ಚಂಡೀಗಢ:50ಕ್ಕೂ ಹೆಚ್ಚು ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇಲೆ ಹರಿಯಾಣದ ಜಿಂದ್ ಜಿಲ್ಲೆಯ ಸರ್ಕಾರಿ ಶಾಲೆ ಪ್ರಾಂಶುಪಾಲರನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಇದನ್ನೂ ಓದಿ:ವಾಯು ಮಾಲಿನ್ಯ: ವಿಶ್ವದಲ್ಲೇ ದೆಹಲಿ ನಂ.1, ಭಾರತದ ಇನ್ನೆರಡು ನಗರಗಳೂ ಡೇಂಜರ್ 10ರಪಟ್ಟಿಯಲ್ಲಿವೆ​…ಪ್ರಾಂಶುಪಾಲರ ವಿರುದ್ಧ ವಿದ್ಯಾರ್ಥಿನಿಯರು ಲೈಂಗಿಕ ಕಿರುಕುಳದ ಆರೋಪ ಮಾಡಿದ್ದಾರೆ. ತಮ್ಮನ್ನು ಕಚೇರಿಗೆ ಕರೆಸಿಕೊಂಡು ಅಶ್ಲೀಲ ಕೃತ್ಯಗಳಲ್ಲಿ ತೊಡಗುತ್ತಿದ್ದರು ಎಂದು ಹೆಣ್ಣುಮಕ್ಕಳು ತಿಳಿಸಿರುವುದಾಗಿ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ರೇಣು ಭಾಟಿಯಾ ತಿಳಿಸಿದ್ದರು. ಬಳಿಕ ಜಿಂದ್ ಜಿಂದ್ ಡೆಪ್ಯುಟಿ ಕಮಿಷನರ್ ಮೊಹಮ್ಮದ್ ಇಮ್ರಾನ್ ರಜಾ ಆತನನ್ನು ಅಮಾನತುಗೊಳಿಸಸಲು ಆದೇಶಿಸಿದ್ದರು. ಆದರೆ ಪ್ರಾಂಶುಪಾಲ ಅಂದಿನಿಂದ ತಲೆಮರೆಸಿಕೊಂಡಿದ್ದು. ಪೊಲೀಸರು ಹುಡುಕಾಟ ನಡೆಸಿದ್ದರು.
ಸಂತ್ರಸ್ತ ಬಾಲಕಿಯರು ಇತ್ತೀಚೆಗೆ ಪ್ರಧಾನಿ ಕಚೇರಿ ಮತ್ತು ರಾಷ್ಟ್ರೀಯ ಮಹಿಳಾ ಆಯೋಗಕ್ಕೆ ಪತ್ರ ಬರೆದು ತಮಗಾದ ಅನ್ಯಾಯದ ಕುರಿತು ವಿವರಿಸಿದ್ದರು. ಇದೇ ಸಂದರ್ಭದಲ್ಲಿ ಕ್ರಮಕ್ಕೆ ಒತ್ತಾಯಿಸಿದ್ದರು.
ಆರೋಪಿ ಪ್ರಾಂಶುಪಾಲರನ್ನು ಶನಿವಾರ ಬಂಧಿಸಲಾಗಿದೆ ಎಂದು ಪ್ರಕರಣದ ತನಿಖೆ ನಡೆಸುತ್ತಿರುವ ಐವರು ಸದಸ್ಯರ ವಿಶೇಷ ತನಿಖಾ ತಂಡದ ಮುಖ್ಯಸ್ಥ ಉಪ ಪೊಲೀಸ್ ವರಿಷ್ಠಾಧಿಕಾರಿ ಅಮಿತ್ ಕುಮಾರ್ ಭಾಟಿಯಾ ತಿಳಿಸಿದ್ದಾರೆ.
ಪ್ರಾಂಶುಪಾಲ ಐದು ದಿನಗಳಿಂದ ಪರಾರಿಯಾಗಿದ್ದ. ನಮ್ಮ ತಂಡಗಳು ಆತನನ್ನು ಹುಡುಕಾಡಿ ಬಂಧಿಸಿವೆ. ನ್ಯಾಯಾಲಯದ ಮುಂದೆ ಹಾಜರುಪಡಿಸಿ, ಕಸ್ಟಡಿಗೆ ಕೋರುತ್ತೇವೆ ಎಂದು ಅವರು ಹೇಳಿದರು.
ಮಹಿಳೆ ಮೇಲೆ ಪಿಟ್​ಬುಲ್​ ದಾಳಿ; ದೂರು ದಾಖಲಾಗುತ್ತಿದ್ದಂತೆ ಮಾಲೀಕ ಪರಾರಿ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:1 × 3 =
Remember me
