ಹೈದರಾಬಾದ್​​:ಸಿನಿಮಾ ಶೂಟಿಂಗ್ ವೇಳೆ ನಟ ಪೃಥ್ವಿರಾಜ್ ಸುಕುಮಾರನ್ ಅಪಘಾತಕ್ಕೀಡಾಗಿದ್ದಾರೆ. ಮೂರು ತಿಂಗಳು ಬೆಡ್ ರೆಸ್ಟ್ ತೆಗೆದುಕೊಳ್ಳಬೇಕೆಂದು ವೈದ್ಯರು ಹೇಳಿದ್ದಾರೆ.
ಕೇರಳದ ಆರ್‌ಟಿಸಿ ಬಸ್‌ನಲ್ಲಿ ಅದ್ಧೂರಿ ಆ್ಯಕ್ಷನ್ ಸೀಕ್ವೆನ್ಸ್ ನಡೆಯುತ್ತಿದ್ದಾಗ, ಪೃಥ್ವಿರಾಜ್ ಬಸ್‌ನಿಂದ ಬಿದ್ದಿದ್ದಾರೆ. ಘಟನೆಯಲ್ಲಿ ಪೃಥ್ವಿರಾಜ್ ಅವರ ಕಾಲಿಗೆ ಗಂಭೀರ ಗಾಯವಾಗಿದೆ. ಮರಯೂರು ಬಸ್ ನಿಲ್ದಾಣದಲ್ಲಿ ಈ ಅವಘಡ ಸಂಭವಿಸಿದಾಗ ತಕ್ಷಣ ಸ್ಪಂದಿಸಿದ ಚಿತ್ರತಂಡ ಪೃಥ್ವಿರಾಜ್ ಅವರನ್ನು ಆಸ್ಪತ್ರೆಗೆ ಸಾಗಿಸಿ ಸೂಕ್ತ ಚಿಕಿತ್ಸೆ ನೀಡಿದೆ.
ಪೃಥ್ವಿರಾಜ್ ಕಾಲಿಗೆ ಶಸ್ತ್ರ ಚಿಕಿತ್ಸೆ ಮಾಡಿಸಿಕೊಳ್ಳಬೇಕು ಎಂದು ವೈದ್ಯರು ಹೇಳಿರುವುದಾಗಿ ವರದಿಯಾಗಿದೆ. ಪೃಥ್ವಿರಾಜ್ ಅವರಿಗೆ ಇಂದು ಶಸ್ತ್ರಚಿಕಿತ್ಸೆ ನಡೆಯಲಿದೆ. ಈ ಶಸ್ತ್ರಚಿಕಿತ್ಸೆಯಿಂದಾಗಿ ಪೃಥ್ವಿರಾಜ್ ಮೂರು ತಿಂಗಳ ಕಾಲ ಬೆಡ್ ರೆಸ್ಟ್ ತೆಗೆದುಕೊಳ್ಳಬೇಕಾಗುತ್ತದೆ ಎಂದು ವೈದ್ಯರು ತಿಳಿಸಿದ್ದಾರೆ.
ಮಲಯಾಳಂನಲ್ಲಿ ಸರಣಿ ಸಿನಿಮಾ ಮಾಡುತ್ತಲೇ ಬೇರೆ ಭಾಷೆಗಳಲ್ಲಿ ಸಿನಿಮಾ ಮಾಡುತ್ತಿದ್ದಾರೆ. ಪೃಥ್ವಿರಾಜ್ ನಾಯಕನಲ್ಲದೆ ವಿಲನ್ ಮತ್ತು ಕ್ಯಾರೆಕ್ಟರ್ ಆರ್ಟಿಸ್ಟ್ ಆಗಿಯೂ ನಟಿಸುತ್ತಿದ್ದಾರೆ. ಪ್ರಶಾಂತ್ ನೀಲ್ ನಿರ್ದೇಶನದ ಪ್ರಭಾಸ್ ಅಭಿನಯದ ಸಲಾರ್ ಚಿತ್ರದಲ್ಲಿ ಪೃಥ್ವಿರಾಜ್ ವಿಲನ್ ಆಗಿ ನಟಿಸುತ್ತಿದ್ದಾರೆ. ಪೃಥ್ವಿರಾಜ್ ಮಲಯಾಳಂನಲ್ಲಿ ವಿಲಾಯತ್ ಬುದ್ಧ ಎಂಬ ಸಿನಿಮಾ ಮಾಡುತ್ತಿದ್ದಾರೆ. ಸದ್ಯ ಈ ಸಿನಿಮಾ ಶೂಟಿಂಗ್ ಹಂತದಲ್ಲಿದೆ.
VIDEO| ಇಂತಹ ಪ್ರವಾಸಿಗರನ್ನು ನಿಷೇಧಿಸಬೇಕೆಂದ ನೆಟ್ಟಿಗರು…!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:three × 4 =
Remember me
