ಚಂಡಿಗಢ:ಆಘಾತಕಾರಿ ಘಟನೆಯೊಂದರಲ್ಲಿ, ಪಂಜಾಬ್​ನ ಫಿರೋಜ್‌ಪುರದ ಗುರುದ್ವಾರ ಅಕಲಗಢ ಸಾಹಿಬ್ ಪ್ರದೇಶದಲ್ಲಿ ಕಾರಿನಲ್ಲಿ ಪ್ರಯಾಣಿಸುತ್ತಿದ್ದವರ ಐವರ ಮೇಲೆ ದ್ವಿಚಕ್ರವಾಹನಗಳಲ್ಲಿ ಬಂದ ಆರು ಮಂದಿ ದುಷ್ಕರ್ಮಿಗಳು ಗುಂಡಿನ ದಾಳಿ ನಡೆಸಿದ್ದಾರೆ.
ಇದನ್ನೂ ಓದಿ:ಆರ್‌ಎಸ್‌ಎಸ್, ಬಿಜೆಪಿಯವರನ್ನು ಬಸ್ಕಿ ಹೊಡೆಯುವಂತೆ ಮಾಡಿ ಜಾತಿ ಗಣತಿ ಮಾಡಿಸುತ್ತೇವೆ: ಲಾಲು ಪ್ರಸಾದ್ ಯಾದವ್
ಈ ಘಟನೆಯಲ್ಲಿ ಕಾರಿನಲ್ಲಿದ್ದ ಯುವತಿ ಸೇರಿದಂತೆ ಮೂವರು ಸ್ಥಳದಲ್ಲೇ ಮೃತಪಟ್ಟಿದ್ದು, ಇಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಕಾರಿನಲ್ಲಿ ಐವರು ಪ್ರಯಾಣಿಸುತ್ತಿದ್ದಾಗ ಎರಡು ದ್ವಿಚಕ್ರವಾಹನಗಳಲ್ಲಿ ಬಂದ ಆರು ಮಂದಿ ದುಷ್ಕರ್ಮಿಗಳು ಅವರನ್ನು ಸುತ್ತುವರೆದು ಗುಂಡಿನ ದಾಳಿ ನಡೆಸಿ ಪರಾರಿಯಾಗಿದ್ದಾರೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.
ಮೃತ ಯುವತಿಗೆ ಮದುವೆ ನಿಶ್ಚಯವಾಗಿತ್ತು, ಹಾಗಾಗಿ ಹೊಸ ಉಡುಪುಗಳು ಸೇರಿದಂತೆ ಅಗತ್ಯ ವಸ್ತುಗಳನ್ನು ಖರೀದಿಸಲು ತೆರಳುತ್ತಿದ್ದರು ಎಂದು ಅಧಿಕಾರಿಗಳು ಹೇಳಿದ್ದಾರೆ.
ಮೃತ ಯುವತಿಯನ್ನು ಜಸ್ಪ್ರೀತ್ ಕೌರ್ (22), ಆಕೆಯ ಸಹೋದರ ಆಕಾಶದೀಪ್ ಸಿಂಗ್ (21) ಆಕೆಯ ತಂದೆ ದಿಲ್​ ಪ್ರೀತ್ ಸಿಂಗ್ (32) ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಗಾಯಳುಗಳನ್ನು ಕಾಂಬೋಜ್​ ನಗರದ ನಿವಾಸಿಗಳಾದ ಅನ್ಮೋಲ್ ಸಿಂಗ್ ಮತ್ತು ಹರ್ಪ್ರೀತ್ ಸಿಂಗ್ ಎಂದು ಗುರುತಿಸಲಾಗಿದೆ.ಇದು ತ್ರಿವಳಿ ಕೊಲೆಯಾಗಿದ್ದು, ನಾವು ಪ್ರಕರಣದ ತನಿಖೆ ನಡೆಸುತ್ತಿದ್ದೇವೆ. ಮೃತ ದಿಲ್​ಪ್ರೀತ್ ಸಿಂಗ್ ಅಪರಾಧ ಹಿನ್ನೆಲೆಯನ್ನು ಹೊಂದಿದ್ದಾರೆ ಎಂದು ಫಿರೋಜ್​ಪುರದ ಡಿಐಜಿ ಅಜಯ್ ಮಲುಜಾ ತಿಳಿಸಿದ್ದಾರೆ. ಅಲ್ಲದೆ ಸಿಸಿಟಿವಿ ದೃಶ್ಯಾವಳಿಗಳನ್ನು ಆಧರಿಸಿ ಆರು ಮಂದಿ ಆರೋಪಿಗಳ ಗುರುತು ಪತ್ತೆಹಚ್ಚಲಾಗಿದೆ.
ಪ್ರಕರಣದ ತನಿಖೆ ಹಂತದಲ್ಲಿರುವುದರಿಂದ ಹೆಚ್ಚಿನ ಮಾಹಿತಿಯನ್ನು ಬಹಿರಂಗಪಡಿಸಲು ಸಾಧ್ಯವಿಲ್ಲ ಎಂದು ಅಜಯ್ ತಿಳಿಸಿದ್ದಾರೆ.
ಹಗರಣಗಳಿಂದಾಗಿ ಕೋಮಾಗೆ ಹೋದ ಕಾಂಗ್ರೆಸ್‌ ಸರ್ಕಾರದ ಮೇಲೆ ಜನರಿಗೂ ಮೇಲೆ ನಂಬಿಕೆ ಇಲ್ಲ: ಆರ್‌.ಅಶೋಕ್

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:four × three =
Remember me
