ಅಮೃತಸರ:ಏಳೇಳು ಜನ್ಮಕ್ಕೂ ಜತೆಯಾಗಿರುವುದಾಗಿ ಪ್ರಮಾಣ ಮಾಡಿ ಮದುವೆಯಾಗಿದ್ದ ಧರ್ಮಪತ್ನಿ ಹಾಗೂ ಮುದ್ದಿನ ಮಗನನ್ನು ಗಂಡನೇ ಕೊಲೆ ಮಾಡಿ, ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಪಂಜಾಬ್​ನ ಅಮೃತಸರದಲ್ಲಿ ನಡೆದಿದೆ. ಘಟನೆಗೆ ಕಾರಣವೇನು ಎನ್ನುವುದರ ಕುರಿತಾಗಿ ಪೊಲೀಸರು ತನಿಖೆ ಆರಂಭಿಸಿದ್ದಾರೆ.
ಅಮೃತಸರದ ಗುರು ತೇಘ್​ ಬಹದೂರ್​ ನಗರದಲ್ಲಿ ಇಂತದ್ದೊಂದು ಘಟನೆ ನಡೆದಿದೆ. ವಿಕ್ರಮ್​ಜೀತ್​ ಹೆಸರಿನ ವ್ಯಕ್ತಿ ಹೆಂಡತಿ ಮತ್ತು ನಾಲ್ಕು ವರ್ಷದ ಮಗನನ್ನು ಕೊಲೆ ಮಾಡಿದ್ದಾನೆ. ವಿಕ್ರಮ್​ಜೀತ್​ ಒಬ್ಬ ಫೈನ್ಸಾನ್ಶಿಯರ್​ ಆಗಿದ್ದು, ಮಾರ್ಕೆಟ್​ನಲ್ಲಿ ಸಾಕಷ್ಟು ದುಡ್ಡು ಹಾಕಿದ್ದನಂತೆ. ಅದರಲ್ಲಿ ನಷ್ಟ ಉಂಟಾದ ಹಿನ್ನೆಲೆಯಲ್ಲೇ ಆತ ಈ ನಿರ್ಧಾರ ತೆಗೆದುಕೊಂಡಿರಬಹುದು ಎನ್ನಲಾಗಿದೆ.
ಸಾಯುವುದಕ್ಕೂ ಮೊದಲು ಆತ ಒಂದು ವಿಡಿಯೋ ಮಾಡಿಟ್ಟಿದ್ದಾನೆ. ನನ್ನ ಸ್ನೇಹಿತನ ಗನ್​ ತೆಗೆದುಕೊಂಡು ಬಂದು ಅದರಲ್ಲಿ ನನ್ನ ಹೆಂಡತಿ ಮತ್ತು ಮಗನನ್ನು ಕೊಲೆ ಮಾಡಿದ್ದೇನೆ. ಈಗ ನಾನೂ ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದೇನೆ. ನನ್ನ ಸ್ನೇಹಿತನಿಗೆ ಸುಳ್ಳು ಹೇಳಿ ಗನ್​ ಪಡೆದಿದ್ದೇನೆ ಎಂದು ಸ್ಪಷ್ಟನೆ ನೀಡಿದ್ದಾನೆ. ಪೊಲೀಸರು ಈ ವಿಚಾರದಲ್ಲಿ ಪ್ರಕರಣ ದಾಖಲಿಸಿಕೊಂಡಿದ್ದು, ಕೊಲೆ ಮತ್ತು ಆತ್ಮಹತ್ಯೆಗೆ ನಿಖರ ಕಾರಣವನ್ನು ಹುಡುಕುತ್ತಿದ್ದಾರೆ. (ಏಜೆನ್ಸೀಸ್​)
ಮಾಲೀಕನೇ ಇಲ್ಲದ ಖಾರ ಬೂಂದಿ ಬ್ಯಾಗ್​ನಲ್ಲಿದ್ದ ಭರ್ಜರಿ ದುಡ್ಡು ಯಾರ ಪಾಲಾಯ್ತು?

ಮಾಜಿ ಸಿಎಂ ದಿ. ಧರ್ಮಸಿಂಗ್ ಸಂಬಂಧಿಯನ್ನ ಕೊಂದವ ತಿರುಪತಿಯಲ್ಲಿ ಆತ್ಮಹತ್ಯೆ!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:2 × one =
Remember me
