ಲಖನೌ:ಉತ್ತರ ಪ್ರದೇಶದ ಉಸ್ತುವಾರಿಯಾಗಿರುವ ಕಾಂಗ್ರೆಸ್​ನ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ವಾದ್ರಾ 2022ರ ಉತ್ತರ ಪ್ರದೇಶ ಚುನಾವಣೆಯಲ್ಲಿ ಕಾಂಗ್ರೆಸ್​ನ ಮುಖ್ಯಮಂತ್ರಿ ಅಭ್ಯರ್ಥಿಯಾಗುವ ಸಾಧ್ಯತೆ ಇದೆ. ಪ್ರಧಾನ ಕಾರ್ಯದರ್ಶಿಯಾದ ನಂತರ ಉತ್ತರ ಪ್ರದೇಶ ರಾಜಕಾರಣದಲ್ಲಿ ಸಕ್ರಿಯವಾಗಿರುವ ಪ್ರಿಯಾಂಕಾರನ್ನು ಸಿಎಂ ಅಭ್ಯರ್ಥಿ ಎಂದು ಘೋಷಣೆ ಮಾಡಬೇಕು ಎಂಬ ಕೂಗು ಕಾಂಗ್ರೆಸ್ ರಾಜ್ಯ ಘಟಕ ಮತ್ತು ಇನ್ನಿತರ ಮುಂಚೂಣಿ ವಿಭಾಗಗಳಿಂದ ಬಲವಾಗಿ ಕೇಳಿಬರುತ್ತಿದೆ.
ಪ್ರಿಯಾಂಕಾರ ನೇತೃತ್ವದಲ್ಲಿ 2022ರ ಚುನಾವಣೆ ಎದುರಿಸುಲು ಪೂರ್ಣಪ್ರಮಾಣದ ಅಭಿಯಾನವನ್ನು ಎರಡು ವಾರದ ನಂತರ ಆರಂಭಿಸಲಾಗುವುದು ಎಂದು ಪ್ರದೇಶ ಕಾಂಗ್ರೆಸ್ ಸಮಿತಿ ವಕ್ತಾರ ಸುರೇಂದ್ರ ರಜಪೂತ್ ತಿಳಿಸಿದ್ದಾರೆ. ಪಕ್ಷದ ಸಂಸ್ಥಾಪನ ದಿನವನ್ನು ಅದ್ದೂರಿಯಾಗಿ ಆಚರಿಸಲು ಹೈಕಮಾಂಡ್ ಯೋಜನೆ ರೂಪಿಸುತ್ತಿದ್ದು, ಉತ್ತರ ಪ್ರದೇಶವನ್ನು ವಿಶೇಷವಾಗಿ ಕೇಂದ್ರೀಕರಿಸುತ್ತಿದೆ. ಪ್ರಿಯಾಂಕಾರನ್ನು ಸಿಎಂ ಅಭ್ಯರ್ಥಿ ಎಂದು ಘೋಷಿಸಬೇಕೆ ಅಥವಾ ಚುನಾವಣೆಯ ತಾರಾ ಪ್ರಚಾರಕಿಯನ್ನಾಗಷ್ಟೆ ಇರಿಸಿಕೊಳ್ಳಬೇಕೆ ಎಂಬ ಗೊಂದಲದಲ್ಲಿ ಹೈಕಮಾಂಡ್​ನಲ್ಲಿದೆ. ತಾಯಿ ಸೋನಿಯಾ ಗಾಂಧಿಯ ರಾಯ್ಬರೇಲಿ ಮತ್ತು ಸೋದರ ರಾಹುಲ್ ಗಾಂಧಿ ಸ್ಪರ್ಧಿಸುತ್ತಿದ್ದ ಅಮೇಠಿ ಕ್ಷೇತ್ರದಲ್ಲಿ ಚುನಾವಣೆ ಕಾಲದಲ್ಲಿ ಸಕ್ರಿಯರಾಗುತ್ತಿದ್ದ ಪ್ರಿಯಾಂಕರನ್ನು, 2019ರ ಲೋಕಸಭಾ ಚುನಾವಣೆ ವೇಳೆಯಲ್ಲಿ ಪಕ್ಷದ ಪ್ರಧಾನ ಕಾರ್ಯದರ್ಶಿಯಾಗಿ ಮೊದಲ ಬಾರಿಗೆ ನೇಮಿಸಲಾಯಿತು.
ಯಾರಿಗೆ ಸೀರಿಯಸ್​ ಆಗುತ್ತೆ ಅಂತ ನಿಖರವಾಗಿ ಹೇಳುತ್ತೆ ಈ ಕರೊನಾ ಟೆಸ್ಟ್​!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:18 − fourteen =
Remember me
