ಲಖನೌ:ಗುರುವಾರ (ಮಾರ್ಚ್​ 28) ಹೃದಯಾಘಾತದಿಂದ ನಿಧನರಾದ ಕುಖ್ಯಾತ ಮಾಫಿಯಾ ಡಾನ್​, ರಾಜಕಾರಣಿ ಮುಖ್ತಾರ್​ ಅನ್ಸಾರಿ ಸಾವಿನ ಸುತ್ತ ಅನುಮಾನದ ಹುತ್ತ ಬೆಳೆದಿದ್ದು, ಆತನ ಪುತ್ರ ಉಮರ್ ಅನ್ಸಾರಿ ಜೈಲಿನಲ್ಲಿ ತಮ್ಮ ತಂದೆಗೆ ಸ್ಲೋ ಪಾಯ್ಸನ್ ನೀಡಲಾಗುತ್ತಿತ್ತು ಎಂದು ಆರೋಪಿಸಿದ್ದಾನೆ.
ವಿವಿಧ ಅಪರಾಧ ಪ್ರಕರಣಗಳಲ್ಲಿ ಶಿಕ್ಷೆಗೆ ಗುರಿಯಾಗಿದ್ದ ಮುಖ್ತಾರ್​ 2005ರಿಂದಲೂ ಸೆರೆವಾಸದಲ್ಲಿದ್ದ. ಈತನ ವಿರುದ್ಧ 60ಕ್ಕೂ ಹೆಚ್ಚು ಪ್ರಕರಣಗಳ ವಿಚಾರಣೆ ನಡೆಯುತ್ತಿದೆ. ಇತ್ತ ಆತನ ಪುತ್ರ ಉಮರ್ ಅನ್ಸಾರಿ ಸ್ಲೋ ಪಾಯ್ಸನ್​ ಕುರಿತು ಆರೋಪಿಸುತ್ತಿದ್ದಂತೆಯೇ ವಿವಾದ ಭುಗಿಲೆದಿದ್ದು, ವಿಪಕ್ಷಗಳ ನಾಯಕರು ತನಿಖೆಗೆ ಆಗ್ರಹಿಸಿದ್ದಾರೆ.
ಈ ಕುರಿತು ಮಾತನಾಡಿರುವ ಅನ್ಸಾರಿ ಪುತ್ರ ಉಮರ್​, ನನ್ನ ತಂದೆ ಜೈಲಿನಲ್ಲಿದ್ದಾಗ ತಮಗೆ ವಿಷ ನೀಡಲಾಗುತ್ತಿದೆ ಎಂದು ಕಳವಳ ವ್ಯಕ್ತಪಡಿಸಿದರು. ಈ ಸಂಬಂಧ ನ್ಯಾಯಾಲಯದ ಗಮನಕ್ಕೂ ತರಲಾಗಿತ್ತು. ಮರಣೋತ್ತರ ಪರೀಕ್ಷೆ ಯಾವಾಗ ನಡೆಯಲಿದೆ ಎಂಬ ಮಾಹಿತಿ ಇಲ್ಲ. ಇಂದು ರಾತ್ರಿಯೇ ಶವ ಪರೀಕ್ಷೆ ನಡೆಸಿ, ಬೆಳಿಗ್ಗೆ ಶವ ನೀಡಬಹುದು ಎಂಬ ವಿಶ್ವಾಸವಿದೆ. ಅಧಿಕಾರಿಗಳು ಏಕೆ ವಿಳಂಬ ಮಾಡುತ್ತಿದ್ದಾರೆ ಎಂಬುದು ಗೊತ್ತಿಲ್ಲ ಎಂದು ತಿಳಿಸಿದ್ದಾರೆ.
VIDEO | Here's what Umar Ansari said on the death of his father#MukhtarAnsariat a hospital in#Bandayesterday.(Full video available on PTI Videos –https://t.co/n147TvqRQz)pic.twitter.com/N1afHktsYF
ಇದನ್ನೂ ಓದಿ:ಸಹೋದರಿ ಮದುವೆಗೆ ಕೆಲವು ದಿನಗಳು ಬಾಕಿ ಇರುವಾಗ Zomato ಐಡಿ ಬ್ಲಾಕ್​; ಕಂಪನಿ ಕೊಟ್ಟ ಸ್ಪಷ್ಟನೆ ಹೀಗಿದೆ
ಇತ್ತ ಮುಖ್ತಾರ ಸಾವಿನ ಕುರಿತು ಆರೋಪಗಳು ಕೇಳಿ ಬಂದ ಹಿನ್ನಲೆಯಲ್ಲಿ ಉತ್ತರಪ್ರದೇಶ ಸರ್ಕಾರವು ಮೂವರು ಮ್ಯಾಜಿಸ್ಟ್ರೇಟ್​ಗಳಿಂದ ತನಿಖೆ ನಡೆಸಿ ವರದಿ ಸಲ್ಲಿಸುವಂತೆ ಆದೇಶಿಸಿದೆ. ಏತನ್ಮಧ್ಯೆ ಕಾನೂನು ಸುವ್ಯವಸ್ಥೆ ಹದಗೆಡದಂತೆ ತಡೆಯಲು ಉತ್ತರ ಪ್ರದೇಶ ಪೊಲೀಸರು ರಾಜ್ಯಾದ್ಯಂತ ನಿಷೇಧಾಜ್ಞೆ ಜಾರಿಗೊಳಿಸಿದ್ದಾರೆ.
ಬಾಂಡಾದಲ್ಲಿರುವ ರಾಣಿ ದುರ್ಗಾವತಿ ವೈದ್ಯಕೀಯ ಕಾಲೇಜಿನಲ್ಲಿ ಮುಖ್ತಾರ್​ ಶವ ಪರೀಕ್ಷೆ ನಡೆಯಲಿದ್ದು, ಇದನ್ನು ವಿಡಿಯೋಗ್ರಾಫ್​ ಮಾಡಲಾಗುವುದು. ಅಗತ್ಯವಿದ್ದರೆ ಅವನ ಒಳಾಂಗಗಳನ್ನು ಸಂರಕ್ಷಿಸಲಾಗುವುದು. ಮೊಹಮದಾಬಾದ್​ನಲ್ಲಿ ಈತನ ಅಂತ್ಯೆಕ್ರಿಯೆಗೆ ಸಕಲ ಸಿದ್ಧತೆ ಮಾಡಿಕೊಳ್ಳಲಾಗಿದೆ ಎಂದು ಹಿರಿಯ ಪೊಲೀಸ್​ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:sixteen + 16 =
Remember me
