ಡೆಹ್ರಾಡೂನ್ :ಉತ್ತರಾಖಂಡದ ಹೊಸ ಮುಖ್ಯಮಂತ್ರಿಯಾಗಿ ಬಿಜೆಪಿಯ ಖಾತಿಮ ಕ್ಷೇತ್ರದ ಶಾಸಕ ಪುಷ್ಕರ್​ ಸಿಂಗ್ ಧಾಮಿ ಅವರನ್ನು ನೇಮಿಸಲಾಗಿದೆ. ನಿನ್ನೆ ತೀರಥ್​ ಸಿಂಗ್ ರಾವತ್​ ಅವರು ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಿದ ಬೆನ್ನಲ್ಲೇ ಇಂದು ನಡೆದ ರಾಜ್ಯ ಶಾಸಕಾಂಗ ಪಕ್ಷದ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ.
ಪಿತ್ತೋರಗಡ ಮೂಲದ 45 ವರ್ಷದ ಪುಷ್ಕರ್​ ಸಿಂಗ್​ ಧಾಮಿ ಅವರು ನಾಲ್ಕು ತಿಂಗಳಲ್ಲಿ ಸಿಎಂ ಹುದ್ದೆಗೆ ಏರುತ್ತಿರುವ ಮೂರನೇ ವ್ಯಕ್ತಿಯಾಗಲಿದ್ದಾರೆ. ಉತ್ತರಾಖಂಡ ಬಿಜೆಪಿ ಸರ್ಕಾರದ ಸಿಎಂ ಆಗಿದ್ದ ತ್ರಿವೇಂದ್ರ ಸಿಂಗ್​ ರಾವತ್​ ಅವರ ಸ್ಥಾನಕ್ಕೆ ಮಾರ್ಚ್​ 10 ರಂದು ತೀರಥ್​ ಸಿಂಗ್ ರಾವತ್​ ಅವರನ್ನು ನೇಮಿಸಲಾಗಿತ್ತು. ತೀರಥ್​ ಸಿಂಗ್​ ನಿನ್ನೆ ರಾಜ್ಯಪಾಲರಾದ ಬೇಬಿ ರಾಣಿ ಮೌರ್ಯ ಅವರಿಗೆ ರಾಜೀನಾಮೆ ನೀಡಿದರು.
Bharatiya Janta Party names Pushkar Singh Dhami as the next Uttarakhand Chief Ministerpic.twitter.com/aqAHUNQB5u
— ANI (@ANI)July 3, 2021

ತೀರಥ್​ ಸಿಂಗ್ ರಾವತ್​ ಅವರು ಸಂಸದರಾಗಿದ್ದು, ಸಿಎಂ ಆದ ನಂತರ, ಶಾಸಕರಾಗಿ ಆಯ್ಕೆ ಆಗಲು ಸೆಪ್ಟೆಂಬರ್​ 10 ರವರೆಗೆ ಸಮಯವಿತ್ತು. ಕರೊನಾ ಹಿನ್ನೆಲೆಯಲ್ಲಿ ಯಾವುದೇ ಉಪಚುನಾವಣೆ ನಡೆಸಲಾಗದ ಕಾರಣಕ್ಕೆ ಸಾಂವಿಧಾನಿಕ ಬಿಕ್ಕಟ್ಟು ಉಂಟಾಗಬಹುದು ಎನ್ನಲಾಗಿತ್ತು. ರಾಜ್ಯದ ವಿಧಾನಸಭಾ ಚುನಾವಣೆಗಳು ಮುಂದಿನ ವರ್ಷ ನಡೆಯಲಿವೆ.
ಮುಖ್ಯಮಂತ್ರಿ ಸ್ಥಾನಕ್ಕೆ ಆಯ್ಕೆಯಾದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಪುಷ್ಕರ್​ ಸಿಂಗ್​ ಧಾಮಿ ಅವರು, “ನನ್ನ ಪಕ್ಷವು ಒಬ್ಬ ಸಾಮಾನ್ಯ ಕಾರ್ಯಕರ್ತನಾದ, ಮಾಜಿ ಸೈನಿಕನ ಮಗನಾದ ನನ್ನನ್ನು ರಾಜ್ಯದ ಸೇವೆ ಮಾಡಲು ನೇಮಿಸಿದೆ. ನಾವು ಜನರ ಕಲ್ಯಾಣಕ್ಕಾಗಿ ಒಟ್ಟಿಗೆ ಕೆಲಸ ಮಾಡುತ್ತೇವೆ. ಈ ಕಡಿಮೆ ಅವಧಿಯಲ್ಲಿ ಜನಸೇವೆ ಮಾಡುವ ಸವಾಲನ್ನು, ಇತರರ ಸಹಾಯದೊಂದಿಗೆ, ಸ್ವೀಕರಿಸುತ್ತೇನೆ” ಎಂದಿದ್ದಾರೆ.(ಏಜೆನ್ಸೀಸ್)
ಮಂಗಳ ಗ್ರಹದ ಮೇಲಿನ ರೋವರ್​ ಚಾಲಕಿ, ಭಾರತ ಮೂಲದ ಮಹಿಳೆ!

ಲಸಿಕೆ ಪಡೆಯಲು ಜನಜಂಗುಳಿ… ಪ್ರೊಟೊಕಾಲ್ ಮರೆತು ಪೈಪೋಟಿ!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:four × 3 =
Remember me
