ನವದೆಹಲಿ:ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ವಾದ್ರಾ ರಾಜ್ಯಸಭೆಗೆ ಆಯ್ಕೆ ಆಗುವ ಸಾಧ್ಯತೆ ಕುರಿತು ಚರ್ಚೆ ಆರಂಭವಾಗಿದೆ. ದೆಹಲಿ ಚುನಾವಣೆಯಲ್ಲಿ ಹೀನಾಯ ಸೋಲಿನ ನಂತರ ಪಕ್ಷದಲ್ಲಿ ದೊಡ್ಡ ಬದಲಾವಣೆಗಳಾಗುವ ಸಂಭವ ಇದ್ದು, ಹೊಸಬರನ್ನು ರಾಜ್ಯಸಭೆಗೆ ಆಯ್ಕೆ ಮಾಡುವ ಇರಾದೆ ಕಾಂಗ್ರೆಸ್ ವರಿಷ್ಠರಿಗೆ ಇದೆ ಎನ್ನಲಾಗಿದೆ.
ಕಾಂಗ್ರೆಸ್​ನಿಂದ ರಾಜ್ಯಸಭಾ ಸದಸ್ಯರಾಗಿರುವ ಅಂಬಿಕಾ ಸೋನಿ, ಗುಲಾಂ ನಬಿ ಆಜಾದ್, ದಿಗ್ವಿಜಯ ಸಿಂಗ್ ಅವರ ಸದಸ್ಯತ್ವದ ಅವಧಿ ಶೀಘ್ರದಲ್ಲೇ ಅಂತ್ಯವಾಗಲಿದ್ದು, ತೆರವಾದ ಛತ್ತೀಸ್​ಗಢ, ರಾಜಸ್ಥಾನ, ಜಾರ್ಖಂಡದ ಸ್ಥಾನಗಳಿಗೆ ಚುನಾವಣೆ ನಡೆಯಲಿದೆ. ಛತ್ತೀಸ್​ಗಢದಿಂದ ಪ್ರಿಯಾಂಕಾ ಗಾಂಧಿ ವಾದ್ರಾ ಸ್ಪರ್ಧಿಸಬೇಕು ಎಂಬುದು ಆ ರಾಜ್ಯದ ಮುಖಂಡರ ಬಲವಾದ ಒತ್ತಾಯವಾಗಿದೆ.
ಬಿಜೆಪಿ ವಿರುದ್ಧ ಲೋಕಸಭೆಯಲ್ಲಿ ರಾಹುಲ್ ಗಾಂಧಿ ಮತ್ತು ಮೇಲ್ಮನೆಯಲ್ಲಿ ಪ್ರಿಯಾಂಕಾ ಹೋರಾಟ ಮಾಡಬಹುದು ಎಂಬುದು ಒಂದು ವಾದ. ಆದರೆ, ಕುಟುಂಬ ರಾಜಕಾರಣ ಟೀಕೆಗೆ ಗುರಿಯಾಗಬೇಕಾಗುತ್ತದೆ ಎಂಬ ಅಂಜಿಕೆಯೂ ಪಕ್ಷದ ಅಧ್ಯಕ್ಷೆ ಮತ್ತು ಪ್ರಿಯಾಂಕಾ ತಾಯಿ ಸೋನಿಯಾ ಗಾಂಧಿಯನ್ನು ಕಾಡುತ್ತಿದೆ ಎನ್ನಲಾಗಿದೆ. ಜತೆಗೆ ಪ್ರಿಯಾಂಕಾ ರಾಜ್ಯಸಭೆಗೆ ಆಯ್ಕೆಯಾದರೆ ಉತ್ತರ ಪ್ರದೇಶದಲ್ಲಿ ಪಕ್ಷದ ಸಂಘಟನೆಗೆ ಹೊಡೆತ ಬೀಳಬಹುದು ಎಂದು ಕೆಲವರ ಅಭಿಪ್ರಾಯವಾದರೆ, ಇದರಿಂದ ಅನುಕೂಲವಾಗುತ್ತದೆ ಎಂದು ಕೆಲವು ಮುಖಂಡರು ಹೇಳಿದ್ದಾರೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:4 + 17 =
Remember me
