ನವದೆಹಲಿ:ಪ್ಯಾರಿಸ್​ ಒಲಿಂಪಿಕ್ಸ್​​ ಕ್ರೀಡಾಕೂಟದಲ್ಲಿ ಜಾವೆಲಿನ್​ ಎಸೆತದಲ್ಲಿ ಭಾರತದ ಚಿನ್ನದ ಹುಡುಗ ನೀರಜ್​ ಚೋಪ್ರಾ ಬೆಳ್ಳಿ ಪದಕ ಗೆದ್ದಿದ್ದಾರೆ. ಚೋಪ್ರಾ ಅವರ ಈ ಸಾಧನೆ ಮತ್ತು ಸಮರ್ಪಣಾ ಮನೋಭಾವವನ್ನು ಪ್ರಧಾನಿ ಮೋದಿ ದೂರವಾಣಿ ಕರೆ ಮಾಡಿ ಶ್ಲಾಘಿಸಿದರು.
ಇದನ್ನು ಓದಿ:ಪಾಕಿಸ್ತಾನದ ಚಿನ್ನದ ಹುಡುಗ ಅರ್ಷದ್ ನದೀಮ್; ಮಗನ ಸಾಧನೆ ಬಗ್ಗೆ ತಂದೆಯ ಮೆಚ್ಚುಗೆ ಮಾತು
ಪ್ರಧಾನಿ ನರೇಂದ್ರ ಮೋದಿ ಅವರು ನೀರಜ್ ಚೋಪ್ರಾ ಅವರೊಂದಿಗೆ ದೂರವಾಣಿ ಕರೆ ಮಾಡಿ ಮಾತನಾಡಿ ಬೆಳ್ಳಿ ಪದಕ ಸಾಧಿಸಿದ ಅವರನ್ನು ಅಭಿನಂದಿಸಿ, ನೀರಜ್​​ ಅವರ ಗಾಯದ ಬಗ್ಗೆ ವಿಚಾರಿಸಿದ್ದಾರೆ. ನೀರಜ್​ ಚೋಪ್ರಾ ಅವರ ತಾಯಿಯ ಕ್ರೀಡಾ ಮನೋಭಾವವನ್ನು ಶ್ಲಾಘಿಸಿದ್ದಾರೆ. ನಾವು ತುಂಬಾ ಸಂತೋಷವಾಗಿದ್ದೇವೆ. ನಮಗೆ ಬೆಳ್ಳಿಯೂ ಬಂಗಾರಕ್ಕೆ ಸಮ. ಒಲಿಂಪಿಕ್ಸ್​ನಲ್ಲಿ ಚಿನ್ನದ ಪದಕ ಗೆದ್ದ ಅರ್ಷದ್ ನದೀಮ್ ಕೂಡ ನಮ್ಮ ಮಗನಿದ್ದಂತೆ ಎಂದು ನೀರಜ್​ ಚೋಪ್ರಾ ತಾಯಿ ಹೇಳಿದ್ದರು.
#WATCH| PM Narendra Modi spoke to Javelin thrower Neeraj Chopra and congratulated him on the Silver medal. He also enquired about his injury and lauded the sportsman spirit shown by his mother.#Paris2024#Paris2024Olympicpic.twitter.com/DvVEMcNbPQ
ಪ್ರಧಾನಿ ಮೋದಿ ಅವರು ಫೋನ್‌ನಲ್ಲಿ ಮಾತನಾಡುವ ಮೊದಲು, ನೀರಜ್ ಚೋಪ್ರಾ ಶ್ರೇಷ್ಠತೆಗೆ ನಿಜವಾದ ಉದಾಹರಣೆ. ಅವರು ತಮ್ಮ ಪ್ರತಿಭೆಯನ್ನು ಮತ್ತೆ ತೋರಿಸಿದ್ದಾರೆ. ಅವರು ಮತ್ತೊಮ್ಮೆ ಒಲಿಂಪಿಕ್ಸ್‌ನಲ್ಲಿ ಯಶಸ್ವಿಯಾಗಿರುವುದು ಭಾರತಕ್ಕೆ ಸಂತಸ ತಂದಿದೆ. ಬೆಳ್ಳಿ ಪದಕ ಗೆದ್ದಿರುವ ಅವರಿಗೆ ಅಭಿನಂದನೆಗಳು. ಅವರು ತಮ್ಮ ಕನಸುಗಳನ್ನು ನನಸಾಗಿಸಲು ಮತ್ತು ನಮ್ಮ ದೇಶವನ್ನು ಹೆಮ್ಮೆಪಡುವಂತೆ ಮಾಡಲು ಮುಂಬರುವ ಅಸಂಖ್ಯಾತ ಕ್ರೀಡಾಪಟುಗಳಿಗೆ ಸ್ಫೂರ್ತಿ ನೀಡುವುದನ್ನು ಮುಂದುವರಿಸುತ್ತಾರೆ ಎಂದು ಸಾಮಾಜಿಕ ಜಾಲತಾಣದಲ್ಲಿ ಮಾಡಿದ್ದ ಪೋಸ್ಟ್​​ನಲ್ಲಿ ತಿಳಿಸಿದ್ದರು.
ನೀರಜ್ ಚೋಪ್ರಾ ಸತತ ಎರಡನೇ ಒಲಿಂಪಿಕ್ಸ್‌ನಲ್ಲಿ ಪದಕ ಗೆದ್ದಿದ್ದಾರೆ. ನೀರಜ್ ಕಳೆದ ಒಲಿಂಪಿಕ್ಸ್‌ನಲ್ಲಿ 87.58 ಮೀಟರ್​​ ಎಸೆದು ಚಿನ್ನದ ಪದಕ ಗೆದ್ದಿದ್ದರು. ಈ ಬಾರಿ ಪ್ಯಾರಿಸ್ ಒಲಿಂಪಿಕ್ಸ್‌ನಲ್ಲಿ 89.45 ಮೀಟರ್ ಎಸೆತಯವ ಮೂಲಕ ತಮ್ಮದೇ ದಾಖಲೆಯನ್ನು ಮುರಿದಿದ್ದಾರೆ.(ಏಜೆನ್ಸೀಸ್​​)
ಅಬಕಾರಿ ನೀತಿ ಪ್ರಕರಣ; ದೆಹಲಿ ಮಾಜಿ ಡಿಸಿಎಂಗೆ ಜಾಮೀನು ಮಂಜೂರು ಮಾಡಿದ ಸುಪ್ರೀಂಕೋರ್ಟ್​​​
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:twelve + seven =
Remember me
