ಮುಂಬೈ:ನಿಷೇಧಿತ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ(ಪಿಎಫ್​​ಐ) ಸಂಘಟನೆಯನ್ನು ಶ್ಲಾಘಿಸುವ ಸ್ಟಿಕ್ಕರ್‌ಗಳನ್ನು ಅಂಟಿಸಿ ಮತ್ತು ಮನೆಗಳಿಗೆ ಪಟಾಕಿ, ಬಾಂಬ್‌ಗಳನ್ನು ಕಟ್ಟಿರುವ ಘಟನೆ ಮಹಾರಾಷ್ಟ್ರದ ಮುಂಬೈನಲ್ಲಿ ನಡೆದಿದೆ.ಅಪರಿಚಿತ ವ್ಯಕ್ತಿಗಳ ಗುಂಪು ಈ ಕಿಡಿಗೇಡಿ ಕೃತ್ಯವನ್ನು ಎಸಗಿರುವ ಶಂಕೆ ವ್ಯಕ್ತವಾಗಿದ್ದು, ಸ್ಟಿಕ್ಕರ್‌ಗಳ ಮೇಲೆ ಹಸಿರು ಶಾಯಿಯಿಂದ ಪಿಎಫ್‌ಐ ಜಿಂದಾಬಾದ್ ಮತ್ತು 786 ಎಂದು ಬರೆದು ಹೊಸ ಪನ್ವೆಲ್ ಪ್ರದೇಶದ ಮನೆಯೊಂದರ ಪ್ರವೇಶದ್ವಾರದಲ್ಲಿ ಅಂಟಿಸಿದ್ದಾರೆ.ಇದನ್ನೂ ಓದಿ: ಖರ್ಗೆ ಭೇಟಿ ಮಾಡಿದ ಕಾಂಗ್ರೆಸ್ ಮಹಿಳಾ ನಾಯಕಿಯರು; ಎಂಎಲ್​ಸಿ​ ಸ್ಥಾನಕ್ಕೆ ಸ್ತ್ರೀಯರಿಗೆ ಆದ್ಯತೆ ನೀಡುವಂತೆ ಮನವಿಅಲ್ಲದೇ, ಇಲ್ಲಿನ ಇತರ ಎರಡು ಮನೆಗಳ ಮುಂದೆ ಪಟಾಕಿ ಬಾಂಬ್​ ಮತ್ತು ಅಗರಬತ್ತಿಗಳನ್ನು ಕಟ್ಟಿರುವುದು ಕಂಡು ಬಂದಿದೆ. ಸುದ್ದಿ ತಿಳಿದು ಕೂಡಲೇ ಸ್ಥಳಕ್ಕಾಗಮಿಸಿದ ಪೊಲೀಸರು, ಎಲ್ಲ ಸಾಮಗ್ರಿಗಳನ್ನು ವಶಕ್ಕೆ ಪಡೆದು ಈ ಕುರಿತು ಭಾರತೀಯ ದಂಡ ಸಂಹಿತೆಯ ಸೆಕ್ಷನ್ 153ಎ (ಧರ್ಮ, ಜನಾಂಗ, ಜನ್ಮಸ್ಥಳ, ವಾಸಸ್ಥಳದ ಆಧಾರದ ಮೇಲೆ ವಿವಿಧ ಗುಂಪುಗಳ ನಡುವೆ ದ್ವೇಷವನ್ನು ಉತ್ತೇಜಿಸುವುದು) ಅಡಿಯಲ್ಲಿ ಎಫ್‌ಐಆರ್ ದಾಖಲಿಸಿದ್ದಾರೆ.ಐಸಿಸ್‌ನಂತಹ ಜಾಗತಿಕ ಭಯೋತ್ಪಾದಕ ಗುಂಪುಗಳೊಂದಿಗೆ ಸಂಪರ್ಕ ಹೊಂದಿದ ಆರೋಪದಡಿ ಕೇಂದ್ರ ಸರ್ಕಾರವು ಪಿಎಫ್​ಐ ಅನ್ನು ಐದು ವರ್ಷಗಳ ಕಾಲ ನಿಷೇಧಿಸಿದೆ.(ಏಜೆನ್ಸೀಸ್​​)
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:two × one =
Remember me
