ನವದೆಹಲಿ:ಅಧಿಕಾರ ವಹಿಸಿಕೊಳ್ಳುವುದಕ್ಕೂ ಮುನ್ನವೇ ತರಬೇತಿ ಅವಧಿಯಲ್ಲೇ ವಿವಾದಗಳಿಂದಲೇ ಸಾಕಷ್ಟು ಸದ್ದು ಮಾಡಿದ್ದ ಮಹಾರಾಷ್ಟ್ರ ಮೂಲದ ಮಾಜಿ ಐಎಎಸ್​ ಅಧಿಕಾರಿ ಪೂಜಾ ಖೇಡ್ಕರ್​ ಒಂದಿಲ್ಲೊಂದು ವಿಚಾರಕ್ಕೆ ಸದ್ದು ಮಾಡುತ್ತಿದ್ದು, ಇತ್ತೀಚಿನ ದಿನಗಳಲ್ಲಿ ವಿವಾದದ ಕೇಂದ್ರಬಿಂದುವಾಗಿದ್ದಾರೆ ಎಂದರೆ ತಪ್ಪಾಗಲಾರದು.
022 ರ ಕೇಂದ್ರ ನಾಗರಿಕ ಸೇವಾ ಪರೀಕ್ಷೆಗಾಗಿ ಯುಪಿಎಸ್​ಸಿಗೆ ಸಲ್ಲಿಸಿದ ಅರ್ಜಿಯಲ್ಲಿ ಸುಳ್ಳು ದಾಖಲೆ ನೀಡಿ ಒಬಿಸಿ ಮತ್ತು ಅಂಗವಿಕಲ ವ್ಯಕ್ತಿ ಕೋಟಾ ಪ್ರಯೋಜನಗಳನ್ನು ಪಡೆದ ಆರೋಪ ಎದುರಿಸುತ್ತಿರುವ ಐಎಎಸ್​ ಪ್ರೊಬೇಷನರ್ ಮಾಜಿ ಅಧಿಕಾರಿ ಪೂಜಾ ಖೇಡ್ಕರ್ ಅವರಿಗೆ ದೆಹಲಿ ನ್ಯಾಯಾಲಯ ಗುರುವಾರ ನಿರೀಕ್ಷಣಾ ಜಾಮೀನು ನಿರಾಕರಿಸಿದೆ.
ಇದನ್ನೂ ಓದಿ:ಹಾಸಿಗೆ ಮೇಲೆ ಗಂಡ ಮಾಡುವ ಈ ಕೆಲಸ ನನಗೆ ಇಷ್ಟವಾಗ್ತಿಲ್ಲ ಎಂದು ಡಿವೋರ್ಸ್​ ನೀಡಲು ಮುಂದಾದ ಪತ್ನಿ
ಪ್ರಕರಣಕ್ಕೆ ಸಂಬಂಧಿಸಿದಂತೆ ಪೂಜಾ ಖೇಡ್ಕರ್ ಅವರನ್ನು ಪೊಲೀಸರು ಬಂಧಿಸಿಲ್ಲವಾದರು. ಅವರು ತಮ್ಮ ವಕೀಲರ ಮೂಲಕ ನ್ಯಾಯಾಲಯಕ್ಕೆ ನಿರೀಕ್ಷಣಾ ಜಾಮೀನು ಕೋರಿ ಅರ್ಜಿ ಸಲ್ಲಿಸಿದ್ದರು. ವಾದ-ಪ್ರತಿವಾದ ಆಲಿಸಿದ ನ್ಯಾಯಾಲಯವು ಪೂಜಾ ಖೇಡ್ಕರ್ ಸಲ್ಲಿಸಿದ್ದ ನಿರೀಕ್ಷಣಾ ಜಾಮೀನು ಅರ್ಜಿ ವಜಾ ಮಾಡಿದೆ. ಇತ್ತ ನ್ಯಾಯಾಲಯ ಅರ್ಜಿ ವಜಾ ಮಾಡುತ್ತಿದ್ದಂತೆ ಪೂಜಾ ಖೇಡ್ಕರ್​ ದುಬೈಗೆ ಪರಾರಿಯಾಗಿದ್ದಾರೆ ಎಂದು ವರದಿಯಾಗಿದೆ. ಈ ಸಂಬಂಧ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
ಯುಪಿಎಸ್​ಸಿ ಅಲ್ಲಿರುವ ಯಾರಾದರೂ ಪೂಜಾ ಖೇಡ್ಕರ್ ಅವರಿಗೆ ಸಹಾಯ ಮಾಡಿದ್ದಾರೆಯೇ? ಎಂಬುದರ ಬಗ್ಗೆ ದಹೆಲಿ ಪೊಲೀಸರು ಆಳವಾಗಿ ಮತ್ತು ನ್ಯಾಯಯುತವಾಗಿ ತನಿಖೆ ಮಾಡಬೇಕು ಎಂದು ತನಿಖಾ ಏಜೆನ್ಸಿಗೆ ಪಟಿಯಾಲ ಹೌಸ್ ಕೋರ್ಟ್‌ನ ಹೆಚ್ಚುವರಿ ಸೆಷನ್ಸ್ ನ್ಯಾಯಾಧೀಶ ದೇವೆಂದರ್ ಕುಮಾರ್ ಜಂಗಾಲ ಅವರು ಆದೇಶ ನೀಡಿದ್ದಾರೆ. ನ್ಯಾಯಾಲಯದ ಆದೇಶದ ಮೇರೆಗೆ ಪೊಲೀಸರು ತನಿಖೆಯನ್ನು ಚುರುಕುಗೊಳಿಸಿದ್ದಾರೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:4 × three =
Remember me
