ಹೊಸದಿಲ್ಲಿ:ಇಂದು ಪ್ರಧಾನಿ ನರೇಂದ್ರ ಮೋದಿ ಅವರು ಆರು ಹೊಸ ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲುಗಳಿಗೆ ಚಾಲನೆ ನೀಡಲಿದ್ದು, ಹಲವು ಯೋಜನೆಗಳಿಗೆ ಚಾಲನೆ ನೀಡಲಿದ್ದಾರೆ. ಅದರ ವಿವರ ಹೀಗಿದೆ.
ಇದನ್ನೂ ಓದಿ:ಸೆಂಚುರಿಯನ್ ಟೆಸ್ಟ್​ ಸೋಲಿನ ಬೆನ್ನಲ್ಲೇ ಭಾರತಕ್ಕೆ ಅಂಕ ಕಡಿತದ ಶಾಕ್; ಡಬ್ಲ್ಯುಟಿಸಿ ಅಂಕಪಟ್ಟಿಯಲ್ಲಿ ಭಾರಿ ಕುಸಿತ!​
ಹೊಸ ವಂದೇ ಭಾರತ್ ಮಾರ್ಗಗಳು:ಶ್ರೀ ಮಾತಾ ವೈಷ್ಣೋದೇವಿ ಕತ್ರಾ-ನವದೆಹಲಿ, ಅಮೃತಸರ-ದೆಹಲಿ, ಕೊಯಮತ್ತೂರು-ಬೆಂಗಳೂರು, ಮಂಗಳೂರು-ಮಡ್ಗಾಂವ್, ಜಲ್ನಾ-ಮುಂಬೈ ಮತ್ತು ಅಯೋಧ್ಯೆ-ಆನಂದ ವಿಹಾರ್ ಟರ್ಮಿನಲ್. ರೈಲುಗಳ ಹೊಸ ಮಾರ್ಗಗಳನ್ನು ಪ್ರಧಾನಿ ಮೋದಿ ಅವರು ಅಯೋಧ್ಯೆಯಿಂದ ವಾಸ್ತವಿಕವಾಗಿ ಪ್ರಾರಂಭಿಸಲಿದ್ದು, ಅಲ್ಲಿ ಅವರು ‘ಮಹರ್ಷಿ ವಾಲ್ಮೀಕಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಅಯೋಧ್ಯಾ ಧಾಮ್ ಸಹ ಉದ್ಘಾಟಿಸಲಿದ್ದಾರೆ.
ಇದರೊಟ್ಟಿಗೆ ಪ್ರಧಾನಿ ಮೋದಿ ಅವರು ಬೆಂಗಳೂರಿನ ದರ್ಭಾಂಗಾ-ಅಯೋಧ್ಯೆ-ಆನಂದ್ ವಿಹಾರ್ ಟರ್ಮಿನಲ್ ಮತ್ತು ಮಾಲ್ಡಾ ಟೌನ್-ಸರ್ ಎಂ. ವಿಶ್ವೇಶ್ವರಯ್ಯ ಟರ್ಮಿನಲ್​ ನಡುವೆ ಎರಡು ಅಮೃತ್ ಭಾರತ್ ರೈಲುಗಳಿಗೆ ಚಾಲನೆ ನೀಡಲಿದ್ದಾರೆ. ಇವುಗಳ ಹೊರತಾಗಿ, ರಾಮಮಂದಿರ ವಿಗ್ರಹ ಪ್ರತಿಷ್ಠಾಪನೆ ಸಮಾರಂಭಕ್ಕೆ ಕೆಲವೇ ದಿನಗಳ ಮೊದಲು ಅಯೋಧ್ಯೆಯಲ್ಲಿ ನಾಗರಿಕ ಸೌಲಭ್ಯಗಳನ್ನು ನವೀಕರಿಸಲು ಮತ್ತು ವಿಶ್ವದರ್ಜೆಯ ಮೂಲಸೌಕರ್ಯಗಳನ್ನು ಅಭಿವೃದ್ಧಿಪಡಿಸಲು 11,100 ಕೋಟಿ ರೂ.ಗಿಂತ ಹೆಚ್ಚಿನ ಮೊತ್ತದ ಯೋಜನೆಗಳನ್ನು ಪ್ರಾರಂಭಿಸಲಿದ್ದಾರೆ.
ಇದನ್ನೂ ಓದಿ:5 ವರ್ಷದಲ್ಲಿ 50 ಗುಪ್ತಚರ ಉಪಗ್ರಹ ಉಡಾವಣೆ ಮಾಡಲಿದೆ ಇಸ್ರೋ
ಅಯೋಧ್ಯೆಯಲ್ಲಿ 2,180 ಕೋಟಿ ರೂ.ಗೂ ಅಧಿಕ ವೆಚ್ಚದಲ್ಲಿ ಅಭಿವೃದ್ಧಿ ಪಡಿಸಲಾದ ಗ್ರೀನ್‌ಫೀಲ್ಡ್ ಟೌನ್‌ಶಿಪ್‌ನ ಶಂಕುಸ್ಥಾಪನೆ ಮತ್ತು ಸುಮಾರು 300 ಕೋಟಿ ರೂ. ವೆಚ್ಚದಲ್ಲಿ ವಸತಿ ಯೋಜನೆಯನ್ನು ಅಭಿವೃದ್ಧಿಪಡಿಸುವುದು ಕೂಡ ಇದರಲ್ಲಿ ಸೇರಿದೆ. ಉತ್ತರಪ್ರದೇಶದ ಇತರ ಭಾಗಗಳಿಗೆ 4,600 ಕೋಟಿ ರೂಪಾಯಿಗೂ ಹೆಚ್ಚು ಮೌಲ್ಯದ ಯೋಜನೆಗಳಿಗೆ ಪ್ರಧಾನಿ ಚಾಲನೆ ನೀಡಲಿದ್ದಾರೆ.
ಇಂದು ಅಯೋಧ್ಯೆಯ ದೇವಾಲಯದ ಪಟ್ಟಣದಲ್ಲಿ ವಿಮಾನ ನಿಲ್ದಾಣವನ್ನು ಉದ್ಘಾಟಿಸಿದ ಬಳಿಕ ಪ್ರಧಾನಿ ಮೋದಿ ರೋಡ್‌ಶೋನಲ್ಲಿ ಭಾಗವಹಿಸಲಿದ್ದು, ಸಾರ್ವಜನಿಕ ಸಭೆಯನ್ನು ಉದ್ದೇಶಿಸಿ ಮಾತನಾಡಲಿದ್ದಾರೆ,(ಏಜೆನ್ಸೀಸ್).
ಈ ರಾಶಿಯವರಿಗಿಂದು ಬೀಗರಿಂದ ಧನಾಗಮನ: ನಿತ್ಯಭವಿಷ್ಯ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:18 + 10 =
Remember me
