ನವದೆಹಲಿ:ಹಣದುಬ್ಬರದ ವಿರುದ್ಧ ಬಿಜೆಪಿ ಕಚೇರಿ ಎದುರು ಪ್ರತಿಭಟನೆ ನಡೆಸುತ್ತಿದ್ದ ಮಹಿಳಾ ಕಾಂಗ್ರೆಸ್​ ಕಾರ್ಯಕರ್ತರ ಮೇಲೆ ದೆಹಲಿ ಪೊಲೀಸರು ದೌರ್ಜನ್ಯ ಎಸಗಿದ್ದಾರೆ ಎಂಬ ಆರೋಪ ಕೇಳಿ ಬಂದಿದೆ.
ಮಹಿಳಾ ಕಾಂಗ್ರೆಸ್​ ಕಾರ್ಯಕರ್ತರನ್ನು ಪುರುಷ ಅಧಿಕಾರಿಯೋರ್ವ ಬಲವಂತವಾಗಿ ಎಳೆಯುತ್ತಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್​ ಆಗಿದ್ದು, ಪೊಲೀಸರ ನಡೆಗೆ ಸಾಕಷ್ಟು ಖಂಡನೆ ವ್ಯಕ್ತವಾಗುತ್ತಿದೆ.
ಈ ಕುರಿತು ಟ್ವೀಟ್​ ಮಾಡಿರುವ ರಾಜ್ಯಸಭಾ ಸದಸ್ಯ ಜೈರಾಮ್​ ರಮೇಶ್​ ಮಫೋದಿ ಸರ್ಕಾರದ ವಿರುದ್ಧ ಧ್ವನಿ ಎತ್ತಿದವರ ಮೇಲೆ ಪೊಲೀಸರು ನಿಯಮಗಳನ್ನು ಮುರಿಯಲು ಸ್ವತಃ ಗೃಹ ಸಚಿವ ಅಮಿತ್​ ಶಾ ಅವರೇ ನಿರ್ದೇಶನ ನೀಡಿದಂತೆ ಕಾಣುತ್ತಿದೆ. ಹಣದುಬ್ಬರ ಹಾಗೂ ಅಗತ್ಯ ವಸ್ತುಗಳ ಬೆಲೆ ಏರಿಕೆ ಖಂಡಿಸಿ ಪ್ರತಿಭಟನೆ ನಡೆಸುತ್ತಿರುವ ಮಹಿಳಾ ಕಾರ್ಯಕರ್ತರ ಮೇಲೆ ಪುರುಷ ಅಧಿಕಾರಿಯೋರ್ವ ಹಲ್ಲೆ ನಡೆಸಿರುವುದು ಖಂಡನೀಯ ಎಂದು ಕಿಡಿಕಾರಿದ್ದಾರೆ.
Delhi Police under Home Minister Amit Shah does not miss any opportunity to break rules, conventions and procedures laid out in the Police manual to intimidate and harass protesters raising their voice against the Modi government.The entire nation witnessed how they harassed…https://t.co/2SFot3jpmj
ಇದನ್ನೂ ಓದಿ:ಮದುವೆ ಮನೆಯಲ್ಲಿ ಊಟ ಸೇವಿಸಿ 60ಕ್ಕೂ ಹೆಚ್ಚು ಮಕ್ಕಳು ಅಸ್ವಸ್ಥ
ಮಹಿಳಾ ಕಾಂಗ್ರೆಸ್​ ಕಾರ್ಯಕರ್ತರ ಮೇಲಿನ ಹಲ್ಲೆ ಕುರಿತು ಪ್ರತಿಕ್ರಿಯಿಸಿರುವ ಪೊಲೀಸ್​ ಅಧಿಕಾರಿಯೊಬ್ಬರು ಮೊದಲಿಗೆ ಅವರು ಪ್ರತಿಭಟನೆ ನಡೆಸಲು ಅವರು ನಮ್ಮಿಂದ ಅನುಮತಿಯನ್ನು ಪಡೆದಿರಲಿಲ್ಲ. ಬಳಿಕ ಬಿಜೆಪಿ ಕಚೇರಿ ಮುಂಭಾಗ ಇದ್ದ ಪುತ್ಥಳಿಯನ್ನು ಹಾನಿ ಮಾಡಲು ಯತ್ನಿಸಿದ್ದರು ಮತ್ತು ಕರ್ತವ್ಯಕ್ಕೆ ಅಡ್ಡಿಪಡಿಸಿದ್ದರು.
ಶಾಂತಿಯುತವಾಗಿ ಪ್ರತಿಭಟನೆ ಮಾಡುವಂತೆ ಹೇಳಿದ್ದರು ಸಹ ಅವರು ನಮ್ಮ ಮಾತಿಗೆ ಬೆಲೆ ಕೊಡಲಿಲ್ಲ. ಈ ವೇಳೆ ಅಧಿಕಾರಿಗಳು ಹಾಗೂ ಪ್ರತಿಭಟನಾ ನಿರತರ ನಡುವೆ ಮಾತಿನ ಚಕಮಕಿ ಏರ್ಪಟ್ಟಾಗ ಈ ರೀತಿಯಾಗಿದೆ. ವೈರಲ್​ ಆಗಿರುವ ವಿಡಿಯೋದಲ್ಲಿ ಮಹಿಳಾ ಅಧಿಕಾರಿಗಳು ಸಹ ಇರುವುದು ಕಂಡು ಬರುತ್ತದೆ ಎಂದು ಹಿರಿಯ ಪೊಲೀಸ್​ ಆಫೀಸರ್​ ಒಬ್ಬರು ತಿಳಿಸಿದ್ದಾರೆ.
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
Sign in to your account
Please enter an answer in digits:sixteen − 5 =
Remember me
