ಚಂಡೀಘರ್​:ಬೇಸಿಗೆಯಲ್ಲಿ ಕರೆಂಟ್​ ಲೋಡ್​ ತಗ್ಗಿಸಲು ಮುಂದಾಗಿರುವ ಪ,ಂಜಾಬ್​ ಸರ್ಕಾರವು ಹೊಸ ನಿಯಮ ಒಂದನ್ನು ಜಾರಿಗೆ ತಂದಿದೆ.
ಮೇ 2ರಿಂದ ಜಾರಿಗೆ ಬರುವಂತೆ ಪಂಜಾಬ್​ನಲ್ಲಿ ಇರುವ ಸರ್ಕಾರಿ ಕಚೇರಿಗಳು ಬೆಳಗ್ಗೆ 7:30ರಿಂದ ಮಧ್ಯಾಹ್ನ 2:00 ಘಂಟೆ ವರೆಗೂ ಕಾರ್ಯ ನಿರ್ವಹಿಸಲಿದೆ ಎಂದು ಮುಖ್ಯಮಂತ್ರಿ ಭಗವಂತ್​ ಮಾನ್​ ತಿಳಿಸಿದ್ದಾರೆ.
ಈ ಕುರಿತು ವಿಡಿಯೋ ಹೇಳಿಕೆಯನ್ನು ಬಿಡುಗಡೆ ಮಾಡಿರುವ ಮಾನ್​ ಪಂಜಾಬ್​ ಜನತೆಗಾಗಿ ಹೊಸ ನಿರ್ಧಾರವನ್ನು ತೆಗೆದುಕೊಳ್ಳಲಾಗಿದ್ದು ದೇಶದಲ್ಲೇ ಪ್ರಪಥಮ ಬಾರಿಗೆ ಜಾರಿಗೆ ತರಲಾಗುತ್ತಿದೆ.
ਪੰਜਾਬ ਦੇ ਲੋਕਾਂ ਲਈ ਇੱਕ ਵੱਡਾ ਫੈਸਲਾ ਲਿਆ ਹੈ ਜੋ ਤੁਹਾਡੇ ਨਾਲ ਸਾਂਝਾ ਕਰ ਰਿਹਾ ਹਾਂ… ਸਰਕਾਰੀ ਦਫ਼ਤਰਾਂ ਦੇ ਸਮੇਂ 'ਚ ਤਬਦੀਲੀ…ਦੇਸ਼ 'ਚ ਪਹਿਲੀ ਵਾਰ ਇਹ ਫਾਰਮੂਲਾ ਲਾਗੂ ਹੋਵੇਗਾ…Livehttps://t.co/jCEkRsHjHj
ಇದನ್ನು ಓದಿ:ಕೇಂದ್ರ ಕಾನೂನು ಸಚಿವರ ಕಾರಿಗೆ ಗುದ್ದಿದ ಟ್ರಕ್​; ಪ್ರಾಣಾಪಾಯದಿಂದ ಪಾರು
ಮೇ 2ರಿಂದ ಜಾರಿಗೆ ಬರುವಂತೆ ಸರ್ಕಾರಿ ಕಚೇರಿಗಳು ಬೆಳಗ್ಗೆ 7:30 ರಿಂದ ಮಧ್ಯಾಹ್ನ 2:00 ಘಂಟೆ ಜೂನ್​ 15ರವರೆಗೂ ವರೆಗೂ ಕಾರ್ಯ ನಿರ್ವಹಿಸಲಿವೆ. ಬೇಸಿಗೆಯಲ್ಲಿ ತೊಂದರೆಯಾಗದಿರಲಿ ಎಂಬ ಕಾರಣಕ್ಕೆ ಈ ನಿರ್ಧಾರವನ್ನು ಕೈಗೊಳ್ಳಲಾಗಿದೆ ಎಂದು ತಿಳಿಸಿದ್ದಾರೆ.
ಪಂಜಾಬ್​ನಲ್ಲಿ ಮಧ್ಯಾಹ್ನ 1 ರಿಂದ ಸಂಜೆ 5 ಘಂಟೆ ವರೆಗು ಬಿಸಿಲು ಹೆಚ್ಚಾಗುವುದರಿಂದ ಈ ವೇಳೆಯಲ್ಲಿ ಸರ್ಕಾರಿ ಕಚೇರಿಗಳು ಕಾರ್ಯ ನಿರ್ವಹಿಸಿದರೆ ಕರೆಂಟ್​ ಲೋಡ್​ ಹೆಚ್ಚಾಗುತ್ತದೆ. ಕಚೇರಿ ಸಮಯ ಬದಲಾವಣೆ ಇಂದ ಕರೆಂಟ್​ ಮೇಲಿನ ಲೋಡ್​ ತಗ್ಗುತ್ತದೆ ಎಂದು ಮುಖ್ಯಮಂತ್ರಿ ಭಗವಂತ್​ ಮಾನ್​ ಹೇಳಿದ್ದಾರೆ.
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
Sign in to your account
Please enter an answer in digits:four × four =
Remember me
