಪಾದ್ರಿಯೊಬ್ಬರು ತಮ್ಮ ಪರವಾನಗಿಯನ್ನು ಹಿಂತಿರುಗಿಸಿರುವ ಘಟನೆ ಕೇರಳದ ತಿರುವನಂತಪುರದಲ್ಲಿ ನಡೆದಿದೆ.
ತಿರುವನಂತಪುರ ಮೂಲದ ರೇವ್​ ಮನೋಜ್​ ಕೆ.ಜಿ (50) ಎನ್ನುವ ಪಾದ್ರಿ ಅಯ್ಯಪ್ಪ ಸ್ವಾಮಿ ಮಾಲೆ ಧರಿಸಿ 41ದಿನಗಳ ಕಠಿಣ ವ್ರತ ಕೈಗೊಂಡು ಆಂಗ್ಲಿಕನ್​ ಚರ್ಚ್​ ಆಫ್​ ಇಂಡಿಯಾ ಅಡಿಯಲ್ಲಿ ಬರುವ ಚರ್ಚ್​​ ಕೆಲಸಕ್ಕೆ ರಾಜೀನಾಮೆ ನೀಡಿ ಬಂದಿದ್ದಾರೆ.
ಈ ಕುರಿತು ಪ್ರತಿಕ್ರಿಯಿಸಿರುವ ರೇವ್​ ಮನೋಜ್​ ನನ್ನ ನಿರ್ಧಾರವನ್ನು ಯಾವುದೇ ಕಾರಣಕ್ಕೂ ಒಪ್ಪಿಕೊಳ್ಳಲು ಸಾಧ್ಯವಿಲ್ಲ ಎಂದು ಚರ್ಚ್​ ಆಡಳಿತ ಮಂಡಳಿಯು ಹೇಳಿತ್ತು. ತಮ್ಮ ನಿರ್ಧಾರದ ಕುರಿತು ವಿವರವಾದ ವಿವರಣೆಯನ್ನು ನೀಡುವಂತೆ ಆಡಳಿತ ಮಂಡಳಿ ಕೇಳಿತ್ತು. ನಾನು ಆಡಳಿತ ಮಂಡಳಿಗೆ ವಿವರಣೆ ನೀಡುವ ಬದಲು ನನಗೆ ನೀಡಲಾಗಿದ್ದ ಪರವಾನಗಿ ಹಾಗೂ ಐಡಿ ಕಾರ್ಡ್​ಅನ್ನು ಹಿಂತಿರುಗಿಸಿದ್ದೇನೆ.
ಇದನ್ನೂ ಓದಿ:ಸಿದ್ದರಾಮಯ್ಯ ವಿರುದ್ದ ಹರಿಪ್ರಸಾದ್​ ವಾಗ್ದಾಳಿ; ಜನರಲ್​ ಹೇಳಿಕೆಗಳಿಗೆ ಪ್ರತಿಕ್ರಿಯಿಸುವುದಿಲ್ಲವೆಂದ ಸಿಎಂ
ನಾನು ಮೊದಲಿಗೆ ದೇವರ ಸಿದ್ದಾಂತಗಳನ್ನು ಅಳವಡಿಸಿಕೊಂಡವನು. ದೇವರು ಯಾವುದೇ ಜಾತಿ, ಮತ, ಧರ್ಮ ಲೆಕ್ಕಿಸದೆ ಪ್ರೀತಿ ಮಾಡು ಎನ್ನುತ್ತಾರೆ. ಹೀಗಾಗಿ ಚರ್ಚ್​ಅನ್ನು ಪ್ರೀತಿಸಬೇಕೋ ಅಥವಾ ದೇವರನ್ನೋ ಎಂದು ನನಗೆ ತಿಳಿಯಲಿಲ್ಲ. ಚರ್ಚ್​ನ ಸಿದ್ದಾಂತಗಳಿಗೆ ತಕ್ಕಂತೆ ನಾನು ಕೆಲಸ ಮಾಡುವವನಲ್ಲ ಎಂದು ಹೇಳಿದ್ದಾರೆ.
ಈ ಮೊದಲು ಸಾಫ್ಟ್​ವೇರ್​ ಇಂಜಿನಿಯರ್​ ಆಗಿದ್ದ ನಾನು ಅಧ್ಯಾತ್ಮಿಕ ಭೋಧನೆಗಳಿಗೆ ಮಾಹಿತಿ ಕಲೆ ಹಾಕಲು ಪಾದ್ರಿಯಾದೆ. ನಾನು ಯಾವ ತಪ್ಪನ್ನೂ ಮಾಡಿಲ್ಲ ಎಂಬ ಭಾವನೆ ನನಗಿದೆ. ಹಿಂದೂ ಧರ್ಮ ಮತ್ತು ಅದರಲ್ಲಿನ ಆಚರಣೆಗಳನ್ನು ಮೀರಿ ಅರ್ಥ ಮಾಡಿಕೊಳ್ಳುವುದು ನನ್ನ ಉದ್ದೇಶವಾಗಿದೆ ಎಂದು ಪಾದ್ರಿ ಮನೋಜ್​ ತಿಳಿಸಿದ್ದಾರೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:five × three =
Remember me
