ಪಂಜಾಬ್:ಆಪ್​ ಶಾಸಕ ಹಾಗೂ ಶಿಕ್ಷಣ ಸಚಿವ ಹರ್ಜೋತ್ ಸಿಂಗ್ ಬೈನ್ಸ್, ಈ ತಿಂಗಳ ಕೊನೆಯಲ್ಲಿ ಐಪಿಎಸ್ ಅಧಿಕಾರಿ ಜ್ಯೋತಿ ಯಾದವ್ ಅವರೊಂದಿಗೆ ವಿವಾಹವಾಗಲಿದ್ದಾರೆ ಎಂದು ಪಕ್ಷದ ಮೂಲಗಳು ತಿಳಿಸಿವೆ.
ದಂಪತಿಗಳು ಇತ್ತೀಚೆಗೆ ನಿಶ್ಚಿತಾರ್ಥ ಮಾಡಿಕೊಂಡಿದ್ದಾರೆ. ರೂಪನಗರ ಜಿಲ್ಲೆಯ ಆನಂದಪುರ ಸಾಹಿಬ್ ಕ್ಷೇತ್ರದಿಂದ ಮೊದಲ ಬಾರಿಗೆ ಶಾಸಕರಾಗಿರುವ ಬೈನ್ಸ್ ಅವರು ಪ್ರಸ್ತುತ ಪಂಜಾಬ್​ ಮುಖ್ಯಮಂತ್ರಿ ಭಗವಂತ್ ಮಾನ್ ಅವರ ಸರ್ಕಾರದಲ್ಲಿ ಶಿಕ್ಷಣ ಸಚಿವರಾಗಿದ್ದಾರೆ.
ಪಂಜಾಬ್ ಅಸೆಂಬ್ಲಿ ಸ್ಪೀಕರ್ ಕುಲ್ತಾರ್ ಸಿಂಗ್ ಸಂಧ್ವನ್ ಅವರು “ಮುಂಬರುವ ದಿನಗಳಲ್ಲಿ ತಮ್ಮ ಜೀವನದ ಹೊಸ ಪ್ರಯಾಣವನ್ನು ಪ್ರಾರಂಭಿಸಲಿರುವ” ಬೈನ್ಸ್ ಮತ್ತು ಯಾದವ್ ಅವರನ್ನು ಅಭಿನಂದಿಸಿದ್ದಾರೆ.
ಇದನ್ನೂ ಓದಿ:ಅನ್ಯಾಯ ಸರಿಪಡಿಸಲು ಅವಕಾಶ: ಬಿಜೆಪಿ ಸೇರಿದ ಮಾಜಿ ಐಪಿಎಸ್ ಅಧಿಕಾರಿ ಭಾಸ್ಕರ್ ರಾವ್ ಹೇಳಿಕೆ
ವೃತ್ತಿಯಲ್ಲಿ ವಕೀಲರಾಗಿರುವ 32 ವರ್ಷದ ಹರ್ಜೋತ್ ಬೈನ್ಸ್, ಆನಂದಪುರ ಸಾಹಿಬ್‌ನ ಗಂಭೀರ್‌ಪುರ ಗ್ರಾಮದವರು. 2017ರ ಚುನಾವಣೆಯಲ್ಲಿ ಸಾಹ್ನೇವಾಲ್ ಕ್ಷೇತ್ರದಿಂದ ಸ್ಪರ್ಧಿಸಿ ಸೋತಿದ್ದರು. ಅದಷ್ಟೇ ಅಲ್ಲದೇ ಈ ಹಿಂದೆ ಬೈನ್ಸ್ ಈ ಹಿಂದೆ ರಾಜ್ಯದಲ್ಲಿ ಎಎಪಿಯ ಯುವ ಘಟಕವನ್ನು ಮುನ್ನಡೆಸಿದ್ದರು.
ಅವರು 2014ರಲ್ಲಿ ಚಂಡೀಗಢದ ಪಂಜಾಬ್ ವಿಶ್ವವಿದ್ಯಾನಿಲಯದಿಂದ ತಮ್ಮ BA LLB (ಹಾನರ್ಸ್) ಪೂರ್ಣಗೊಳಿಸಿದರು. ಅವರು 2018 ರಲ್ಲಿ ಲಂಡನ್ ಸ್ಕೂಲ್ ಆಫ್ ಎಕನಾಮಿಕ್ಸ್‌ನಿಂದ ಅಂತರರಾಷ್ಟ್ರೀಯ ಮಾನವ ಹಕ್ಕುಗಳ ಕಾನೂನಿನಲ್ಲಿ ಪ್ರಮಾಣಪತ್ರವನ್ನು ಗಳಿಸಿದರು.
ಐಪಿಎಸ್​ ಅಧಿಕಾರಿ ಜ್ಯೋತಿ ಯಾದವ್, ಪಂಜಾಬ್-ಕೇಡರ್ ಐಪಿಎಸ್ ಅಧಿಕಾರಿಯಾಗಿದ್ದು, ಪ್ರಸ್ತುತ ಮಾನ್ಸಾ ಜಿಲ್ಲೆಯಲ್ಲಿ ಪೊಲೀಸ್ ಸೂಪರಿಂಟೆಂಡೆಂಟ್ ಆಗಿ ನೇಮಕಗೊಂಡಿದ್ದಾರೆ.
ಇದನ್ನೂ ಓದಿ:ಬೀದಿಗೆ ಬಂದ ಲೇಡಿ ಐಪಿಎಸ್-ಐಎಎಸ್ ಜಗಳ: ರೋಹಿಣಿ ಸಿಂಧೂರಿ-ಡಿ.ರೂಪಾ ವಾಕ್ಸಮರ; ಇಲ್ಲಿದೆ ಪೂರ್ತಿ ವಿವರ
ಹರಿಯಾಣದ ಗುರುಗ್ರಾಮ್‌ನಿಂದ ಬಂದ ಜ್ಯೋತಿ ಯಾದವ್, ಕಳೆದ ವರ್ಷ ಆಪ್​ ಶಾಸಕ ರಾಜಿಂದರ್‌ಪಾಲ್ ಕೌರ್ ಅವರೊಂದಿಗೆ ಮಾಡಿದ್ದ ಸಾರ್ವಜನಿಕ ವಾಗ್ವಾದದ ನಂತರ ಜನರ ಗಮನಕ್ಕೆ ಬಿದ್ದಿದ್ದರು. ಐಪಿಎಸ್ ಅಧಿಕಾರಿಯು ತನಗೆ ಮಾಹಿತಿ ನೀಡದೆ ತನ್ನ ವಿಧಾನಸಭಾ ಪ್ರದೇಶದಲ್ಲಿ ಶೋಧ ಕಾರ್ಯಾಚರಣೆ ನಡೆಸಿದ್ದಾರೆ ಎಂದು ಆಪ್​ ಶಾಸಕ ರಾಜಿಂದರ್‌ಪಾಲ್ ಕೌರ್ ಆರೋಪಿಸಿದ್ದರು.(ಏಜೆನ್ಸೀಸ್)
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
Sign in to your account
Please enter an answer in digits:six + five =
Remember me
