ಚಂಡೀಗಢ:ಕಲಬೆರಕೆ ಸಾರಾಯಿ ಕುಡಿದು 21 ಮಂದಿ ದಾರುಣ ಸಾವು ಕಂಡ ಘಟನೆ ಪಂಜಾಬ್​ ಹಾಡಿ ಸಂಗ್ರೂರ್​​ನಲ್ಲಿ ನಡೆದಿದೆ. ಎಥೆನಾಲ್ ಇರುವ ಮದ್ಯ ಸೇವಿಸಿದ್ದರಿಂದ ಈ ದುಷ್ಕೃತ್ಯ ನಡೆದಿದೆ ಎನ್ನಲಾಗಿದೆ.
ಇದನ್ನೂ ಓದಿ:ದರೋಡೆಕೋರರು ಎಂದು ಸ್ನೇಹಿತರಿಬ್ಬರ ಕೊಲೆ: ನಾಲ್ವರು ಅರೆಸ್ಟ್​
ಇನ್ನೂ 40 ಮಂದಿ ಆಸ್ಪತ್ರೆಯಲ್ಲಿ ಜೀವನ್ಮರಣ ಹೋರಾಟ ನಡೆಸುತ್ತಿದ್ದಾರೆ. ಘಟನೆಯ ತನಿಖೆಗಾಗಿ ಪಂಜಾಬ್ ಸರ್ಕಾರ ವಿಶೇಷ ತನಿಖಾ ತಂಡವನ್ನು ರಚಿಸಿದೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಇದುವರೆಗೆ ಆರು ಮಂದಿಯನ್ನು ಬಂಧಿಸಲಾಗಿದೆ.
ಬುಧವಾರ (ಮಾ.20) ರಂದು ಪಂಜಾಬ್‌ನ ಹಾಡಿ ಸಂಗ್ರೂರ್ ಜಿಲ್ಲೆಯ ಹಲವು ಗ್ರಾಮಗಳಿಗೆ ಸೇರಿದ ಜನರು ಮದ್ಯ ಸೇವಿಸಿದ್ದಾರೆ. ಪರಿಣಾಮ ಒಂದೇ ದಿನ ನಾಲ್ವರು ಸಾವನ್ನಪ್ಪಿದ್ದಾರೆ. ಪಟಿಯಾಲಾದ ರಾಜೀಂದ್ರ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾಗ ಮರುದಿನ ಇನ್ನೂ ನಾಲ್ವರು ಮೃತಪಟ್ಟಿದ್ದಾರೆ.
ಶುಕ್ರವಾರ (ಮಾರ್ಚ್ 22) ಎಂಟು ಜನರು ಸಾವನ್ನಪ್ಪಿದ್ದಾರೆ. ಶನಿವಾರ (ಮಾರ್ಚ್ 23), ಐವರು ಮೃತಪಟ್ಟಿದ್ದಾರೆ. ಒಟ್ಟು ಸಾವಿನ ಸಂಖ್ಯೆ 21 ಕ್ಕೆ ತಲುಪಿದೆ. ಇದುವರೆಗೆ ಸುಮಾರು 40 ಮಂದಿ ತೀವ್ರ ಅಸ್ವಸ್ಥರಾಗಿದ್ದು, ಕೆಲವರ ಸ್ಥಿತಿ ಚಿಂತಾಜನಕವಾಗಿದೆ. ಸಂತ್ರಸ್ತರೆಲ್ಲರೂ ದಿನಗೂಲಿ ಕಾರ್ಮಿಕರು. ಈ ಘಟನೆಗೆ ಮದ್ಯದಲ್ಲಿ ಮೆಥನಾಲ್ ಅಂಶ ಮಿಶ್ರಣವಾಗಿದ್ದರಿಂದ ಸಾವಿಗೆ ಕಾರಣವಾಯಿತು ಎಂಬುದು ಪೊಲೀಸರ ತನಿಖೆಯಿಂದ ತಿಳಿದುಬಂದಿದೆ.
ಘಟನೆಯ ತನಿಖೆಗಾಗಿ ಪಂಜಾಬ್ ಸರ್ಕಾರ ವಿಶೇಷ ತನಿಖಾ ತಂಡವನ್ನು (ಎಸ್‌ಐಟಿ) ರಚಿಸಿದೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಇದುವರೆಗೆ ಆರು ಮಂದಿಯನ್ನು ಬಂಧಿಸಲಾಗಿದೆ. ಬಂಧಿತ ಆರೋಪಿಗಳು ತನಿಖೆ ವೇಳೆ ಆಘಾತಕಾರಿ ಸಂಗತಿಗಳನ್ನು ಬಹಿರಂಗಪಡಿಸಿದ್ದಾರೆ.
ಮನೆಯೊಂದರಲ್ಲಿ ಕಲಬೆರಕೆ ಮದ್ಯ ತಯಾರಿಸಲಾಗುತ್ತಿದೆ ಎಂದು ಪೊಲೀಸರಿಗೆ ಮಾಹಿತಿ ಸಿಕ್ಕಿತ್ತು. ತಕ್ಷಣ ಪೊಲೀಸರು ಮನೆಯ ಮೇಲೆ ದಾಳಿ ನಡೆಸಿ 200 ಲೀಟರ್ ಎಥೆನಾಲ್, ವಿಷಕಾರಿ ರಾಸಾಯನಿಕ ವಶಪಡಿಸಿಕೊಂಡಿದ್ದಾರೆ. ತನಿಖೆ ಮುಂದುವರಿದಿದ್ದು, ಅಪರಾಧಿಗಳಿಗೆ ಕಠಿಣ ಶಿಕ್ಷೆ ವಿಧಿಸಲಾಗುವುದು ಎಂದು ಉಪ ಪೊಲೀಸ್ ಮಹಾನಿರೀಕ್ಷಕ ಹರ್ಚರಣ್ ಸಿಂಗ್ ಭುಲ್ಲರ್ ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ದರೋಡೆಕೋರರು ಎಂದು ಸ್ನೇಹಿತರಿಬ್ಬರ ಕೊಲೆ: ನಾಲ್ವರು ಅರೆಸ್ಟ್​

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:12 − one =
Remember me
