ಕಲ್ಕತ್ತ:ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆ ಫಲಿತಾಂಶದ ನಂತರ ಆ ರಾಜ್ಯದಲ್ಲಿ ಅಲ್ಲಲ್ಲಿ ಹಿಂಸಾಚಾರಗಳು ನಡೆಯುತ್ತಿರುವ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ತೀವ್ರ ಕಳವಳ ವ್ಯಕ್ತಪಡಿಸಿದ್ದಾರೆ. ಈ ಕುರಿತು ಅವರು ಪಶ್ಚಿಮ ಬಂಗಾಳ ರಾಜ್ಯಪಾಲ ಜಗದೀಪ್ ಧನಕರ್ ಅವರ ಜೊತೆ ಮಾತುಕತೆ ನಡೆಸಿದ್ದಾರೆ.
ಈ ಬಗ್ಗೆ ಟ್ವಿಟ್ಟರ್​ನಲ್ಲಿ ಮಾಹಿತಿ ಹಂಚಿಕೊಂಡಿರುವ ಜಗದೀಪ್ ಧನಕರ್ ಅವರು, ಚುನಾವಣೆ ನಂತರ ಪಶ್ಚಿಮ ಬಂಗಾಳದಲ್ಲಿ ನಡೆಯುತ್ತಿರುವ ರಾಜಕೀಯ ಹಿಂಸಾಚಾರಗಳ ಬಗ್ಗೆ ಹಾಗೂ ಕಾನೂನು ಸುವ್ಯವಸ್ಥೆ ಕುಸಿಯುತ್ತಿರುವ ಬಗ್ಗೆ ಪ್ರಧಾನಿ ಅವರು ಇಂದು ನನಗೆ ಫೋನ್ ಕರೆ ಮಾಡಿ ಮಾತನಾಡಿ, ತೀವ್ರ ಕಳವಳ ವ್ಯಕ್ತಪಡಿಸಿದ್ದಾರೆ. ಈ ಬಗ್ಗೆ ನಾನೂ ಕೂಡ ಪ್ರಧಾನಿಯವರ ಜೊತೆ ಮಾಹಿತಿ ಹಂಚಿಕೊಂಡಿದ್ದು, ರಾಜ್ಯದಲ್ಲಿ ಸಂಬಂಧಿಸಿದ ಪ್ರಾಧಿಕಾರಗಳು ಸೂಕ್ತ ಕ್ರಮ ಕೈಗೊಳ್ಳುತ್ತಾರೆ ಎಂಬ ಭರವಸೆ ಇದೆ ಎಂದು ಟ್ವೀಟ್ ಮಾಡಿದ್ದಾರೆ.
PM called and expressed his serious anguish and concern at alarmingly worrisome law & order situation@MamataOfficial
I share grave concerns@PMOIndiagiven that violence vandalism, arson. loot and killings continue unabated.
Concerned must act in overdrive to restore order.
— Jagdeep Dhankhar Vice-President of India (@jdhankhar1)May 4, 2021

ಇನ್ನು ಬಂಗಾಳ ಹಿಂಸಾಚಾರಗಳ ಬಗ್ಗೆ ಪ್ರತಿಕ್ರಿಯಿಸಿರುವ ಬಿಜೆಪಿ ವಕ್ತಾರ ಸಂದೀಪ್ ಪಾತ್ರಾ ಅವರು, ಹಿಂದೆಂದೂ ಕಂಡು ಕೇಳರಿಯದ ಚುನಾವಣೋತ್ತರ ರಾಜಕೀಯ ಹಿಂಸಾಚಾರಕ್ಕೆ ಭಾರತ ಸಾಕ್ಷಿಯಾಗಿದೆ ಎಂದು ಬಂಗಾಳ ಹಿಂಸಾಚಾರ ಕಂಡಿಸಿದ್ದಾರೆ. ಬಿಜೆಪಿ ಕಾರ್ಯಕರ್ತರನ್ನು ಅವರ ಮನೆಯವರನ್ನು ಟಿಎಂಸಿ ಕಾರ್ಯಕರ್ತರು ಮನಸೋಇಚ್ಚೇ ಥಳಿಸುತ್ತಿದ್ದಾರೆ. ಇದನ್ನು ನೋಡಿ ದೀದಿ ಕಣ್ಮುಚ್ಚಿ ಕುಳಿತುಕೊಂಡಿದ್ದಾರೆ ಎಂದು ದೂರಿದ್ದಾರೆ.
ಇನ್ನು ಬಿಜೆಪಿ ಆರೋಪಗಳನ್ನು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ತಳ್ಳಿ ಹಾಕಿದ್ದು, ಕೇಂದ್ರಿಯ ಭದ್ರತಾ ಪಡೆಗಳನ್ನು ಬಳಸಿಕೊಂಡು ಬಿಜೆಪಿ ಕಾರ್ಯಕರ್ತರು ಟಿಎಂಸಿ ಕಾರ್ಯಕರ್ತರ ಮೇಲೆ ಗೂಂಡಾಗಿರಿ ನಡೆಸುತ್ತಿದ್ದಾರೆ ಎಂದು ಆರೋಪಿಸಿದ್ದಾರೆ.
ಹಾರ ಹಾಕುವ ಮೊದಲು 2ರ ಮಗ್ಗಿ ಹೇಳು ಎಂದ ವಧು! ಸ್ವಲ್ಪ ಹೊತ್ತಲ್ಲಿ ಮದುವೆಯೇ ಕ್ಯಾನ್ಸಲ್​!

ಅಕೌಂಟ್​ ಬ್ಯಾನ್​: ಟ್ವಿಟ್ಟರ್​ ವಿರುದ್ಧ ಗುಡುಗಿದ ಕಂಗನಾ ರಣಾವತ್

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:seventeen − thirteen =
Remember me
