ಪುಣೆ:ಕರೊನಾವೈರಸ್ ಪೀಡಿತರ ಸಂಖ್ಯೆ ಹೆಚ್ಚಳವಾಗುತ್ತಿರುವುದರಿಂದ ಮಹಾರಾಷ್ಟ್ರದ ಪುಣೆಯಲ್ಲಿ ನಾಳೆಯಿಂದ ಸಂಜೆ 6 ರಿಂದ ಬೆಳಿಗ್ಗೆ 6ರವರೆಗೆ ​ ಕರ್ಫ್ಯೂ ವಿಧಿಸಲಾಗಿದೆ. ಈ ವೇಳೆ ಹೋಮ್​ ಡೆಲಿವರಿ, ಮೆಡಿಕಲ್ ಸೇವೆಗಳಿಗೆ ಹಾಗೂ ಅಗತ್ಯ ಸೇವೆಗಳಿಗೆ ಮಾತ್ರ ಅವಕಾಶ ನೀಡಲಾಗಿದೆ.
ಇದಲ್ಲದೇ ಒಂದು ವಾರ ಪುಣೆಯಲ್ಲಿ ಧಾರ್ಮಿಕ ಕೇಂದ್ರಗಳು, ಹೋಟೆಲ್, ಬಾರ್, ರೆಸ್ಟೋರಂಟ್​ಗಳು, ಮಾಲ್, ಸಿನಿಮಾ ಮಂದಿರಗಳನ್ನು ಮುಚ್ಚಲು ಆದೇಶಿಸಲಾಗಿದೆ. ನಿನ್ನೆ ಒಂದೇ ದಿನ ಪುಣೆಯಲ್ಲಿ 8012 ಹೊಸ ಕರೊನಾವೈರಸ್ ಸೋಂಕಿತರು ಕಂಡು ಬಂದಿದ್ದಾರೆ.
ಪುಣೆಯಲ್ಲಿ ಸೋಂಕಿತರ ಸಂಖ್ಯೆ ಭಾರೀ ಪ್ರಮಾಣದಲ್ಲಿ ಹೆಚ್ಚಳವಾಗುತ್ತಿರುವುದರಿಂದ ಮಹಾರಾಷ್ಟ್ರ ಸರ್ಕಾರ ಈ ನಿರ್ಧಾರ ತೆಗೆದುಕೊಂಡಿದೆ.
ಇದನ್ನೂ ಓದಿ:ಕರೊನಾ ಮಾರ್ಗಸೂಚಿ ಎರ್ರಾಬಿರ್ರಿ ಮಾಡಿದ್ರೆ ಹುಷಾರ್​, ಸರ್ಕಾರಕ್ಕೇ ಎಚ್ಚರಿಕೆ ನೀಡಿದ ಡಿಕೆಶಿ!
ಅಲ್ಲದೇ ಪುಣೆಯಲ್ಲಿ ಎಲ್ಲ ಖಾಸಗಿ ಆಸ್ಪತ್ರೆಗಳು ಕೋವಿಡ್ ರೋಗಿಗಳಿಗೆ ತಮ್ಮಲ್ಲಿ ಲಭ್ಯವಿರುವ ಹಾಸಿಗೆಗಳಲ್ಲಿ ಶೇ 80 ರಷ್ಟು ಮೀಸಲಿಡಬೇಕು ಎಂದು ಪುಣೆ ಮಹಾನಗರ ಪಾಲಿಕೆ ಮೇಯರ್ ಮುರುಳಿಧರ್ ಮಹೋಲ್ ಆದೇಶಿಸಿದ್ದಾರೆ. ಮುಂಬೈನಲ್ಲೂ ಕೂಡ ಇದೇ ಪರಿಸ್ಥಿತಿ ಇದೆ. ಆದರೆ ಅಲ್ಲಿ ನೈಟ್ ಕರ್ಫ್ಯೂ ಜಾರಿಗೊಳಿಸುವ ತೀರ್ಮಾನವನ್ನು ರಾಜ್ಯ ಸರ್ಕಾರ ತೆಗೆದುಕೊಂಡಿಲ್ಲ.
ಇನ್ನೊಂದೆಡೆ ಕರ್ನಾಟಕದಲ್ಲೂ ಕೋವಿಡ್ ಸೋಂಕಿತರ ಸಂಖ್ಯೆ ಹೆಚ್ಚಳವಾಗುತ್ತಿರುವುರಿಂದ ಬೆಂಗಳೂರಿನಲ್ಲಿ ಪುಣೆ ಮಾದರಿಯಲ್ಲಿ ನೈಟ್​ ಕರ್ಫ್ಯೂ ಜಾರಿಗೊಳಿಸಲು ಚಿಂತಿಸಲಾಗುತ್ತಿದೆ.
ಮಗು ಗರ್ಭದಲ್ಲಿದ್ದಾಗಲೇ ಮತ್ತೊಮ್ಮೆ ಗರ್ಭ ಧರಿಸಿದ ಮಹಿಳೆ- ನಂಬಲು ಆಗ್ತಿಲ್ವಾ? ಈ ಘಟನೆ ಓದಿ..

ಪ್ರಿಯಾಂಕಾ ಗಾಂಧಿ ಚುನಾವಣಾ ಪ್ರವಾಸ ರದ್ದು; ಕಾರಣ ಏನು ಗೊತ್ತೆ ?

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:3 + seven =
Remember me
