ಪುದುಚೇರಿ:ಹುಟ್ಟುಹಬ್ಬವನ್ನು ಕೆಲವರು ಸ್ಟಾರ್​​ ಹೋಟೆಲ್​ಗಳಲ್ಲಿ ಹಾಗೂ ಅನಾಥಾಶ್ರಮಗಳಲ್ಲಿ ಆಚರಿಸುತ್ತಾರೆ. ಆದರೆ ಪುದುಚೇರಿ ಮುದಲಿಯಾರ್‌ಪೇಟ್ ಕ್ಷೇತ್ರದ ಡಿಎಂಕೆ ಶಾಸಕ. ಸಂಪತ್ ಅವರು ತಮ್ಮ ಹುಟ್ಟುಹಬ್ಬದಂದು ಸ್ಟಾರ್ ಹೋಟೆಲ್‌ನಲ್ಲಿ ಸ್ವಚ್ಛತಾ ಕಾರ್ಯಕರ್ತರಿಗೆ ಭರ್ಜರಿ ಪಾರ್ಟಿ ನೀಡಿದ್ದಾರೆ.
ಸಂಪತ್ ಅವರು ಪುದುಚೇರಿಯ ಮುದಲಿಯಾರ್‌ಪೇಟ್ ಕ್ಷೇತ್ರದ ಡಿಎಂಕೆ ಶಾಸಕರಾಗಿದ್ದಾರೆ. ಮೊನ್ನೆ ಹುಟ್ಟುಹಬ್ಬ ಆಚರಿಸಿಕೊಂಡ ಶಾಸಕ ಸಂಪತ್, ತಮ್ಮ ಕ್ಷೇತ್ರದಲ್ಲಿ ಸ್ವಚ್ಛತಾ ಕಾರ್ಯದಲ್ಲಿ ತೊಡಗಿರುವ ಕಾರ್ಯಕರ್ತರಿಗೆ ಸ್ಪೆಷಲ್ ಪಾರ್ಟಿಯನ್ನು ಸ್ಟಾರ್ ಹೋಟೆಲ್‌ನಲ್ಲಿ ಆಯೋಜಿಸಿದ್ದರು. ಈ ಪಾರ್ಟಿಯು ಬಫೆ ಶೈಲಿಯಲ್ಲಿ ಆಯೋಜಿಸಲಾಗಿತ್ತು. ನೀವು ಎಷ್ಟು ಬೇಕಾದರೂ ಯಾವ ಪದಾರ್ಥವನ್ನಾದರು ಸೇವಿಸಬಹುದಾಗಿತ್ತು. ಪಾರ್ಟಿ ಮಾತ್ರವಲ್ಲದೆ ಸ್ವಚ್ಛತಾ ಮಹಿಳಾ ಕಾರ್ಯಕರ್ತರಿಗೆ ಹುಟ್ಟುಹಬ್ಬದ ಉಡುಗೊರೆಯಾಗಿ ಸೀರೆಯನ್ನು ನೀಡಿದ್ದಾರೆ.
ಇದನ್ನೂ ಓದಿ:ಡಿವೋರ್ಸ್ ಕೊಟ್ಟ ಪತಿ; ಮೀಸೆ, ಗಡ್ಡ ಬಿಟ್ಟು ಪುರುಷನಾದ ಮಹಿಳೆ!
ಮೆನುವಿನಲ್ಲಿ ಬಿರಿಯಾನಿ, ಪನೀರ್ ಬಟರ್ ಮಸಾಲಾ, ಇತ್ಯಾದಿ ಸೇರಿದಂತೆ ವಿವಿಧ ರೀತಿಯ ಸಸ್ಯಾಹಾರಿ ಮತ್ತು ಮಾಂಸಾಹಾರಿ ಆಹಾರವನ್ನು ನೀಡಲಾಗಿತ್ತು. ಸಂಪತ್ ಅವರು ತಮ್ಮ ಕೈಯಾರೆ ಎಲ್ಲರಿಗೂ ಊಟ ಬಡಿಸಿ ಜತೆಗೆ ಕುಳಿತು ಊಟ ಮಾಡಿದ್ದಾರೆ. ಈ ಫೋಟೋಗಳು ಸೋಶಿಯಲ್​ ಮೀಡಿಯಾದಲ್ಲಿ ವೈರಲ್​ ಆಗುವುದರ ಜತೆ ಸಂಪತ್ ಅವರ ಈ ಕಾರ್ಯಕ್ಕೆ ಮೆಚ್ಚುಗೆ ವ್ಯಕ್ತವಾಗುತ್ತಿದೆ.
2 ವರ್ಷ ಬಳಿಕ ಫೇಸ್‌ಬುಕ್, ಯೂಟ್ಯೂಬ್‌ಗೆ ಮರಳಿದ ಟ್ರಂಪ್; I’M BACK ಎಂದ ಅಮೆರಿಕದ ಮಾಜಿ ಅಧ್ಯಕ್ಷ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:10 + eleven =
Remember me
