ನವದೆಹಲಿ:3 ಕೃಷಿ ಕಾಯ್ದೆಗಳನ್ನು ವಿರೋಧಿಸಿ ನಿನ್ನೆ ನಡೆಸಿದ ಪ್ರತಿಭಟನೆ ಕೆಲವು ಕಡೆಗಳಲ್ಲಿ ಉಗ್ರರೂಪ ಪಡೆದಿತ್ತು. ರಾಜಕೀಯ ಪಕ್ಷಗಳ ಕಾರ್ಯಕರ್ತರು, ನಾಯಕರು ಬೀದಿಗಿಳಿದು ಅಸಮಾಧಾನ ವ್ಯಕ್ತಪಡಿಸಿದರು. ಅದರಲ್ಲೂ ಪಂಜಾಬ್​ ಮತ್ತು ಹರಿಯಾಣಗಳಲ್ಲಿ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿತ್ತು.
ಹಾಗೇ ದೆಹಲಿಯ ಇಂಡಿಯಾ ಗೇಟ್​ ಬಳಿ ಪ್ರತಿಭಟನಾಕಾರರು ಟ್ರ್ಯಾಕ್ಟರ್​ ಒಂದಕ್ಕೆ ಬೆಂಕಿಯಿಟ್ಟಿದ್ದು ಬಹುದೊಡ್ಡ ವಿವಾದಕ್ಕೆ ಕಾರಣವಾಗಿದೆ. ರಾಜಪಥ್​​ನ ಮಾನ್​ಸಿಂಗ್​ ಕ್ರಾಸ್​​ನಲ್ಲಿ ಹೋಗುತ್ತಿದ್ದ ಟ್ರ್ಯಾಕ್ಟರ್​​ನ್ನು ನಿಲ್ಲಿಸಿ, ಅದರಲ್ಲಿದ್ದವರನ್ನು ಕೆಳಗೆ ಇಳಿಸಿ ಅದಕ್ಕೆ ಬೆಂಕಿ ಹಚ್ಚಿದ್ದರು. ಈ ಘಟನೆಯನ್ನು ಇಂದು ಪ್ರಧಾನಿ ನರೇಂದ್ರ ಮೋದಿಯವರು ಉತ್ತರಾಖಂಡದ ಆರು ಬೃಹತ್ ಯೋಜನೆಗಳ ಉದ್ಘಾಟನೆಯ ವೇಳೆಯೂ ಪ್ರಸ್ತಾಪ ಮಾಡಿ, ಪ್ರತಿಪಕ್ಷಗಳ ವಿರುದ್ಧ ಕಿಡಿಕಾರಿದ್ದಾರೆ.ಇದನ್ನೂ ಓದಿ:ಹಾರ್ಟ್​ ಚೆಕಪ್​ಗೂ ಕರೊನಾ ಸೋಂಕಿನ ಭಯ.. ಹೃದಯ ಜೋಪಾನ…
ಈ ಕೃತ್ಯ ನಡೆಸಿದವರು ಯುವ ಕಾಂಗ್ರೆಸ್ ಕಾರ್ಯಕರ್ತರು ಎನ್ನಲಾಗಿತ್ತು. ಘಟನೆಗೆ ಸಂಬಂಧಪಟ್ಟಂತೆ ಐವರನ್ನು ಪೊಲೀಸರು ನಿನ್ನೆಯೇ ಬಂಧಿಸಿದ್ದರು. ಇಂದು ಯುವ ಕಾಂಗ್ರೆಸ್​​ನ ಪಂಜಾಬ್​ ಮುಖ್ಯಸ್ಥ ಬ್ರೈಂಡರ್ ಧಿಲ್ಲಾನ್​ರನ್ನು ಅರೆಸ್ಟ್​ ಮಾಡಿದ್ದಾರೆ.
ಘಟನೆಗೆ ಸಂಬಂಧಪಟ್ಟಂತೆ ಇದುವರೆಗೆ ಆರು ಮಂದಿಯನ್ನು ಬಂಧಿಸಲಾಗಿದ್ದು, 2 ವಾಹನಗಳನ್ನು ಜಪ್ತಿ ಮಾಡಿದ್ದಾಗಿ ಪೊಲೀಸರು ತಿಳಿಸಿದ್ದಾರೆ. (ಏಜೆನ್ಸೀಸ್​)
ಸೋಂಕಿತರ ಗುಣಪ್ರಮಾಣದಲ್ಲಿ ದಾಖಲೆ.. ಜಗತ್ತಿನಲ್ಲೇ ಭಾರತ ಅತ್ಯಧಿಕ..

ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
Sign in to your account
Please enter an answer in digits:16 − four =
Remember me
