ಉತ್ತರ ಪ್ರದೇಶ:ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ ಮಹಿಳೆಯರಿಗೆ ಶೇ.40 ಟಿಕೆಟ್​ ಕೊಡುವುದಾಗಿ ಘೋಷಿಸಿರುವ ಕಾಂಗ್ರೆಸ್​ನ ಯುವ ನಾಯಕಿ ಪ್ರಿಯಾಂಕ ಗಾಂಧಿ, ಮತ್ತೆರಡು ಮಹತ್ವದ ಭರವಸೆ ನೀಡಿದ್ದಾರೆ.
ಉತ್ತರ ಪ್ರದೇಶದಲ್ಲಿ ಕಾಂಗ್ರೆಸ್​ ಬಹುಮತ ಪಡೆದರೆ ದ್ವಿತೀಯ ಪಿಯುಸಿ ಉತ್ತೀರ್ಣರಾಗುವ ಎಲ್ಲ ವಿದ್ಯಾರ್ಥಿನಿಯರಿಗೂ ಸ್ಮಾರ್ಟ್​ಫೋನ್​ ಹಾಗೂ ಪದವಿ ಓದುತ್ತಿರುವ ಎಲ್ಲ ವಿದ್ಯಾರ್ಥಿನಿಯರಿಗೂ ಎಲೆಕ್ಟ್ರಿಕ್​ ಸ್ಕೂಟರ್​ ಅನ್ನು ಉಚಿತವಾಗಿ ಕೊಡಲಾಗುತ್ತದೆ ಎಂದು ಪ್ರಿಯಾಂಕ ಗಾಂಧಿ ವಾದ್ರ ಗುರುವಾರ ಘೋಷಣೆ ಮಾಡಿದ್ದಾರೆ. ಕಾಂಗ್ರೆಸ್​ನ ಚುನಾವಣಾ ಪ್ರಣಾಳಿಕೆಯಲ್ಲಿ ಈ ಬಗ್ಗೆ ಅಧಿಕೃತವಾಗಿ ಪ್ರಸ್ತಾಪಿಸಲಾಗುತ್ತದೆ ಎಂದೂ ಟ್ವೀಟ್​ ಮಾಡಿದ್ದಾರೆ.
ನಿನ್ನೆ ಕೆಲ ವಿದ್ಯಾರ್ಥಿಗಳನ್ನು ಭೇಟಿ ಮಾಡಿ ಚರ್ಚಿಸಿದೆ. ಅವರಿಗೆ ಸ್ಮಾರ್ಟ್​ಫೋನ್​ ಮತ್ತು ವಾಹನ ಸೌಲಭ್ಯದ ಅವಶ್ಯಕತೆ ಇರುವುದು ಗೊತ್ತಾಯಿತು. ಇದು ಅವರ ವಿದ್ಯಾಭ್ಯಾಸದ ಜತೆಗೆ ಸುರಕ್ಷತೆ ದೃಷ್ಟಿಯಿಂದಲೂ ಸಾಕಷ್ಟು ಅನುಕೂಲಕಾರಿ. ಹಾಗಾಗಿ ಅವರಿಗೆ ಸ್ಮಾರ್ಟ್​ಫೋನ್​ ಮತ್ತು ಸ್ಕೂಟರ್​ ಅನ್ನು ಉಚಿತವಾಗಿ ಕೊಡುವ ಬಗ್ಗೆ ಉತ್ತರ ಪ್ರದೇಶ ಕಾಂಗ್ರೆಸ್​ ಘಟಕದ ಪ್ರಸ್ತಾಪಿಸಿದೆ. ಇದಕ್ಕೆ ಘಟಕವು ಒಪ್ಪಿಗೆ ಸೂಚಿಸಿದೆ ಎಂದು ಪ್ರಿಯಾಂಕ ಗಾಂಧಿ ತಿಳಿಸಿದ್ದಾರೆ. ಇನ್ನು ಸ್ಮಾರ್ಟ್​ಫೋನ್​ ಮತ್ತು ಸ್ಕೂಟರ್​ ಕೊಡುವ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಸಾಕಷ್ಟು ಚರ್ಚೆಯಾಗುತ್ತಿದ್ದು, ಬಹುತೇಕ ಯುವತಿಯರು ಖುಷಿಯಾಗಿದ್ದಾರೆ.
ಜಾನುವಾರುಗಳಿಗೆ ಆಸರೆಯಾಗಿದ್ದ ಪೊಲೀಸ್​ ಇನ್​ಸ್ಪೆಕ್ಟರ್ ಮಹಮ್ಮದ್ ರಫೀಕ್ ನಿಧನ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:12 + six =
Remember me
