ಚಂಡೀಗಢ(ಪಂಜಾಬ್):ಪುತ್ರ ಯುವತಿಯೊಂದಿಗೆ ಓಡಿಹೋಗಿ ಮದುವೆಯಾದನೆಂಬ ಕಾರಣಕ್ಕೆ 55ವರ್ಷದ ತಾಯಿಯನ್ನು ಅರೆಬೆತ್ತಲೆಯಾಗಿ ಮೆರವಣಿಗೆ ನಡೆಸಿದ ಘಟನೆ ತಾರ್ನ್ ತರಣ್ ಜಿಲ್ಲೆಯಲ್ಲಿ ನಡೆದಿದ್ದು, ಪೊಲೀಸರು ಈ ಸಂಬಂಧ ಮೂವರನ್ನು ಬಂಧಿಸಲಾಗಿದೆ.
ಮಹಿಳೆಯನ್ನು ಅರೆಬೆತ್ತಲೆ ಸ್ಥಿತಿಯಲ್ಲಿ ತೋರಿಸುವ ಘಟನೆಯ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿದೆ.
ಇದನ್ನೂ ಓದಿ:ಕಾಂಗ್ರೆಸ್ ಪ್ರಣಾಳಿಕೆ ಮೇಲಿದೆ ಮುಸ್ಲಿಂ ಲೀಗ್‌ ಮುದ್ರೆ, ಎಡಪಂಥೀಯರ ಪ್ರಾಬಲ್ಯ: ಪ್ರಧಾನಿ ಮೋದಿ
ಈ ಕುರಿತು ಮಾತನಾಡಿದ 55 ವರ್ಷದ ಸಂತ್ರಸ್ತೆ, ‘ನನ್ನ ಮಗ ಕಳೆದ ತಿಂಗಳು ಆ ಯುವತಿಯನ್ನು ಮದುವೆ ಆಗಿದ್ದ. ನನ್ನ ಸೊಸೆಯ ಕುಟುಂಬವು ಈ ಮದುವೆಯ ಬಗ್ಗೆ ಅಸಮಾಧಾನಗೊಂಡಿತ್ತು. ಅವರ ಕುಟುಂಬದವರಲ್ಲಿ ಐದು ಮಂದಿ ನಾನಿದ್ದ ಸ್ಥಳಕ್ಕೆ ಬಂದು ಥಳಿಸಿ ತನ್ನ ಬಟ್ಟೆಗಳನ್ನು ಹರಿದುಹಾಕಿದ್ದಾರೆ ಎಂದು ದೂರಿದ್ದಾರೆ. ಆಕೆಯನ್ನು ಅರೆಬೆತ್ತಲೆ ಸ್ಥಿತಿಯಲ್ಲಿ ವೀಡಿಯೊ ಮಾಡಿ ಸಾಮಾಜಿಕ ಮಾಧ್ಯಮದಲ್ಲಿ ಹಂಚಿಕೊಂಡಿದ್ದಾರೆ.
ಘಟನೆಯಲ್ಲಿ ಭಾಗಿಯಾಗಿರುವ ಎಲ್ಲಾ ಆರೋಪಿಗಳನ್ನು ಬಂಧಿಸಲು ಪೊಲೀಸರು ತಂಡಗಳನ್ನು ರಚಿಸಿದ್ದಾರೆ ಎಂದು ಹಿರಿಯ ಪೊಲೀಸ್ ವರಿಷ್ಠಾಧಿಕಾರಿ ಅಶ್ವಿನಿ ಕಪೂರ್ ತಿಳಿಸಿದ್ದಾರೆ. ಐವರು ಆರೋಪಿಗಳಲ್ಲಿ ಮೂವರನ್ನು ಬಂಧಿಸಲಾಗಿದ್ದು, ಇತರ ಇಬ್ಬರನ್ನು ಪತ್ತೆಹಚ್ಚುವ ಪ್ರಯತ್ನಗಳು ನಡೆಯುತ್ತಿವೆ.
ವೈರಲ್ ಆದ ವೀಡಿಯೊವನ್ನು ಸಾಮಾಜಿಕ ಮಾಧ್ಯಮ ಪ್ಲಾಟ್ಫಾರ್ಮ್‌ಗಳಿಂದ ತೆಗೆದುಹಾಕಲು ಕ್ರಮಗಳನ್ನು ತೆಗೆದುಕೊಳ್ಳಲಾಗುತ್ತಿದೆ. ಭಾರತೀಯ ದಂಡ ಸಂಹಿತೆಯ ಸೆಕ್ಷನ್ 354 (ಮಹಿಳೆಯ ಗೌರವಕ್ಕೆ ಧಕ್ಕೆ ತರುವ ಉದ್ದೇಶದಿಂದ ಹಲ್ಲೆ ಅಥವಾ ಕ್ರಿಮಿನಲ್ ಬಲಪ್ರಯೋಗ), 354 ಬಿ (ಮಹಿಳೆಯ ಮೇಲೆ ಹಲ್ಲೆ ಅಥವಾ ಕ್ರಿಮಿನಲ್ ಬಲವನ್ನು ಬಳಸುವುದು), 354 ಡಿ (ಹಿಂಬಾಲಿಸುವುದು), 323 (ಸ್ವಯಂಪ್ರೇರಿತವಾಗಿ ನೋವುಂಟು ಮಾಡುವುದು) ಮತ್ತು 149 (ಕಾನೂನುಬಾಹಿರ ಸಭೆ) ಅಡಿಯಲ್ಲಿ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.
ನಿಧಾನಗತಿಯ ಬ್ಯಾಟಿಂಗ್‌ಗೆ ಕೊನೆಗೂ ಪ್ರತಿಕ್ರಿಯಿಸಿದ ಕೊಹ್ಲಿ!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:3 × 3 =
Remember me
