ಬೆಲ್ಜಿಯಂ:ಭಾರತ-ಯುರೋಪಿಯನ್​ ಒಕ್ಕೂಟದ ಶೃಂಗಸಭೆಯಲ್ಲಿ ಪಾಲ್ಗೊಳ್ಳಲು ಬ್ರಸೆಲ್ಸ್​ಗೆ ತೆರಳಬೇಕಿದ್ದ ಪ್ರಧಾನಿ ನರೇಂದ್ರ ಮೋದಿಯವರ ಪ್ರಯಾಣ ರದ್ದುಗೊಂಡಿದೆ.
ಕೊರೊನಾ ವೈರಸ್ ಆತಂಕ ಎಲ್ಲೆಡೆ ಮನೆ ಮಾಡಿದೆ. ಪಸರಿಸುತ್ತಿರುವ ವೇಗವೂ ಜಾಸ್ತಿಯಾಗಿದೆ. ಈ ಹಿನ್ನೆಲೆಯಲ್ಲಿ ನರೇಂದ್ರ ಮೋದಿಯವರು ಬ್ರಸೆಲ್ಸ್​ಗೆ ತೆರಳುತ್ತಿಲ್ಲ ಎಂದು ಕೇಂದ್ರ ವಿದೇಶಾಂಗ ವ್ಯವಹಾರಗಳ ಸಚಿವಾಲಯ ಮಾಹಿತಿ ನೀಡಿದೆ.
ಕೊರೊನಾ ವೈರಸ್​ ಹರಡುತ್ತಿರುವ ಈ ಸಂದರ್ಭದಲ್ಲಿ ವಿದೇಶಿ ಪ್ರಯಾಣ ಸರಿಯಲ್ಲ ಎಂದು ಎರಡೂ ರಾಷ್ಟ್ರಗಳ ಆರೋಗ್ಯ ಇಲಾಖೆಗಳು ಸಲಹೆ ನೀಡಿವೆ. ಹಾಗಾಗಿ ಸದ್ಯ ಶೃಂಗಸಭೆ ನಡೆಸಲಾಗುವುದಿಲ್ಲ. ಪ್ರಧಾನಿ ನರೇಂದ್ರ ಮೋದಿಯವರೂ ಬ್ರಸೆಲ್ಸ್​ಗೆ ತೆರಳುವುದಿಲ್ಲ. ಬರುವ ದಿನಗಳಲ್ಲಿ ಪರಸ್ಪರ ಅನುಕೂಲಕರ ದಿನವನ್ನು ನೋಡಿಕೊಂಡು ಶೃಂಗಸಭೆಯನ್ನು ನಿಗದಿ ಮಾಡಲಾಗುವುದು ಎಂದು ಎಂಇಎಯ ವಕ್ತಾರ ರವೀಶ್​ ಕುಮಾರ್​ ತಿಳಿಸಿದ್ದಾರೆ.
ಈ ವರ್ಷದ ಭಾರತ-ಯುರೋಪಿಯನ್ ಒಕ್ಕೂಟದ ಶೃಂಗಸಭೆ ಮಾರ್ಚ್​ 13ರಂದು ಬೆಲ್ಜಿಯಂನ ಬ್ರಸೆಲ್ಸ್​ನಲ್ಲಿ ನಡೆಯಬೇಕಿತ್ತು. ಬ್ರಸೆಲ್ಸ್​ನಲ್ಲಿ ಇರುವ ಯುರೋಪಿಯನ್ ಒಕ್ಕೂಟದ ಆಡಳಿತ ಕಚೇರಿಯಲ್ಲಿ ಇಬ್ಬರಿಗೆ ಕೊರೊನಾ ಸೋಂಕು ತಗುಲಿದ್ದು, ಚಿಕಿತ್ಸೆ ನೀಡಲಾಗುತ್ತಿದೆ ಎಂದು ಯುರೋಪಿಯನ್ ಮೂಲಗಳು ತಿಳಿಸಿವೆ. (ಏಜೆನ್ಸೀಸ್​)
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:2 × 2 =
Remember me
