ನವದೆಹಲಿ: ಕರೊನಾ ವೈರಸ್​ ಹರಡುವುದನ್ನು ನಿಯಂತ್ರಿಸಲು ಜಾರಿಗೊಳಿಸಿರುವ ಲಾಕ್​ಡೌನ್​ ಅನ್ನು ಮೇ. 17ರ ನಂತರವೂ ಮುಂದುವರೆಸುವ ಸುಳಿವನ್ನು ಪ್ರಧಾನಿ ನರೇಂದ್ರ ಮೋದಿ ಅವರು ವ್ಯಕ್ತಪಡಿಸಿದ್ದಾರೆ ಎಂದು ತಿಳಿದು ಬಂದಿದೆ.
ಎಲ್ಲ ರಾಜ್ಯಗಳ ಮುಖ್ಯಮಂತ್ರಿಗಳೊಂದಿಗೆ ವಿಡಿಯೋ ಕಾನ್ಫರೆನ್ಸ್ ನಡೆಸಿದ ಬಳಿಕ ಅವರು ಲಾಕ್​ಡೌನ್​ ವಿಸ್ತರಿಸುವ ಯೋಜನೆ ಇದೆ ಎಂದು ಮೂಲಗಳು ತಿಳಿಸಿವೆ.
ಇದನ್ನೂ ಓದಿಕುಕ್ಕೆಯ ಭೋಜನ ಪ್ರಸಾದ ಎಸೆದ ವಲಸೆ ಕಾರ್ಮಿಕರು!
ಕರ್ನಾಟಕ ಸೇರಿದಂತೆ ಎಲ್ಲ ರಾಜ್ಯಗಳ ಮುಖ್ಯಮಂತ್ರಿಗಳ ಜತೆ ಪ್ರಧಾನಿ ನರೇಂದ್ರ ಮೋದಿ ಅವರು ಸತತ 6 ತಾಸು ವಿಡಿಯೋ ಕಾನ್ಫರೆನ್ಸ್ ನಡೆಸಿದರು. ಕೇರಳ, ಪಂಜಾಬ್​ ಸೇರಿದಂತೆ ಸೋಂಕು ನಿಯಂತ್ರಣದಲ್ಲಿರುವ ರಾಜ್ಯಗಳ ಮುಖ್ಯಮಂತ್ರಿಗಳು ಲಾಕ್​ಡೌನ್​ ನಿಯಮಗಳನ್ನು ಸರಳಗೊಳಿಸಬೇಕು ಎಂದು ಮನವಿ ಮಾಡಿದ್ದಾರೆ ಎಂದು ತಿಳಿದು ಬಂದಿದೆ.
ಕೆಲವು ರಾಜ್ಯಗಳು ಇನ್ನಷ್ಟು ದಿನ ಲಾಕ್​ಡೌನ್​ ವಿಸ್ತರಣೆ ಮಾಡಬೇಕು ಎಂಬ ಇಂಗಿತ ವ್ಯಕ್ತಪಡಿಸಿವೆ.ಎಲ್ಲರ ಅಭಿಪ್ರಾಯವನ್ನು ಸಂಗ್ರಹಿಸಿರುವ ಪ್ರಧಾನಿ ನರೇಂದ್ರ ಮೋದಿ ಅವರು ಕರೊನಾ ವೈರಸ್​ ಸೋಂಕನ್ನು ಸಂಪೂರ್ಣವಾಗಿ ಹತೋಟಿಗೆ ತರಲು ಇನ್ನಷ್ಟು ದಿನ ಲಾಕ್​ಡೌನ್​​ ಮುಂದುವರೆಸುವ ಯೋಜನೆ ಇದೆ. ಶೀಘ್ರದಲ್ಲೇ ಅವರು ಪ್ರಕಟಿಸಲಿದ್ದಾರೆ ಎಂದು ತಿಳಿದು ಬಂದಿದೆ (ಏಜೆನ್ಸೀಸ್​)
ಗೆದ್ದ ಹೃದಯವನ್ನು ಕೋವಿಡ್​ಗೆ ದಾನ ಮಾಡಿದ ಸಾನಿಯಾ ಮಿರ್ಜಾ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:11 − eight =
Remember me
