ನವದೆಹಲಿ:ಐಎಎಸ್ ಪ್ರೊಬೆಷನರಿ ಪೂಜಾ ಖೇಡ್ಕರ್ ಸುತ್ತ ವಿವಾದಗಳು ತೀವ್ರಗೊಳ್ಳುತ್ತಿವೆ. ಇತ್ತೀಚೆಗಷ್ಟೇ ಆಕೆಯ ಪಾಲಕರ ವೈವಾಹಿಕ ಸ್ಥಿತಿಯ ಬಗ್ಗೆ ಮಾಹಿತಿ ನೀಡುವಂತೆ ಕೇಂದ್ರ ಸರ್ಕಾರ ಪುಣೆ ಪೊಲೀಸರಿಗೆ ಸೂಚನೆ ನೀಡಿದೆ.
ಇದನ್ನೂ ಓದಿ:‘ಟ್ರಂಪ್​ಗೆ ಬಿಲಿಯನೇರ್‌ಗಳ ಬೆಂಬಲ’: ಕಮಲಾ ಹ್ಯಾರಿಸ್
ಜಾತಿ ಮತ್ತು ಅಂಗವಿಕಲ ಕೋಟಾಗಳನ್ನು ದುರುಪಯೋಗಪಡಿಸಿಕೊಂಡ ಆರೋಪ ಕೇಳಿಬಂದ ಹಿನ್ನೆಲೆಯಲ್ಲಿ ಕೇಂದ್ರ ಈ ಆದೇಶಿಸಿದೆ.
ಯುಪಿಎಸ್‌ಸಿ ಪರೀಕ್ಷೆ ಮಾನದಂಡಗಳನ್ನು ಪಾಲಿಸಿಲ್ಲ ಎಂಬ ಆರೋಪ ಪೂಜಾ ಮೇಲಿದ್ದು, ಪಾಲಕರ ವಾರ್ಷಿಕ ಆದಾಯ ರೂ.8 ಲಕ್ಷಕ್ಕಿಂತ ಹೆಚ್ಚಿದೆ. ತಾನು ತಾಯಿಯೊಂದಿಗೆ ವಾಸಿಸುತ್ತಿದ್ದೇನೆ ಎಂದು ಪೂಜಾ ಮಾಹಿತಿ ನೀಡಿದ್ದು, ಪಾಲಕರ ವೈವಾಹಿಕ ಸ್ಥಿತಿಯ ಬಗ್ಗೆ ವಿವರ ನೀಡಲು ಪುಣೆ ಪೊಲೀಸರಿಗೆ ಸೂಚಿಸಲಾಗಿದೆ.
ಪೂಜಾ ಪುಣೆ ಜಿಲ್ಲಾಧಿಕಾರಿ ಕಚೇರಿಯಲ್ಲಿ ತರಬೇತಿ ಸಮಯದಲ್ಲಿ ನಿಯಮಗಳಿಗೆ ವಿರುದ್ಧವಾಗಿ ಸವಲತ್ತುಗಳು ಮತ್ತು ಸೌಲಭ್ಯಗಳನ್ನು ಕೋರಿದಾಗ ವಿವಾದ ಪ್ರಾರಂಭವಾಯಿತು. ಖಾಸಗಿ ವಾಹನದ ಮೇಲೆ ಮಹಾರಾಷ್ಟ್ರ ಸರ್ಕಾರದ ಲಾಂಚನ ಮತ್ತು ಕೆಂಪು ದೀಪ ಅಳವಡಿಸಿಕೊಂಡಿದ್ದು ವಿವಾದಕ್ಕೆ ಕಾರಣವಾಯಿತು. ಬಳಿಕ ಆಕೆ ಯುಪಿಎಸ್‌ಸಿಗೆ ಸುಳ್ಳು ಅಫಿಡವಿಟ್‌ಗಳನ್ನು ಸಲ್ಲಿಸಿದ್ದಾರೆ ಎಂದು ಆರೋಪಿಸಲಾಯಿತು, ಇದು ಅವರ ವಿರುದ್ಧ ಕ್ರಮಕ್ಕೆ ಕಾರಣವಾಗಿದೆ.
ಈ ನಡುವೆ ಪೂಜಾ ತಾಯಿ ಮನೋರಮಾ ಪ್ರಸ್ತುತ ಬೆದರಿಕೆ ಪ್ರಕರಣದಲ್ಲಿ ಜೈಲಿನಲ್ಲಿದ್ದಾರೆ. 2023 ರಲ್ಲಿ, ಭೂ ವಿವಾದ ಪ್ರಕರಣದಲ್ಲಿ ವ್ಯಕ್ತಿಯೊಬ್ಬನಿಗೆ ಬಂದೂಕು ತೋರಿಸಿ ಬೆದರಿಕೆ ಹಾಕಿದ ನಂತರ ಪುಣೆ ಗ್ರಾಮಾಂತರ ಪೊಲೀಸರು ಆಕೆಯನ್ನು ಬಂಧಿಸಿದ್ದರು. ಖೇಡ್ಕರ್ ಅವರ ತಂದೆ ನಿವೃತ್ತ ಸರ್ಕಾರಿ ಅಧಿಕಾರಿ ದಿಲೀಪ್ ಕೂಡ ಪ್ರಕರಣದಲ್ಲಿ ಆರೋಪಿಯಾಗಿದ್ದಾರೆ. ಆದರೆ, ಜುಲೈ 25ರವರೆಗೆ ಅವರನ್ನು ಬಂಧಿಸದಂತೆ ಪುಣೆ ನ್ಯಾಯಾಲಯ ತಾತ್ಕಾಲಿಕ ಜಾಮೀನು ನೀಡಿದೆ.
ಷೇರುಪೇಟೆ ಹೂಡಿಕೆದಾರರಿಗೆ ಶಾಕ್.. ಲಾಭದ ಮೇಲೆ ತೆರಿಗೆ ಹೆಚ್ಚಳ!

ಬೆಂಗಳೂರು: ಜೀವನಶೈಲಿ ಮತ್ತು ಆಹಾರ ಪದ್ಧತಿಯಲ್ಲಿನ ಬದಲಾವಣೆಯಿಂದಾಗಿ ಅನೇಕ ಜನರು ಅಧಿಕ ತೂಕದಿಂದ ಬಳಲುತ್ತಿದ್ದಾರೆ. ಆದರೆ…
ಬೆಂಗಳೂರು:  ಔಷಧೀಯ ಗುಣಗಳಿಂದ ಸಮೃದ್ಧವಾಗಿರುವ ತೆಂಗಿನ ನೀರು ನಿಮ್ಮ  ಆರೋಗ್ಯವನ್ನು ಹೆಚ್ಚಿನ ಪ್ರಮಾಣದಲ್ಲಿ ಸುಧಾರಿಸುತ್ತದೆ. ನೀವು…
ಬೆಂಗಳೂರು:  ಬಿಕ್ಕಳಿಕೆ ಯಾರನ್ನಾದರೂ ನೆನಪಿಸುತ್ತದೆ ಎಂದು ದೊಡ್ಡವರು ಹೇಳುತ್ತಾರೆ. ಅಲ್ಲದೆ ಶಾಕಿಂಗ್ ಏನಾದರೂ ಹೇಳಿದರೆ ತಕ್ಷಣ…
Sign in to your account
Please enter an answer in digits:one × 2 =
Remember me
