ಕಲ್ಕತ್ತಾ:ಪಶ್ಚಿಮ ಬಂಗಳಾದ ರಾಜಧಾನಿ ಕಲ್ಕತ್ತಾದ ಆರ್​ಜಿಕಾರ್​ ಮೆಡಿಕಲ್​ ಕಾಲೇಜು ಮತ್ತು ಆಸ್ಪತ್ರೆಯಲ್ಲಿ ಟ್ರೈನಿ ವೈದ್ಯೆ ಅತ್ಯಾಚಾರ ಹಾಗೂ ಕೊಲೆ ಪ್ರಕರಣ ಇಡೀ ದೇಶವನ್ನೇ ಬೆಚ್ಚಿ ಬೀಳಿಸಿದ್ದು ವ್ಯಾಪಪಕ ಆಕ್ರೋಶಕ್ಕೆ ಕಾರಣವಾಗಿದೆ. ದಿನ ಕಳೆದಂತೆ ಪ್ರಕರಣದ ಕಾವು ಹೆಚ್ಚುತ್ತಿದ್ದು, ದೇಶಾದ್ಯಂತ ವ್ಯಾಪಕ ಪ್ರತಿಭಟನೆಗಳು ನಡೆಯುತ್ತಿವೆ. ಹೈಕೋರ್ಟ್​ ಆದೇಶದ ಮೇರೆಗೆ ಪ್ರಕರಣವನ್ನು ರಾಜ್ಯ ಸರ್ಕಾರ ಸಿಬಿಐಗೆ ವಹಿಸಿದ್ದು, ಕೇಂದ್ರಿಯಾ ತನಿಖಾ ದಳವು 30 ಶಂಕಿತರನ್ನು ಗುರುತಿಸಿದ್ದು, ವಶಕ್ಕೆ ಪಡೆದು ವಿಚಾರಣೆಗೆ ಒಳಪಡಿಸಿದೆ.
ಘಟನೆಗೆ ಸಂಬಂಧಿಸಿದಂತೆ ಸಿನಿಮಾ ಸೆಲೆಬ್ರಿಟಿಗಳು, ಕ್ರೀಡಾ ತಾರೆಯರು ಸೇರಿದಂತೆ ಹಲವರು ಪ್ರತಿಕ್ರಯಿಸುತ್ತಿದ್ದು, ಈ ಬಗ್ಗೆ ಟೀಮ್​ ಇಂಡಿಯಾ ಮಾಜಿ ನಾಯಕ, ಬಿಸಿಸಿಐ ಮಾಜಿ ಅಧ್ಯಕ್ಷ ಸೌರವ್​ ಗಂಗೂಲಿ ಮಾತನಾಡಿದ್ದಾರೆ. ಆರೋಪಿಗಳಿಗೆ ಕಠಿಣ ಕಾನೂನು ಶಿಕ್ಷೆಗೆ ಗುರಿಪಡಿಸಬೇಕು ಎಂದು ಆಗ್ರಹಿಸಿದ್ದಾರೆ.
VIDEO | Kolkata medic rape-murder case: "…this is a terrible thing, and what has happened is very shameful. The CBI and the police are investigating this, and I hope the strictest of punishment will be given to the accused," says former India cricketer Sourav Ganguly…pic.twitter.com/Q9N8wuk0fN
ಇದನ್ನೂ ಓದಿ:VIDEO| ವಿನೇಶ್​ ಪೋಗಟ್​ ಸ್ವಾಗತದ ವೇಳೆ ರಾಷ್ಟ್ರಧ್ವಜದ ಮೇಲೆ ನಿಂತ ಭಜರಂಗ್​ ಪೂನಿಯಾ
ನಾನು ಈ ಮೊದಲೇ ಹೇಳಿದಂತೆ ಇದೊಂದು ಭಯಾನಕ ವಿಷಯವಾಗಿದ್ದು, ಸಿಬಿಐನವರು ಪ್ರಕರಣವನ್ನು ತನಿಖೆ ಮಾಡುತ್ತಿದ್ದಾರೆ. ಇದೊಂದು ನಾಚಿಕೆಗೇಡಿನ ಸಂಗತಿಯಾಗಿದ್ದು, ಸಿಬಿಐ ತಪ್ಪಿತಸ್ಥರನ್ನು ಕಠಿಣ ಕಾನೂನು ಶಿಕ್ಷೆ ನೀಡಬೇಕೆಂದು ನಾನು ಆಗ್ರಹಿಸುತ್ತೇನೆ. ಶಿಕ್ಷೆ ಹೇಗಿರಬೇಕೆಂದರೆ ಮುಂದಿನ ದಿನಗಳಲ್ಲಿ ಜನರಿಗೆ ಇಂತಹ ಆಲೋಚನೆಗಳು ಬರಬಾರದು ಹಾಗಿರಬೇಕು ಎಂದು ಟೀಮ್​ ಇಂಡಿಯಾ ಮಾಜಿ ನಾಯಕ, ಬಿಸಿಸಿಐ ಮಾಜಿ ಅಧ್ಯಕ್ಷ ಸೌರವ್​ ಗಂಗೂಲಿ ಹೇಳಿದ್ದಾರೆ.
ಆಗಸ್ಟ್​ 09ರಂದು ಕಲ್ಕತ್ತಾದ ಆರ್​ಜಿಕಾರ್​ ಮಡಿಕಲ್​ ಕಾಲೇಜು ಮತ್ತು ಆಸ್ಪತ್ರೆಯಲ್ಲಿ 31 ವರ್ಷದ ಟ್ರೈನಿ ವೈದ್ಯೆಯೆ ಮೇಲೆ ಅತ್ಯಾಚಾರ ಎಸಗಿ ಕೊಲೆ ಮಾಡಲಾಗಿತ್ತು. ಈ ವಿಚಾರ ಹೊರಬರುತ್ತಿದ್ದಂತೆ ದೇಶಾದ್ಯಂತ ವ್ಯಾಪಕ ಆಕ್ರೋಶ ವ್ಯಕ್ತವಾಗುತ್ತಿದ್ದು, ತಪ್ಪಿತಸ್ಥರನ್ನು ಗಲ್ಲಿಗೇರಿಸಬೇಕು ಮತ್ತು ಆರೋಪಿಗಳ ವಿರುದ್ಧ ಕಠಿಣ ಕ್ರಮ ಜರುಗಿಸುವಲ್ಲಿ ವಿಫಲರಾದ ಮಮತಾ ಬ್ಯಾನರ್ಜಿ ರಾಜೀನಾಮೆ ನೀಡಬೇಕೆಂದು ಆಗ್ರಹ ಕೇಳಿ ಬರುತ್ತಿದೆ.
ಬೆಂಗಳೂರು: ಜೀವನಶೈಲಿ ಮತ್ತು ಆಹಾರ ಪದ್ಧತಿಯಲ್ಲಿನ ಬದಲಾವಣೆಯಿಂದಾಗಿ ಅನೇಕ ಜನರು ಅಧಿಕ ತೂಕದಿಂದ ಬಳಲುತ್ತಿದ್ದಾರೆ. ಆದರೆ…
ಬೆಂಗಳೂರು:  ಔಷಧೀಯ ಗುಣಗಳಿಂದ ಸಮೃದ್ಧವಾಗಿರುವ ತೆಂಗಿನ ನೀರು ನಿಮ್ಮ  ಆರೋಗ್ಯವನ್ನು ಹೆಚ್ಚಿನ ಪ್ರಮಾಣದಲ್ಲಿ ಸುಧಾರಿಸುತ್ತದೆ. ನೀವು…
ಬೆಂಗಳೂರು:  ಬಿಕ್ಕಳಿಕೆ ಯಾರನ್ನಾದರೂ ನೆನಪಿಸುತ್ತದೆ ಎಂದು ದೊಡ್ಡವರು ಹೇಳುತ್ತಾರೆ. ಅಲ್ಲದೆ ಶಾಕಿಂಗ್ ಏನಾದರೂ ಹೇಳಿದರೆ ತಕ್ಷಣ…
Sign in to your account
Please enter an answer in digits:6 + three =
Remember me
