ತುಮಕೂರು:ಸಿದ್ಧಗಂಗಾ ಮಠದ ಲಿಂಗೈಕ್ಯ ಡಾ. ಶಿವಕುಮಾರ ಸ್ವಾಮೀಜಿಗಳ 113ನೇ ಪುಣ್ಯಜಯಂತಿ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಟ್ವೀಟ್​ ಮೂಲಕ ಗೌರವ ನಮನ ಸಲ್ಲಿಸಿದ್ದಾರೆ.
ಶಿವಕುಮಾರ ಸ್ವಾಮೀಜಿಗಳ ಜನ್ಮದಿನಕ್ಕೆ ಪ್ರತಿವರ್ಷವೂ ನರೇಂದ್ರ ಮೋದಿ ಟ್ವೀಟ್​ ಮೂಲಕ ಶುಭಾಶಯ ಸಲ್ಲಿಸುತ್ತಿದ್ದರು. ಶ್ರೀಗಳು ಲಿಂಗೈಕ್ಯರಾದ ಬಳಿಕ ಇದು ಮೊದಲ ಪುಣ್ಯಜಯಂತಿ ಆಗಿದ್ದು, ಮೋದಿಯವರು ಗೌರವ ನಮನ ಸಲ್ಲಿಸಿದ್ದಾರೆ.
ಡಾ. ಶಿವಕುಮಾರ ಸ್ವಾಮೀಜಿಗಳು ಸಮಾಜಕ್ಕೆ ನೀಡಿದ ಉತ್ಕೃಷ್ಟ ಕೊಡುಗೆಗಳು ಸದಾ ಸ್ಫೂರ್ತಿ. ಅವರ ಪಾವಿತ್ರ್ಯತೆಗೆ ನಮನಗಳು ಎಂದು ಹೇಳಿದ್ದಾರೆ. ಸ್ವಾಮೀಜಿಯವರಿಗೆ ಗೌರವ ನಮನಗಳು ಎಂದು ಕನ್ನಡದಲ್ಲೇ ಟ್ವೀಟ್ ಮಾಡಿದ್ದಾರೆ.
ಶ್ರೀಗಳು 2019ರ ಜನವರಿ 21ರಂದು ಲಿಂಗೈಕ್ಯರಾದಾಗ ಪ್ರಧಾನಿ ನರೇಂದ್ರ ಮೋದಿ ಆಗಮಿಸುತ್ತಾರೆ ಎಂದು ಹೇಳಲಾಗಿತ್ತು. ಆದರೆ ಕೆಲವು ಕಾರಣಗಳಿಂದ ಅಂದು ಮೋದಿಯವರು ಬಂದಿರಲಿಲ್ಲ. ಈ ವರ್ಷ ಜನವರಿ 2ರಂದು ತುಮಕೂರಿಗೆ ಬಂದಿದ್ದ ಪ್ರಧಾನಿ ಮೋದಿ, ಶಿವಕುಮಾರ ಸ್ವಾಮೀಜಿಗಳ ಗದ್ದುಗೆಯ ದರ್ಶನ ಪಡೆದಿದ್ದರು. ಹಾಗೇ ಸ್ವಾಮೀಜಿ ಹೆಸರಿನ ವಸ್ತು ಸಂಗ್ರಹಾಲಯಕ್ಕೆ ಶಂಕುಸ್ಥಾಪನೆ ನೆರವೇರಿಸಿದ್ದಾರೆ.
Tributes to His Holiness Dr. Sree Sree Sree Sivakumara Swamigalu on his Jayanti. His rich contribution to society continues to inspire.
ಪರಮ‌ಪೂಜ್ಯ ಡಾ. ಶ್ರೀ ಶ್ರೀ ಶ್ರೀ ಶಿವಕುಮಾರ ಸ್ವಾಮೀಜಿ ಅವರ ಜಯಂತಿ ಅಂಗವಾಗಿ ಅವರಿಗೆ ಗೌರವ ನಮನಗಳು. ಸಮಾಜಕ್ಕೆ ಸ್ವಾಮೀಜಿ ನೀಡಿರುವ ಉತ್ಕೃಷ್ಟ ಕೊಡುಗೆ ಸದಾ ಸ್ಮರಣೀಯ.
— Narendra Modi (@narendramodi)April 1, 2020

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:one + 10 =
Remember me
