ಚಂಡೀಗಢ:ಖಾನೌರಿ ಗಡಿಯಲ್ಲಿ ಬುಧವಾರ (ಫೆ.21) ನಡೆದ ರೈತರ ಪ್ರತಿಭಟನೆ ವೇಳೆ ಮೃತಪಟ್ಟ ಯುವರೈತ ಶುಭಕರನ್ ಸಿಂಗ್ ಅವರ ಕುಟುಂಬಕ್ಕೆ ಪಂಜಾಬ್ ಸಿಎಂ ಭಗವಂತ್ ಮಾನ್ ಇಂದು ಸರ್ಕಾರಿ ಉದ್ಯೋಗ ಮತ್ತು 1 ಕೋಟಿ ರೂಪಾಯಿ ಆರ್ಥಿಕ ನೆರವು ಘೋಷಿಸಿದ್ದಾರೆ.
ಇದನ್ನೂ ಓದಿ:ಯಕ್ಷಗಾನ ಕಲೆಗೆ ಅಂತಃಸತ್ವವಿದೆ ಯಕ್ಷೋತ್ಸವ ಉದ್ಘಾಟಿಸಿ ವಕೀಲ ಮಹೇಶ್ ಕಜೆ ಅಭಿಮತ
ಪ್ರತಿಭಟನೆ ವೇಳೆ ಮೃತಪಟ್ಟ ರೈತನ ಸಾವಿನ ಕುರಿತು ತನಿಖೆ ನಡೆಯಲಿದೆ. ತದನಂತರ ಪೊಲೀಸರು ಎಫ್​ಐಆರ್ ದಾಖಲಿಸಿಕೊಳ್ಳಲಿದ್ದಾರೆ ಎಂದು ಸಿಎಂ ಮನ್​ ತಿಳಿಸಿದರು. ಯುವ ರೈತನ ಸಾವಿಗೆ ಕಾರಣರಾದವರ ವಿರುದ್ಧ ತನಿಖೆಯ ನಂತರ ಎಫ್‌ಐಆರ್ ದಾಖಲಿಸಲಾಗುವುದು, ಅವರಿಗೆ ಮಾದರಿ ಶಿಕ್ಷೆಯನ್ನು ಖಚಿತಪಡಿಸಲಾಗುವುದು ಎಂದರು.
ರಾಜ್ಯ ಸರ್ಕಾರವು ರೈತರಿಗೆ ಸಂಪೂರ್ಣ ಬೆಂಬಲ ನೀಡಿದೆ. ತಮ್ಮ ನಿಜವಾದ ಬೇಡಿಕೆಗಳ ಹಿನ್ನೆಲೆಯಲ್ಲಿ ಶಾಂತಿಯುತ ಪ್ರತಿಭಟನೆಗಾಗಿ ರಾಷ್ಟ್ರ ರಾಜಧಾನಿಗೆ ತೆರಳುತ್ತಿದ್ದಾರೆ ಎಂದು ಸಿಎಂ ಹೇಳಿದರು. ಇಲ್ಲಿಯವರೆಗೆ ಯಾವುದೇ ಎಫ್‌ಐಆರ್ ದಾಖಲಾಗಿಲ್ಲದ ಕಾರಣ ಅಥವಾ ಮರಣೋತ್ತರ ಪರೀಕ್ಷೆಯನ್ನು ಮಾಡದ ಕಾರಣ, ಶುಭಕರನ್ ಅವರ ದೇಹವನ್ನು ಇನ್ನೂ ಪಟಿಯಾಲಾದ ರಾಜೇಂದ್ರ ಆಸ್ಪತ್ರೆಯಲ್ಲಿ ಇರಿಸಲಾಗಿದೆ.
ಇದನ್ನೂ ಓದಿ:ವಿಮಾ ಕ್ಲೈಮ್‌ ತಿರಸ್ಕರಿಸಿದ ಕಂಪನಿಗೆ ಗ್ರಾಹಕರ ಆಯೋಗಕ್ಕೆ 4 ಲಕ್ಷ ರೂ. ದಂಡ
ರೈತ ಮುಖಂಡರು ಮತ್ತು ಶುಭಕರನ್​ ಕುಟುಂಬವು ಸರ್ಕಾರದ ಪ್ರಸ್ತಾಪವನ್ನು ತಿರಸ್ಕರಿಸಿದ್ದು, ಯುವ ರೈತನಿಗೆ ಗುಂಡು ಹಾರಿಸಿದ ತಪ್ಪಿತಸ್ಥ ಪೊಲೀಸರ ವಿರುದ್ಧ ಮೊದಲನೆಯದಾಗಿ ಎಫ್‌ಐಆರ್ ದಾಖಲಿಸಬೇಕು ಎಂದು ಒತ್ತಾಯಿಸಿದರು. ತಾಂತ್ರಿಕವಾಗಿ, ಪೊಲೀಸರು ಮತ್ತು ವೈದ್ಯರು ಮರಣೋತ್ತರ ಪರೀಕ್ಷೆಗೆ ಒಳಪಡಿಸಲು ಕುಟುಂಬದ ಯಾರಾದರೂ ಒಬ್ಬ ವ್ಯಕ್ತಿಯ ಸಹಿ ಪಡೆಯಬೇಕು. ಆದ್ರೆ, ಕುಟುಂಬಸ್ಥರು ಮಾತ್ರ ಇದಕ್ಕೆ ಒಪ್ಪಿಗೆ ನೀಡಿಲ್ಲ ಎಂದು ವರದಿಯಾಗಿದೆ.
ನೊಂದ ಕುಟುಂಬವನ್ನು ಭೇಟಿ ಮಾಡಿದ ಜಗ್ಜಿತ್ ಸಿಂಗ್ ದಲ್ಲೆವಾಲ್, ಸರ್ವಾನ್ ಸಿಂಗ್ ಪಂಧೇರ್ ಸೇರಿದಂತೆ ರೈತ ಮುಖಂಡರು ಹರಿಯಾಣ ಪೊಲೀಸರ ವಿರುದ್ಧ ಎಫ್ಐಆರ್ ದಾಖಲಿಸುವವರೆಗೆ ಮರಣೋತ್ತರ ಪರೀಕ್ಷೆಗೆ ಅವಕಾಶ ನೀಡುವುದಿಲ್ಲ ಎಂದು ಆಕ್ರೋಶ ಹೊರಹಾಕಿದ್ದಾರೆ,(ಏಜೆನ್ಸೀಸ್).
“2028ಕ್ಕೆ ವಿರಾಟ್ ಕೊಹ್ಲಿ ನಿವೃತ್ತಿ”: ವೈರಲ್ ಆಗ್ತಿದೆ 2016ರಲ್ಲಿ ಈ ಜ್ಯೋತಿಷಿ ನುಡಿದ ಭವಿಷ್ಯ!

ಬೆಂಗಳೂರು: ಜೀವನಶೈಲಿ ಮತ್ತು ಆಹಾರ ಪದ್ಧತಿಯಲ್ಲಿನ ಬದಲಾವಣೆಯಿಂದಾಗಿ ಅನೇಕ ಜನರು ಅಧಿಕ ತೂಕದಿಂದ ಬಳಲುತ್ತಿದ್ದಾರೆ. ಆದರೆ…
ಬೆಂಗಳೂರು:  ಔಷಧೀಯ ಗುಣಗಳಿಂದ ಸಮೃದ್ಧವಾಗಿರುವ ತೆಂಗಿನ ನೀರು ನಿಮ್ಮ  ಆರೋಗ್ಯವನ್ನು ಹೆಚ್ಚಿನ ಪ್ರಮಾಣದಲ್ಲಿ ಸುಧಾರಿಸುತ್ತದೆ. ನೀವು…
ಬೆಂಗಳೂರು:  ಬಿಕ್ಕಳಿಕೆ ಯಾರನ್ನಾದರೂ ನೆನಪಿಸುತ್ತದೆ ಎಂದು ದೊಡ್ಡವರು ಹೇಳುತ್ತಾರೆ. ಅಲ್ಲದೆ ಶಾಕಿಂಗ್ ಏನಾದರೂ ಹೇಳಿದರೆ ತಕ್ಷಣ…
Sign in to your account
Please enter an answer in digits:3 × 5 =
Remember me
