ನವದೆಹಲಿ:ಕುಸ್ತಿಪಟುಗಳು ತಮ್ಮ ಮೇಲೆ ಆಗುತ್ತಿರುವ ಲೈಂಗಿಕ ದೌರ್ಜನ್ಯಗಳನ್ನು ಖಂಡಿಸಿ ದೆಹಲಿಯ ಜಂತರ್​ ಮಂತರ್​ನಲ್ಲಿ ನಡೆಸುತ್ತಿರುವ ಪ್ರತಿಭಟನೆ ಇದೀಗ ಮತ್ತೊಂದು ಹಂತ ತಲುಪಿದೆ.
ಪ್ರತಿಭಟನಾನಿರತರು ಭಾರತೀಯ ರೆಸ್ಲಿಂಗ್​ ಫೆಡರೇಶನ್​(WFI) ಮುಖ್ಯಸ್ಥನ ವಿರುದ್ಧ ನ್ಯಾಯಯುತವಾದ ತನಿಖೆಗೆ ಆಗ್ರಹಿಸಿದ್ದಾರೆ.
ಇನ್ನು ತಮ್ಮ ಮೇಲಿನ ಲೈಂಗಿಕ ದೌರ್ನ್ಯವನ್ನು ಖಂಡಿಸಿ ಕುಸ್ತಿಪಟುಗಳು #METOO ಅಭಿಯಾನದಡಿಯಲ್ಲಿ ಪ್ರತಿಭಟನೆ ನಡೆಸುತ್ತಿದ್ದು ರೆಸ್ಲಿಂಗ್​ ಫೆಡರೇಶನ್​ನ ಮುಖ್ಯಸ್ಥ ಹಾಗೂ ಬಿಜೆಪಿ ಸಂಸದ ಬ್ರಿಜ್​ ಭೂಷಣ್​ ಶರಣ್​ ಸಿಂಗ್​ ವಿರುದ್ಧ ಸರಣಿ ಆರೋಪಗಳನ್ನು ಮಾಡಿದ್ದಾರೆ.
#WATCH| Delhi: "This time, all parties are welcome to join our protest whether it is BJP, Congress, AAP or any other party…..we're not affiliated with any party…": Bajrang Punia, Olympic medalist on wrestlers' protest against WFI chief Brij Bhushan Singhpic.twitter.com/g2i8T0TaAS
ಇದನ್ನೂ ಓದಿ:ಕುಟುಂಬಸ್ಥರೊಂದಿಗೆ ಕಟೀಲು ದುರ್ಗಾಪರಮೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ಶಿಲ್ಪಾ ಶೆಟ್ಟಿ
ಇನ್ನು ಪ್ರತಿಭಟನಾ ನಿರತರು ನ್ಯಾಯಯುತ ತನಿಖೆಗೆ ಆಗ್ರಹಿಸಿ ಸುಪ್ರೀಂ ಕೋರ್ಟ್​ ಮೊರೆ ಹೋಗಿದ್ಧಾರೆ ಎಂದು ತಿಳಿದು ಬಂದಿದೆ. ಪ್ರಕರಣದ ಸಂಬಂಧ ಪೊಲೀಸರು FIR ದಾಖಲಿಸುವವರೆಗೂ ತಾವು ಪ್ರತಿಭಟನಾ ಸ್ಥಳವನ್ನು ಬಿಟ್ಟು ಹೋಗುವ ಮಾತಿಲ್ಲ ಎಂದು ತಿಳಿಸಿದ್ದಾರೆ.
ಕಿರುಕುಳದ ಸಂಬಂಧ ಜನವರಿ ತಿಂಗಳಲ್ಲಿ ಕುಸ್ತಿಪಟುಗಳು ಪ್ರತಿಭಟನೆ ನಡೆಸಿದ್ದರು. ಕ್ರೀಡಾ ಸಚಿವಲಾಯ ಮಧ್ಯ ಪ್ರವೇಶಿಸಿ ಕಠಿಣ ಕ್ರಮದ ಭರವಸೆ ನೀಡಿದ ನಂತರ ಕುಸ್ತಿಪಟುಗಳು ಪ್ರತಿಭಟನೆಯನ್ನು ಕೈ ಬಿಟ್ಟಿದ್ದರು.
ಆದರೆ, ಇದುವರೆಗೂ ಯಾವುದೇ ಕ್ರಮವನ್ನು ಕೈಗೊಂಡಿಲ್ಲ. ಕಳೆದ ಬಾರಿ ನಮ್ಮನ್ನು ದಾರಿ ತಪ್ಪಿಸಲಾಗಿತ್ತು ಈ ಭಾರಿ ಯಾವುದೇ ರಾಜಕೀಯ ಮಾಡಲು ನಾವು ಬಿಡುವುದಿಲ್ಲ ಎಂದು ಪ್ರತಿಭಟನಾ ನಿರತ ಕುಸ್ತಿಪಟುಗಳು ತಿಳಿಸಿದ್ದಾರೆ.
ನಾವು ಯಾವುದೇ ಪಕ್ಷದೊಂದಿಗೆ ಗುರುತಿಸಿಕೊಂಡಿಲ್ಲ ಬಿಜೆಪಿ, ಎಎಪಿ, ಕಾಂಗ್ರೆಸ್​ ಸೇರಿದಂತೆ ಯಾವುದೇ ಪಕ್ಷದ ಸದಸ್ಯರು ನಮ್ಮ ಜೊತೆ ಪ್ರತಿಭಟನೆಯಲ್ಲಿ ಭಾಗಿಯಾಗಬಹುದು ಎಂದು ಪ್ರತಿಭಟನಾ ನಿರತ ಕುಸ್ತಿಪಟುಗಳು ಹೇಳಿದ್ದಾರೆ.
Podium से फुटपाथ तक।आधी रात खुले आसमान के नीचे न्याय की आस में।pic.twitter.com/rgaVTM5WGK
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:11 + seventeen =
Remember me
