ನವದೆಹಲಿ:ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಇಂದು (ಸೋಮವಾರ) ಸದನದಲ್ಲಿ ಹಿಂದೂಗಳನ್ನು ಹಿಂಸಾತ್ಮಕ ಎಂದು ಕರೆದಿದ್ದಾರೆ ಎಂದು ಬಿಜೆಪಿ ಆರೋಪಿಸುತ್ತಿದ್ದಂತೆ, ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ ಅವರು ತಮ್ಮ ಸಹೋದರ ಹಿಂದೂಗಳನ್ನು ಅವಮಾನಿಸಿಲ್ಲ, ಆದರೆ ಬಿಜೆಪಿ ಮತ್ತು ಅದರ ನಾಯಕರ ಕುರಿತು ಮಾತನಾಡಿದ್ದಾರೆ ಎಂದು ಸಮಜಾಯಿಷಿ ನೀಡಿದ್ದಾರೆ.
ಇದನ್ನೂ ಓದಿ:ಪುತ್ರ ಪ್ರಜ್ವಲ್​ರನ್ನು ನೋಡಲು ಪರಪ್ಪನ ಅಗ್ರಹಾರ ಜೈಲಿಗೆ ಬಂದ ಭವಾನಿ ರೇವಣ್ಣ
ಸಂಸತ್‌ ಭವನದಿಂದ ಹೊರಟ ಅವರು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿ ಅವರು, ಹಿಂದೂಗಳನ್ನು ಅವಮಾನಿಸಲು ಸಾಧ್ಯವಿಲ್ಲ ಎಂದು ಸ್ಪಷ್ಟವಾಗಿ ಹೇಳಿದರು. ಬಿಜೆಪಿ ಬಗ್ಗೆ ಹಾಗೂ ಪಕ್ಷದ ನಾಯಕರ ಬಗ್ಗೆ ರಾಹುಲ್‌ ಗಾಂಧಿ ಮಾತನಾಡಿದ್ದಾರೆ ಎಂದರು.
ರಾಹುಲ್ ಗಾಂಧಿ ಹೇಳಿದ್ದೇನು?:ಇಂದು ಲೋಕಸಭೆಯಲ್ಲಿ ಶಿವನ ಫೋಟೋವನ್ನು ಹಿಡಿದು ಮಾತನಾಡಿದ್ದ ರಾಹುಲ್ ಗಾಂಧಿ, “ನಮ್ಮ ಮಹಾಪುರುಷರೆಲ್ಲರೂ ಅಹಿಂಸೆಯ ಬಗ್ಗೆ ಮಾತನಾಡಿದ್ದಾರೆ. ಆದರೆ ತಮ್ಮನ್ನು ತಾವು ಹಿಂದೂ ಎಂದು ಕರೆದುಕೊಳ್ಳುವವರು ಹಿಂಸೆ, ದ್ವೇಷ, ಅಸತ್ಯದ ಬಗ್ಗೆ ಮಾತ್ರ ಮಾತನಾಡುತ್ತಾರೆ. ನೀವು ಯಾವುದೇ ರೀತಿಯಲ್ಲಿ ಹಿಂದೂ ಅಲ್ಲ.” ಎಂದು ಬಿಜೆಪಿ ನಾಯಕರತ್ತ ಕೈ ತೋರಿಸಿ ಹೇಳಿದ್ದರು.
ಇದಕ್ಕೆ ಆಕ್ಷೇಪ ವ್ಯಕ್ತಪಡಿಸಿದ್ದ ಪ್ರಧಾನಿ ನರೇಂದ್ರ ಮೋದಿಯ, “ಇಡೀ ಹಿಂದೂ ಸಮುದಾಯವನ್ನು ಹಿಂಸಾತ್ಮಕ ಎಂದು ಕರೆಯುವುದು ಅತ್ಯಂತ ಗಂಭೀರವಾದ ಆರೋಪವಾಗಿದೆ” ಎಂದು ಹೇಳಿದ್ದರು.  ಅದಕ್ಕೆ ತಿರುಗುತ್ತರ ನೀಡಿದ್ದ ರಾಹುಲ್ ಗಾಂಧಿ, “ನಾನು ಪ್ರಧಾನಿ ಮೋದಿ, ಬಿಜೆಪಿ-ಆರ್‌ಎಸ್‌ಎಸ್​ ಹಿಂಸಾತ್ಮಕ ಧೋರಣೆ ತಳೆದಿದೆ ಎಂದು ಹೇಳಿದ್ದು. ಮೋದಿ, ಆರ್​ಎಸ್​ಎಸ್​, ಬಿಜೆಪಿ ಮಾತ್ರ ಹಿಂದೂ ಸಮುದಾಯವಲ್ಲ” ಎಂದು ತಿರುಗೇಟು ನೀಡಿದ್ದರು.
ರಾಜ್ಯದಲ್ಲಿ ಸಿಎಂ – ಡಿಸಿಎಂ ಹುದ್ದೆ ವಿವಾದದ ಸಚಿವ ಪ್ರಿಯಾಂಕ್‌ ಖರ್ಗೆ ಶಾಕಿಂಗ್ ಹೇಳಿಕೆ..?

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:three × 1 =
Remember me
