ಮುಂಬೈ:ಮಹಾರಾಷ್ಟ್ರದ ಸಿಂಧುದುರ್ಗ ಜಿಲ್ಲೆಯ ಕೋಟೆಯಲ್ಲಿದ್ದ ಮರಾಠ ರಾಜ ಛತ್ರಪತಿ ಶಿವಾಜಿ ಮಹಾರಾಜರ ಪ್ರತಿಮೆ ಕುಸಿದಿದೆ. 2023 ಡಿಸೆಂಬರ್ 4ರಂದು ನೌಕಾಪಡೆಯ ದಿನದಂದು ಪ್ರಧಾನಿ ಮೋದಿ ಈ ಪ್ರತಿಮೆಯನ್ನು ಅನಾವರಣಗೊಳಿಸದರು.
ಇದನ್ನು ಓದಿ:ಸಂಸದೆ ಕಂಗನಾ ರಣಾವತ್​ಗೆ ಛೀಮಾರಿ ಹಾಕಿದ ಬಿಜೆಪಿ; ವಿವಾದ ಸೃಷ್ಟಿಸುವ ಹೇಳಿಕೆ ನೀಡದಂತೆ ವಾರ್ನಿಂಗ್​​
Earlier this evening, unveiled a grand statue of Chhatrapati Shivaji at Rajkot fort.pic.twitter.com/ucFracNM5r
ಮಾಲ್ವಾನ್‌ನ ರಾಜ್‌ಕೋಟ್ ಕೋಟೆಯಲ್ಲಿ 35 ಅಡಿ ಎತ್ತರದ ರಾಜ ಛತ್ರಪತಿ ಶಿವಾಜಿ ಮಹಾರಾಜರ ಪ್ರತಿಮೆ ಮಧ್ಯಾಹ್ನ 1 ಗಂಟೆ ಸುಮಾರಿಗೆ ಕುಸಿದಿದೆ. ಜಿಲ್ಲೆಯಲ್ಲಿ ಕಳೆದ ಎರಡ್ಮೂರು ದಿನಗಳಿಂದ ಗಾಳಿ ಸಮೇತ ಮಳೆಯಾಗುತ್ತಿದೆ. ಪೊಲೀಸ್ ಹಾಗೂ ಜಿಲ್ಲಾಡಳಿತದ ಹಿರಿಯ ಅಧಿಕಾರಿಗಳು ಸ್ಥಳಕ್ಕೆ ಆಗಮಿಸಿ ಪರಿಸ್ಥಿತಿಯ ಅವಲೋಕನ ನಡೆಸುತ್ತಿದ್ದಾರೆ. ಪ್ರತಿಮೆ ಬೀಳಲು ಕಾರಣ ಏನೆಂಬುದನ್ನು ತಿಳಿಯಲು ತಜ್ಞರು ಪ್ರಯತ್ನಿಸುತ್ತಾರೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಪ್ರತಿಮೆ ಕುಸಿದಿರುವುದಕ್ಕೆ ಪ್ರತಿಪಕ್ಷಗಳು ಸರ್ಕಾರವನ್ನು ದೂಷಿಸುತ್ತಿವೆ. ಪ್ರಧಾನಿ ನರೇಂದ್ರ ಮೋದಿ ಅವರು ಕಳೆದ ವರ್ಷ ಡಿಸೆಂಬರ್​ 4ರಂದು ಈ ಸ್ಮಾರಕವನ್ನು ಉದ್ಘಾಟಿಸಿದರು. ಒಂದು ವರ್ಷ ಪೂರ್ಣಗೊಳ್ಳುವ ಮೊದಲೇ ಪ್ರತಿಮೆ ಕುಸಿದಿದೆ. ಈ ಪ್ರತಿಮೆಯ ಕಾಮಗಾರಿ ಕಳಪೆ ಗುಣಮಟ್ಟದ್ದಾಗಿದೆ ಎಂಬುದು ಸ್ಪಷ್ಟವಾಗಿದೆ ಎಂದು ಆರೋಪಿಸಿದ್ದಾರೆ. ಅಷ್ಟೆ ಅಲ್ಲದೆ ಬಿಜೆಪಿಯ ಭ್ರಷ್ಟ ಆಡಳಿತವು ಛತ್ರಪತಿ ಶಿವಾಜಿ ಮಹಾರಾಜರನ್ನು ಮತ್ತು ಮಹಾರಾಷ್ಟ್ರವನ್ನು ಅವಮಾನಿಸಿದೆ ಎಂದು ದೂಷಿಸುತ್ತಿರುವ ಪೋಸ್ಟ್​​ ಸಾಮಾಜಿಕ ಜಾಲತಾಣದಲ್ಲಿ ವೈರಲ್​ ಆಗುತ್ತಿದೆ.
Gujarat Model!!!The BJP's corrupt governance has insulted Chhatrapati Shivaji Maharaj and Maharashtra. A statue of Chhatrapati Shivaji Maharaj, inaugurated by PM Modi on December 4, 2023, collapsed today, with locals blaming poor construction.#RainfallinGujaratpic.twitter.com/wwD87Tblcv
ಘಟನೆಯ ಬಗ್ಗೆ ನನ್ನ ಬಳಿ ಸಂಪೂರ್ಣ ವಿವರಗಳಿಲ್ಲ. ಆದರೆ ಪಿಡಬ್ಲ್ಯೂಡಿ ಸಚಿವ ರವೀಂದ್ರ ಚವ್ಹಾಣ್, ಸಿಂಧುದುರ್ಗ ಜಿಲ್ಲೆಯ ಉಸ್ತುವಾರಿ ಸಚಿವರೂ ಸಹ ಈ ಬಗ್ಗೆ ಕೂಲಂಕಷ ತನಿಖೆ ನಡೆಸಲಾಗುವುದು ಎಂದು ಹೇಳಿದ್ದಾರೆ. ಕುಸಿದು ಬಿದ್ದ ಪ್ರತಿಮೆಯ ಜಾಗದಲ್ಲಿ ಹೊಸ ಪ್ರತಿಮೆ ಸ್ಥಾಪಿಸಲಾಗುವುದು ಎಂದು ಮಹಾರಾಷ್ಟ್ರ ಸಚಿವ ದೀಪಕ್ ಕೇಸರ್ಕರ್ ಭರವಸೆ ನೀಡಿದರು.(ಏಜೆನ್ಸೀಸ್​​)
ಲಡಾಖ್​ನಲ್ಲಿ 5 ಹೊಸ ಜಿಲ್ಲೆಗಳ ರಚನೆಗೆ ನಿರ್ಧಾರ; ತೀರ್ಮಾನದ ಹಿಂದಿನ ಕಾರಣ ತಿಳಿಸಿದ ಅಮಿತ್​ ಷಾ
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:3 × five =
Remember me
