ನವದೆಹಲಿ:ಕೃಷಿ ಕಾಯ್ದೆ ವಿರೋಧಿಸಿ ದೇಶದಲ್ಲಿ ನಡೆಯುತ್ತಿರುವ ರೈತ ಹೋರಾಟ ದಿನೇದಿನೆ ಕಾವು ಹೆಚ್ಚಿಸಿಕೊಳ್ಳುತ್ತಲೇ ಇದೆ. ಕೇಂದ್ರದೊಂದಿಗಿನ ಮಾತುಕಥೆಯೂ ಹಲವು ಬಾರಿ ವಿಫಲವಾಗಿದೆ. ಇದೀಗ ರೈತರೊಂದಿಗೆ ಮಾತನಾಡಲು ಪ್ರಧಾನಿ ನರೇಂದ್ರ ಮೋದಿಯವರು ಮುಂದೆ ಬಂದಿದ್ದಾರೆ. ಕ್ರಿಸ್​ಮಸ್​ ದಿನವಾದ ಡಿಸೆಂಬರ್​ 25ರಂದು ಪ್ರಧಾನಿಯವರು ದೇಶದ ರೈತರೊಂದಿಗೆ ಸಭೆ ನಡೆಸಲಿದ್ದು, 9 ಕೋಟಿ ರೈತರನ್ನುದ್ದೇಶಿಸಿ ಮಾತನಾಡಲಿದ್ದಾರೆ.
ಇದನ್ನೂ ಓದಿ:FACT CHECK | ದುಬೈ ಏರ್​ಪೋರ್ಟ್​ ರನ್​ವೇ ಕ್ರಿಸ್ಮಸ್​​ ಟ್ರೀ ಲೈಟಿಂಗ್​ನಲ್ಲಿ ಅಲಂಕೃತವಾಗಿದೆಯಾ?
ಶುಕ್ರವಾರದಂದು ಮೋದಿಯವರು ಆರು ರಾಜ್ಯಗಳ ರೈತರೊಂದಿಗೆ ಸಭೆ ನಡೆಸಲಿದ್ದಾರೆ. ದೇಶದಲ್ಲಿ ರೈತರ ಕಲ್ಯಾಣಕ್ಕಾಗಿ ಕೇಂದ್ರ ಸರ್ಕಾರ ತೆಗೆದುಕೊಂಡಿರುವ ಕ್ರಮಗಳ ಬಗ್ಗೆ ಅನುಭವವನ್ನು ಈ ರೈತರು ಪ್ರಧಾನಿಯೊಂದಿಗೆ ಹಂಚಿಕೊಳ್ಳಲಿದ್ದಾರೆ. ನೂತನ ಕೃಷಿ ಕಾಯ್ದೆಗಳ ಬಗ್ಗೆಯೂ ಮೋದಿಯವರು ಮಾತನಾಡಲಿದ್ದಾರೆ. ಅದರ ಜತೆ ಪಿಎಂ ಕಿಸಾನ್​ ಯೋಜನೆಯ 18,000 ಕೋಟಿ ರೂಪಾಯಿ ಆರ್ಥಿಕ ಸಹಾಯವನ್ನೂ ಬಿಡುಗಡೆ ಮಾಡಲಿದ್ದಾರೆ.
ಇದನ್ನೂ ಓದಿ:ನೇಣು ಹಾಕಿಕೊಂಡವರ ರೀತಿ ಸೆಲ್ಫಿ ತೆಗೆದುಕೊಳ್ಳಲು ಹೋದಳು; ಸ್ವಲ್ಪ ಹೊತ್ತಲ್ಲೇ ಹೆಣವಾಗಿ ನೇಣಿನಲ್ಲಿ ನೇತಾಡುತ್ತಿದ್ದಳು!
ದೇಶದ ರೈತರಿಗೆ ಕೇಂದ್ರ ಕೃಷಿ ಸಚಿವ ನರೇಂದ್ರ ತೋಮರ್​ ಅವರು ಪತ್ರವನ್ನು ಬರೆದಿದ್ದು, ಆ ಪತ್ರವನ್ನೂ ಸಭೆಯಲ್ಲಿ ಬಿತ್ತರಿಸಲಾಗುವುದು ಎನ್ನಲಾಗಿದೆ. (ಏಜೆನ್ಸೀಸ್​)
ಈಗಷ್ಟೇ ಮದುವೆಯಾಗಿರುವ ಗಾಯಕಿಗೆ ಯೌವನದ ಮಗ! ಅಭಿಮಾನಿಗಳಿಗೆ ಶಾಕ್​ ನೀಡಿದ ನೇಹಾ ಕಕ್ಕರ್​!

ಡಾನ್ಸ್​ ಮಾಡಲು ವಧುವನ್ನು ಎಳೆದ ವರನ ಸ್ನೇಹಿತರು- ಮುಂದೆ ಆಗಬಾರದ್ದೆಲ್ಲಾ ಆಗೋಯ್ತು!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:18 + 7 =
Remember me
