ಚಂಢೀಗಢ:ಅವಧಿ ಮೀರಿದ ಚಾಕಲೇಟ್ ಸೇವಿಸಿ ಪುಟ್ಟ ಮಗುವೊಂದು ರಕ್ತ ವಾಂತಿ ಮಾಡಿಕೊಂಡು ಅಸ್ವಸ್ಥಗೊಂಡಿರುವ ಘಟನೆ ಪಂಜಾಬ್​ನ ಪಟಿಯಾಲದಲ್ಲಿ ನಡೆದಿದೆ.
ಇದನ್ನೂ ಓದಿ:ತಿಹಾರ್‌ ಜೈಲಿನಲ್ಲಿ ಅರವಿಂದ ಕೇಜ್ರಿವಾಲ್​​ರನ್ನು ನಿಧಾನಗತಿ ಸಾವಿನತ್ತ ತಳ್ಳಲಾಗ್ತಿದೆ: ಎಎಪಿ ಆರೋಪ
ಲೂಧಿಯಾನ ಮೂಲದ ಬಾಲಕಿ ತನ್ನ ಪೋಷಕರೊಂದಿಗೆ ಪಟಿಯಾಲಕ್ಕೆ ಸಂಬಂಧಿಕರ ಮನೆಗೆ ಹೋಗಿದ್ದಳು. ಈ ವೇಳೆ ಸಂಬಂಧಿ ವಿಕ್ಕಿ ಗೆಹ್ಲೋಟ್, ಸ್ಥಳೀಯ ಕಿರಾಣಿ ಅಂಗಡಿಯಿಂದ ಬಾಲಕಿಗೆ ಚಾಕ್ಲೇಟ್‌ ಬಾಕ್ಸ್ ಖರೀದಿಸಿದ್ದರು. ಬಳಿಕ ಅದನ್ನು ಬಾಲಕಿಗೆ ನೀಡಿದ್ದರು.
ಮನೆಗೆ ಮರಳಿದ ಬಳಿಕ ಚಾಕಲೇಟ್ ಸೇವಿಸಿದ ಬಾಲಕಿ ಬಾಯಿಂದ ರಕ್ತಸ್ರಾವವಾಗತೊಡಗಿದೆ. ಅಲ್ಲದೇ ಆಕೆಯ ಸ್ಥಿತಿ ಹದಗೆಟ್ಟಿದ್ದರಿಂದ ಆಕೆಯನ್ನು ಕ್ರಿಶ್ಚಿಯನ್ ಮೆಡಿಕಲ್ ಕಾಲೇಜಿಗೆ ದಾಖಲಿಸಲಾಯಿತು. ಬಾಲಕಿಯ ವೈದ್ಯಕೀಯ ಪರೀಕ್ಷೆಯಲ್ಲಿ ವಿಷಕಾರಿ ಪದಾರ್ಥ ಸೇವಿಸಿ ಅಸ್ವಸ್ಥಳಾಗಿರುವುದು ದೃಢಪಟ್ಟಿದೆ.
ಈ ಸಂಬಂಧ ಬಾಲಕಿಯ ಕುಟುಂಸ್ಥರು ಪೊಲೀಸ್ ಹಾಗೂ ರಾಜ್ಯ ಆರೋಗ್ಯ ಇಲಾಖೆಗೆ ದೂರು ನೀಡಿದ್ದಾರೆ. ಆರೋಗ್ಯ ಅಧಿಕಾರಿಗಳ ತಂಡ ದೂರುದಾರರೊಂದಿಗೆ ಕಿರಾಣಿ ಅಂಗಡಿಗೆ ಧಾವಿಸಿ ಮಾದರಿಗಳನ್ನು ಸಂಗ್ರಹಿಸಿದರು. ಅಂಗಡಿಯಲ್ಲಿ ಅವಧಿ ಮೀರಿದ ತಿನಿಸುಗಳನ್ನು ಮಾರಾಟ ಮಾಡಿರುವುದನ್ನು ಆರೋಗ್ಯ ಇಲಾಖೆ ದೃಢಪಡಿಸಿದೆ. ಅಂಗಡಿಯಿಂದ ಅವಧಿ ಮೀರಿದ ಇತರೆ ತಿಂಡಿಗಳನ್ನು ವಶಪಡಿಸಿಕೊಳ್ಳಲಾಗಿದೆ. ಈ ಬಗ್ಗೆ ತನಿಖೆ ನಡೆಯುತ್ತಿದೆ.
ಬೆಂಗಳೂರಿನಲ್ಲಿ ಭದ್ರತಾ ಲೋಪ: ಮೋದಿಗೆ ಚೊಂಬು ಪ್ರದರ್ಶಿಸಲು ಬಂದ ನಲಪಾಡ್​

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:1 × two =
Remember me
