ನವದೆಹಲಿ:ರಾಜಕೀಯ ಪಕ್ಷಗಳು ಚುನಾವಣಾ ಪ್ರಣಾಳಿಕೆಯಲ್ಲಿ ನೀಡುವ ಭರವಸೆಗಳ ಜಾರಿಗೆ ಅಗತ್ಯವಿರುವ ಆರ್ಥಿಕ ಸಂಪನ್ಮೂಲಗಳ ಬಗ್ಗೆ ಮತದಾರರಿಗೆ ಮೊದಲೇ ಅಧಿಕೃತ ಮಾಹಿತಿ ನೀಡಬೇಕೆಂದು ಚುನಾವಣಾ ಆಯೋಗ ಸಲಹೆ ನೀಡಿದೆ. ಈ ನಿಟ್ಟಿನಲ್ಲಿ ಮಾದರಿ ಸಂಹಿತೆಗೆ ತಿದ್ದುಪಡಿ ತರಲು ಪ್ರಸ್ತಾಪಿಸಿದೆ.
ಚುನಾವಣೆ ವೇಳೆ ರಾಜಕೀಯ ಪಕ್ಷಗಳು ಘೋಷಿಸುವ ಉಚಿತ ಕೊಡುಗೆಗಳ ಬಗ್ಗೆ ಇತ್ತೀಚಿನ ದಿನಗಳಲ್ಲಿ ಭಾರಿ ಚರ್ಚೆ ಆಗುತ್ತಿರುವ ಸಂದರ್ಭದಲ್ಲೇ ಆಯೋಗದಿಂದ ಈ ಪ್ರಸ್ತಾವನೆ ಬಂದಿದೆ. ಆರ್ಥಿಕ ಸಂಪನ್ಮೂಲದ ಬಗ್ಗೆ ಮೊದಲೇ ಮಾಹಿತಿ ನೀಡುವುದರಿಂದ ಮತದಾರರು ತಮಗೆ ಬೇಕಾದ ಅಭ್ಯರ್ಥಿಯನ್ನು ಆಯ್ಕೆ ಮಾಡಿಕೊಳ್ಳಲು ಅನುಕೂಲವಾಗಲಿದೆ ಎಂದು ಆಯೋಗವು ಅಭಿಪ್ರಾಯಪಟ್ಟಿದೆ. ಈ ಸಂಬಂಧ ಮಾನ್ಯತೆ ಪಡೆದ ಎಲ್ಲ ರಾಷ್ಟ್ರೀಯ ಮತ್ತು ರಾಜ್ಯ ಪಕ್ಷಗಳಿಗೆ ಪತ್ರ ಬರೆದಿದ್ದು, ಅಕ್ಟೋಬರ್ 19ರೊಳಗೆ ಅಭಿಪ್ರಾಯಗಳನ್ನು ಸಲ್ಲಿಸುವಂತೆ ಸೂಚಿಸಿದೆ. ಅಷ್ಟರೊಳಗೆ ಯಾವುದೇ ಪ್ರತಿಕ್ರಿಯೆ ದೊರೆಯದಿದ್ದರೆ ರಾಜಕೀಯ ಪಕ್ಷಗಳಿಗೆ ಈ ವಿಷಯದ ಬಗ್ಗೆ ನಿರ್ದಿಷ್ಟವಾಗಿ ಹೇಳಲು ಏನು ಉಳಿದಿಲ್ಲ ಎಂದು ಭಾವಿಸುವುದಾಗಿ ಆಯೋಗವು ಪತ್ರದಲ್ಲಿ ತಿಳಿಸಿದೆ. ಪೊಳ್ಳು ಭರವಸೆಗಳು ದೂರಗಾಮಿ ಪರಿಣಾಮಗಳನ್ನು ಹೊಂದಿವೆ. ಚುನಾವಣೆ ಭರವಸೆ ಕುರಿತಂತೆ ನೀಡುವ ಅಸಮರ್ಪಕ ಮಾಹಿತಿಯು ಹಣಕಾಸಿನ ಸುಸ್ಥಿರತೆಯ ಮೇಲೆ ಬೀರುವ ಅನಪೇಕ್ಷಿತ ಪರಿಣಾಮ ಕಡೆಗಣಿಸಲು ಸಾಧ್ಯವಿಲ್ಲ ಎಂದು ಆಯೋಗ ಹೇಳಿದೆ.
ಪ್ರಸ್ತಾವನೆಯಲ್ಲಿ ಏನಿದೆ?:ಎಂಸಿಸಿಯ ಚುನಾವಣಾ ಪ್ರಣಾಳಿಕೆಯ ಮಾರ್ಗಸೂಚಿಗೆ ಪ್ರೋಫಾರ್ವ ಸೇರಿಸಲು ಚುನಾವಣಾ ಆಯೋಗವು ಮಾದರಿ ನೀತಿಸಂಹಿತೆಗೆ ತಿದ್ದುಪಡಿ ತರಲು ಪ್ರಸ್ತಾಪಿಸಿದೆ. ಪ್ರಸ್ತಾವಿತ ಪ್ರೊಫಾರ್ವದಲ್ಲಿ ರಾಜಕೀಯ ಪಕ್ಷಗಳು ಆದಾಯ ಉತ್ಪಾದನೆ ಮಾರ್ಗ (ಹೆಚ್ಚುವರಿ ತೆರಿಗೆ ಮೂಲಕ, ಇತ್ಯಾದಿ), ವೆಚ್ಚ (ಕೆಲ ಯೋಜನೆಗಳ ಕಡಿತ, ಅಗತ್ಯವಿದ್ದರೆ ),
ಬದ್ಧ ಹೊಣೆಗಾರಿಕೆ ಮೇಲಿನ ಪರಿಣಾಮ /ಸಾಲ ಹೆಚ್ಚಿಸುವುದು ಮತ್ತು ಇದರಿಂದ ಆರ್ಥಿಕ ಜವಾಬ್ದಾರಿ ಮೇಲೆ ಉಂಟಾಗುವ ಪರಿಣಾಮ ಮತ್ತು ಬಜೆಟ್ ನಿರ್ವಹಣಾ ಕಾಯ್ದೆ (ಎಫ್​ಆರ್​ಬಿಎಂ) ಮಿತಿ ಕುರಿತು ವಿವರಗಳನ್ನು ಸಲ್ಲಿಸಬೇಕಾಗುತ್ತದೆ. ಮಾದರಿ ಸಂಹಿತೆಯು ಚುನಾವಣೆ ಸಂದರ್ಭದಲ್ಲಿ ಎಲ್ಲ ರಾಜಕೀಯ ಪಕ್ಷಗಳು ಮತ್ತು ಅಭ್ಯರ್ಥಿಗಳಿಗೆ ಸೂಕ್ತ ಕ್ಷೇತ್ರವನ್ನು ಖಚಿತಪಡಿಸಲು ಚುನಾವಣಾ ಆಯೋಗಕ್ಕೆ ಮಾರ್ಗದರ್ಶನ ನೀಡುವ ದಾಖಲೆಯಾಗಿದೆ.
ಹೈದರಾಬಾದ್:ಮುಖ್ಯಮಂತ್ರಿ ಕೆ. ಚಂದ್ರಶೇಖರ ರಾವ್ ನೇತೃತ್ವದ ತೆಲಂಗಾಣ ರಾಷ್ಟ್ರ ಸಮಿತಿ (ಟಿಆರ್​ಎಸ್) ಹೆಸರನ್ನು ಭಾರತ ರಾಷ್ಟ್ರ ಸಮಿತಿ (ಬಿಆರ್​ಎಸ್) ಎಂದು ಮರುನಾಮಕರಣ ಮಾಡಲಾಗಿದ್ದು, ದಸರೆಯ ದಿನ ರಾಷ್ಟ್ರ ಮಟ್ಟದ ರಾಜಕಾರಣಕ್ಕೆ ಪದಾರ್ಪಣೆ ಮಾಡಿದೆ. 2024ರ ಚುನಾವಣೆಗೆ ಅವರು ಸಿದ್ಧತೆ ನಡೆಸಿದ್ದಾರೆ.
ಹೊಸ ರಾಷ್ಟ್ರೀಯ ಪಕ್ಷಕ್ಕೆ ಬುಧವಾರ ಚಾಲನೆ ನೀಡಲಾಗಿದ್ದು, ಕರ್ನಾಟಕದ ಮಾಜಿ ಸಿಎಂ ಎಚ್.ಡಿ. ಕುಮಾರಸ್ವಾಮಿ ಮತ್ತು ಡಿಎಂಕೆ ಮುಖಂಡ ತೋಲ್ ತಿರುಮವಲವನ್ ಸಹಿತ ಅನೇಕ ಮುಖಂಡರು ಬಿಆರ್​ಎಸ್ ಆರಂಭಕ್ಕೆ ಸಾಕ್ಷಿಯಾದರು. 2024ರ ಲೋಕಸಭೆ ಚುನಾವಣೆಗೂ ಮುನ್ನ ರಾಷ್ಟ್ರ ಮಟ್ಟದಲ್ಲಿ ಪಾತ್ರ ವಹಿಸುವ ಮಹತ್ವಾಕಾಂಕ್ಷೆಯೊಂದಿಗೆ ಕೆಸಿಆರ್ ಹೊಸ ಪಕ್ಷ ಸ್ಥಾಪನೆಯನ್ನು ಘೋಷಿಸಿದರು. ಬಿಆರ್​ಎಸ್ ಸ್ಥಾಪನೆಯ ಘೋಷಣೆಯಾಗುತ್ತಲೇ ಪಕ್ಷದ ಕಾರ್ಯಕರ್ತರು ಪಟಾಕಿಗಳನ್ನು ಸಿಡಿಸಿ ಹೈದರಾಬಾದ್ ನಗರದಾದ್ಯಂತ ಪಕ್ಷದ ಸಂಕೇತವಾದ ಗುಲಾಬಿ ರಂಗನ್ನು ಎರಚಿ ಸಂಭ್ರಮಿಸಿದರು. ಪಕ್ಷದ ಹೆಸರಿನ ಬದಲಾವಣೆಯನ್ನು ಭಾರತ ಚುನಾವಣಾ ಆಯೋಗದ ಗಮನಕ್ಕೆ ತರಲಾಗಿದ್ದು ನಿಯಮಗಳಂತೆ ಅದು ಮಾನ್ಯತೆ ನೀಡಲಿದೆ.
ರಾಷ್ಟ್ರ ರಾಜಕಾರಣ ಪ್ರವೇಶಕ್ಕೆ ವೇದಿಕೆ ಸಜ್ಜುಗೊಳಿಸುವ ಭಾಗವಾಗಿ ರಾವ್, ಅನೇಕ ರಾಜ್ಯಗಳ ಪ್ರತಿಪಕ್ಷಗಳ ಮುಖ್ಯಮಂತ್ರಿಗಳೊಂದಿಗೆ ಸಮಾಲೋಚನೆ ಕೂಡ ನಡೆಸಿದ್ದರು. ಮಮತಾ ಬ್ಯಾನರ್ಜಿ (ಬಂಗಾಳ), ನಿತೀಶ್ ಕುಮಾರ್ (ಬಿಹಾರ), ಅರವಿಂದ ಕೇಜ್ರಿವಾಲ್ (ದೆಹಲಿ), ಎಂ.ಕೆ. ಸ್ಟಾಲಿನ್ (ತಮಿಳುನಾಡು), ಪಿಣರಾಯಿ ವಿಜಯನ್ (ಕೇರಳ) ಮತ್ತು ನವೀನ್ ಪಟ್ನಾಯಕ್ (ಒಡಿಶಾ) ಅವರಲ್ಲಿ ಸೇರಿದ್ದಾರೆ.
21 ವರ್ಷಗಳ ನಂತರ:ಟಿಆರ್​ಎಸ್ ಸ್ಥಾಪಿಸಿದ 21 ವರ್ಷಗಳ ನಂತರ, ಅದರ ಸಂಸ್ಥಾಪಕ ಕೆಸಿಆರ್ ತೆಲಂಗಾಣಕ್ಕೆ ಸೀಮಿತವಾಗಿದ್ದ ಪ್ರಾದೇಶಿಕ ಪಕ್ಷವನ್ನು ರಾಷ್ಟ್ರೀಯ ಪಕ್ಷವಾಗಿ ಪರಿವರ್ತಿಸಿದ್ದಾರೆ. ಟಿಆರ್​ಎಸ್​ಅನ್ನು ಹೊಸ ಪಕ್ಷದಲ್ಲಿ ವಿಲೀನಗೊಳಿಸಲು ಪಕ್ಷದ ರಾಜ್ಯ ಕಾರ್ಯಕಾರಿಣಿ ಸದಸ್ಯರು ಮತ್ತು ಇತರ ಚುನಾಯಿತ ಸದಸ್ಯರು ಒಪ್ಪಿಗೆ ನೀಡಿದ ನಂತರ ಬಿಆರ್​ಎಸ್ ರಚನೆಯನ್ನು ಘೋಷಿಸಲಾಯಿತು.
ಬಿಆರ್​ಎಸ್-ಜೆಡಿಎಸ್ ಮೈತ್ರಿ:‘ಭಾರತ್ ರಾಷ್ಟ್ರ ಸಮಿತಿ’ (ಬಿಆರ್​ಎಸ್) ಜತೆ ಜಾತ್ಯತೀತ ಜನತಾದಳವೂ ಮಿತ್ರಪಕ್ಷವಾಗಿ ಸಕ್ರಿಯವಾಗಿ ಕೆಲಸ ಮಾಡಲಿದೆ ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಹೇಳಿದರು. ಮುಂದಿನ ವಿಧಾನಸಭೆ, ಲೋಕಸಭೆ ಚುನಾವಣೆಗಳನ್ನು ಒಟ್ಟಾಗಿ ಎದುರಿಸುತ್ತೇವೆ. ಈ ಮೊದಲಿನಿಂದಲೂ ಜೆಡಿಎಸ್ ಮತ್ತು ಟಿಆರ್​ಎಸ್ ಪಕ್ಷಗಳು ಸಹಜ ಮಿತ್ರಪಕ್ಷಗಳಾಗಿದ್ದವು. ಪರಸ್ಪರ ವಿಶ್ವಾಸದಿಂದ ಕೆಲಸ ಮಾಡಿಕೊಂಡು ಬಂದಿವೆ. ಈಗ ಟಿಆರ್​ಎಸ್ ರಾಷ್ಟ್ರೀಯ ಪಕ್ಷವಾಗಿ ಬಿಆರ್ ಎಸ್ ಹೆಸರಿನಲ್ಲಿ ಹೊರಹೊಮ್ಮಿರುವುದನ್ನು ನಮ್ಮ ಪಕ್ಷ ಮುಕ್ತಮನಸ್ಸಿನಿಂದ ಸ್ವಾಗತಿಸುತ್ತಿದೆ. ಮುಂದಿನ ದಿನಗಳಲ್ಲಿ ನಾವು ಕೆ.ಚಂದ್ರಶೇಖರ ರಾವ್ ಅವರೊಂದಿಗೆ ಕೆಲಸ ಮಾಡುತ್ತೇವೆ ಎಂದರು. ಕೇರಳ, ತಮಿಳುನಾಡು, ತೆಲಂಗಾಣ, ಆಂಧ್ರ ಪ್ರದೇಶ ರಾಜ್ಯಗಳಲ್ಲಿ ಬಿಜೆಪಿ-ಕಾಂಗ್ರೆಸ್ ಮುಕ್ತ ರಾಜಕೀಯ ವಾತಾವರಣವಿದೆ. ಅದೇ ಸ್ಥಿತಿಯನ್ನು ಕರ್ನಾಟದಲ್ಲೂ ತರಲು ನಾನು ಮತ್ತು ಚಂದ್ರಶೇಖರ ರಾವ್ ನಿರ್ಧಾರ ಮಾಡಿದ್ದೇವೆ. ಆ ನಿಟ್ಟಿನಲ್ಲಿ ಕೆಲಸ ಮಾಡುತ್ತೇವೆ ಎಂದು ಹೇಳಿದರು.
ಮುಂದಿನ ದಿನಗಳಲ್ಲಿ ತಮಿಳುನಾಡಿನ ಡಿಎಂಕೆ ನಾಯಕ ಎಂ.ಕೆ.ಸ್ಟಾಲಿನ್ ಸೇರಿದಂತೆ ಇನ್ನೂ ಹಲವಾರು ಪ್ರಮುಖ ಪಕ್ಷಗಳ ನಾಯಕರು ಬಿಆರ್​ಎಸ್ ಒಕ್ಕೂಟದಲ್ಲಿ ಕೆಲಸ ಮಾಡಲಿವೆ ಎನ್ನುವ ವಿಶ್ವಾಸ ನನಗಿದೆ. ಅಂತಹ ಪ್ರಯತ್ನ ದೊಡ್ಡಮಟ್ಟದಲ್ಲಿ ನಡೆಯುತ್ತಿದೆ. ಜೆಡಿಎಸ್-ಬಿಆರ್​ಎಸ್ ಮಿತ್ರಪಕ್ಷಗಳಾಗಿ ಮುನ್ನಡೆಯಲಿವೆ ಎಂದು ಕುಮಾರಸ್ವಾಮಿ ಹೇಳಿದರು.
ಕಾಂತಾರ: ಒಂದಕ್ಕೂ ನಾಲ್ಕಕ್ಕೂ ನಡುವೆ ಎಷ್ಟು ಅಂತರ!?; ಬದಲಾಯ್ತು ರಿಷಬ್ ‘ಸ್ಟೇಟಸ್​’
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:20 + thirteen =
Remember me
