ಜೈಪುರ:ತಾವು ಹೊಂದಿದ್ದ ಖಾತೆಗಳಿಗೆ ಸಂಬಂಧಿಸಿದಂತೆ 3,024 ಕೋಟಿ ರೂ. ಮೌಲ್ಯದ ವಿವಿಧ ಕಾಮಗಾರಿಗಳ ಅನುದಾನಕ್ಕೆ ವಿತ್ತ ಸಚಿವಾಲಯ ಕೊಕ್ಕೆ ಹಾಕಿದ್ದೇ ಅಶೋಕ್​ ಗೆಹ್ಲೋಟ್​ ನೇತೃತ್ವದ ಕಾಂಗ್ರೆಸ್​ ಸರ್ಕಾರದ ವಿರುದ್ಧ ಸಚಿನ್​ ಪೈಲಟ್​ ಬಂಡಾಯದ ಕಹಳೆ ಮೊಳಗಿಸಲು ಕಾರಣ ಎಂಬುದು ಇದೀಗ ಬಹಿರಂಗವಾಗಿದೆ.
ಡಿಸಿಎಂ ಆಗಿದ್ದು, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್​ರಾಜ್​ ಇಲಾಖೆಯ ಸಚಿವರೂ ಆಗಿದ್ದ ಸಚಿನ್​ ಪೈಲಟ್​ 2019-20ನೇ ಸಾಲಿನಲ್ಲಿ ತಮ್ಮ ಖಾತೆಗೆ ಸಂಬಂಧಪಟ್ಟಂತೆ 3,024 ಕೋಟಿ ರೂ. ಮೌಲ್ಯದ ಯೋಜನೆಗಳನ್ನು ರೂಪಿಸಿ, ಅವುಗಳ ಅನುಷ್ಠಾನಕ್ಕೆ ಮುಂದಾಗಿದ್ದರು. ಆದರೆ ಆರ್ಥಿಕ ಸಚಿವಾಲಯ ಅನಗತ್ಯವಾಗಿ ಈ ಯೋಜನೆಗಳ ಅನುದಾನ ಬಿಡುಗಡೆಯನ್ನು ತಡೆಹಿಡಿದಿತ್ತು ಎನ್ನಲಾಗಿದೆ.
ಇದನ್ನೂ ಓದಿ:ಅಭಿವೃದ್ಧಿಗೆ ಡಾ. ಪ್ರಭಾಕರ ಕೋರೆ ನೆರವು- ಮಹಾಂತೇಶ ಕವಟಗಿಮಠ
ರಾಜಸ್ಥಾನದ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್​ರಾಜ್​ ಸಚಿವಾಲಯ ರಾಜ್ಯದ ಮುಖ್ಯ ಕಾರ್ಯದರ್ಶಿ ರಾಜೀವ ಸ್ವರೂಪ್​ ನೇತೃತ್ವದ ರಾಜ್ಯ ಮಟ್ಟದ ಅಭಿವೃದ್ಧಿ ಮತ್ತು ಸಮನ್ವಯ ಸಮಿತಿಯೊಂದಿಗೆ ಇದ್ದ ವ್ಯತ್ಯಾಸಗಳ ಬಗ್ಗೆ ಇತ್ತೀಚೆಗೆ ಬಿಡುಗಡೆ ಮಾಡಿರುವ ಮಾಹಿತಿಯಲ್ಲಿ ಇದು ಬಹಿರಂಗವಾಗಿದೆ.
ಈ ಯೋಜನೆಗಳಿಗೆ ರಾಜ್ಯ ಆರ್ಥಿಕ ಆಯೋಗದ (ಎಸ್​ಎಫ್​ಸಿ-5) ನಿಧಿಯಡಿಯಲ್ಲಿ ಅನುದಾನ ಕೊಡಬೇಕಾಗಿತ್ತು. ಆದರೆ, ವಿತ್ತ ಖಾತೆಯನ್ನು ಹೊಂದಿದ್ದ ಸಿಎಂ ಅಶೋಕ್​ ಗೆಹ್ಲೋಟ್​ ಅನುದಾನ ಬಿಡುಗಡೆ ಮಾಡಲು ನಿರಾಕರಿಸಿದ್ದರು ಎನ್ನಲಾಗಿದೆ. ಈ ಹಿನ್ನೆಲೆಯಲ್ಲಿ ಅಂತರ ಇಲಾಖೆಯ ವ್ಯತ್ಯಾಸಗಳು ಎಂಬ ಶೀರ್ಷಿಕೆಯಡಿ ರಾಜಸ್ಥಾನದ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್​ರಾಜ್​ ಸಚಿವಾಲಯ ವರದಿಯನ್ನು ಬಿಡುಗಡೆ ಮಾಡಿದೆ.
ವ್ಯಾನ್ ಡಿಕ್ಕಿ ಹೊಡೆದು ಬಾಲಕ ಮೃತಪಟ್ಟ, ಸಿಟ್ಟಿಗೆದ್ದ ಸ್ಥಳೀಯರು ಚಾಲಕನನ್ನೇ ಕೊಂದರು….

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:18 − 2 =
Remember me
