ನವದೆಹಲಿ:ಮಾರ್ಚ್ 24 ರಂದು ಮೊದಲ ಬಾರಿಗೆ ಲಾಕ್​ಡೌನ್ ಘೋಷಣೆಯಾದ ನಂತರ ಸ್ಥಗಿತಗೊಂಡಿರುವ ಸಾರ್ವಜನಿಕ ಸಾರಿಗೆ ಕೆಲವು ಮಾರ್ಗಸೂಚಿಗಳೊಂದಿಗೆ ಶೀಘ್ರದಲ್ಲೇ ಕಾರ್ಯಾರಂಭಗೊಳ್ಳುವ ಸಾಧ್ಯತೆ ಇದೆ ಎಂದು ರಸ್ತೆ ಸಾರಿಗೆ ಸಚಿವ ನಿತಿನ್ ಗಡ್ಕರಿ ಬುಧವಾರ ಭರವಸೆ ನೀಡಿದ್ದಾರೆ.ಭಾರತದ ಬಸ್ ಮತ್ತು ಕಾರ್ ಆಪರೇಟರ್ಸ್ ಕಾನ್ಫೆಡರೇಷನ್ ಸದಸ್ಯರನ್ನು ಉದ್ದೇಶಿಸಿ ವೀಡಿಯೋ ಕಾನ್ಫರೆನ್ಸಿಂಗ್ ಮೂಲಕ ಅವರು ಮಾತನಾಡಿದರು.
ಇದನ್ನೂ ಓದಿ:ಗರ್ಭಸ್ಥ ಕರಡಿ ಕೊಲೆಯಾದ ಫೋಟೊ ವೈರಲ್ ಆಗುತ್ತಿದ್ದಂತೆ ಒಬ್ಬ ಅರೆಸ್ಟ್ಬಸ್​​ಗಳು ಮತ್ತು ಕಾರುಗಳನ್ನು ನಿರ್ವಹಿಸುವಾಗ ಸಾಮಾಜಿಕ ಅಂತರವನ್ನು ಕಾಯ್ದುಕೊಳ್ಳುವುದು ಮತ್ತು ಕೈ ತೊಳೆಯುವುದು, ಸ್ಯಾನಿಟೈಸಿಂಗ್, ಫೇಸ್ ಮಾಸ್ಕ್ ಧರಿಸುವುದು ಇತ್ಯಾದಿ ಎಲ್ಲ ಅಗತ್ಯ ಸುರಕ್ಷತಾ ಕ್ರಮಗಳನ್ನು ಅಳವಡಿಸಿಕೊಳ್ಳಲು ಸೂಚನೆ ನೀಡಿದರು.ಕೊರೊನಾವೈರಸ್ ಹಾಗೂ ಆರ್ಥಿಕ ಕುಸಿತದಂತಹ ಎರಡೂ ಯುದ್ಧಗಳನ್ನು ಗೆಲ್ಲುವಲ್ಲಿ ದೇಶ ಮತ್ತು ಅದರ ಸಂಸ್ಥೆಗಳು ಒಟ್ಟಾಗಿ ಕಾರ್ಯನಿರ್ವಹಿಸುತ್ತವೆ ಎಂದು ಗಡ್ಕರಿ ವಿಶ್ವಾಸ ವ್ಯಕ್ತಪಡಿಸಿದರು.ಬಡ್ಡಿ ಪಾವತಿ ವಿನಾಯಿತಿ ವಿಸ್ತರಣೆ, ಸಾರ್ವಜನಿಕ ಸಾರಿಗೆ ಮರು ಆರಂಭಿಸುವುದು, ಎಂಎಸ್​ಎಂಇ ಪ್ರಯೋಜನಗಳನ್ನು ವಿಸ್ತರಿಸುವುದು, ವಿಮಾ ಪಾಲಿಸಿ ಸಿಂಧುತ್ವವನ್ನು ವಿಸ್ತರಿಸುವುದು ಸೇರಿ ಸಾರ್ವಜನಿಕ ಸಾರಿಗೆ ಸ್ಥಿತಿಗತಿ ಸುಧಾರಿಸಲು ಒಕ್ಕೂಟದ ಸದಸ್ಯರು ಸಲಹೆಗಳನ್ನು ನೀಡಿದರು. (ಏಜನ್ಸೀಸ್)
ಒಂದು ತಾಸಿನಲ್ಲೇ ಪತ್ತೆ ಹಚ್ಚಬಹುದು ಕರೊನಾ ಸೋಂಕು, ಸಿಎಸ್​ಐಆರ್​​​​ನ ತಂತ್ರಜ್ಞಾನ ಅಭಿವೃದ್ಧಿ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:thirteen − six =
Remember me
